ನಗರಸಭೆಗೆ ನವನಗರ ಹಸ್ತಾಂತರ ಬೇಡ

Team Udayavani, Feb 11, 2017, 3:11 PM IST

Z-7.gif

ಬಾಗಲಕೋಟೆ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಬಾಗಲಕೋಟೆ ನಗರದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ನವನಗರ ನಿರ್ಮಾಣಗೊಂಡಿದ್ದು, ನಿಯೋಜಿತ ಯೋಜನೆ ಪೂರ್ಣಗೊಳ್ಳುವರೆಗೂ ನವನಗರವನ್ನು ನಗರಸಭೆಗೆ ಹಸ್ತಾಂತರಿಸಬಾರದು ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಒತ್ತಾಯಿಸಿದರು.  

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವನಗರ ಸಧ್ಯ ಬಿಟಿಡಿಎ ಅಧೀನದಲ್ಲಿದ್ದು, ಅದು ಅಲ್ಲಿಯೇ ಮುಂದುವರಿಯಬೇಕು. ಅಲ್ಲದೇ ಮುಳುಗಡೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ 527 ಮೀಟರ್‌ವರೆಗೆ ಮುಳುಗಡೆ ಘೋಷಣೆಗೆ ಆಡಳಿತಾತ್ಮಕ ಅನುಮೋದನೆ ಕೊಡಲಾಗಿತ್ತು.

ಆದರೆ ಕಾಂಗ್ರೆಸ್‌ ಸರ್ಕಾರ ಅದನ್ನು 525 ಮೀಟರ್‌ಗೆ ಇಳಿಸಿದೆ. ಮುಂದೆ ನೀರಿನ ಪಕ್ಕದಲ್ಲೇ ಜನರು ವಾಸ ಮಾಡುವ ಪರಿಸ್ಥಿತಿ ಬರಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ಸರ್ಕಾರಕ್ಕೆ ಬದ್ಧತೆ ಇಲ್ಲ ಎಂದು ಟೀಕಿಸಿದರು. 

ಯೋಜನೆ ಪೂರ್ಣ: ಕೃಷ್ಣಾ ಮೇಲ್ದಂಡೆ ಯೋಜನೆಯ ಎಲ್ಲ ನೀರಾವರಿ ಯೋಜನೆಗಳನ್ನು ಐದು ವರ್ಷದಲ್ಲಿ ಪೂರ್ಣಗೊಳಿಸುವ ಜತೆಗೆ ಈ ಭಾಗದ ಯೋಜನೆಗಳಿಗೆ ಪ್ರತಿವರ್ಷ 10 ಸಾವಿರ ಕೋಟಿ ನೀಡುವುದಾಗಿ ಕಾಂಗ್ರೆಸ್‌ ನವರು ಪಾದಯಾತ್ರೆ ಮಾಡಿ, ಕೃಷ್ಣೆಯ ಮೇಲೆ ಆಣೆ ಪ್ರಮಾಣ ಮಾಡಿದ್ದರು. ಆದರೆ ಈವರೆಗೆ ಯೋಜನೆಗಳು ಪೂರ್ಣಗೊಂಡಿಲ್ಲ.

ವಾರ್ಷಿಕ 10 ಸಾವಿರ ಕೋಟಿಯನ್ನೂ ಕೊಟ್ಟಿಲ್ಲ ಎಂದು ಆರೋಪಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ, ಈ ಭಾಗದ ನೀರಾವರಿ ಯೋಜನೆಗಳನ್ನು ಬದ್ಧತೆ ಮೇಲೆ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು. ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ, ನಾರಾಯಣಸಾ ಬಾಂಡಗೆ,  

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹಾಂತೇಶ ಮಮದಾಪುರ, ರಾಜು ರೇವಣಕರ, ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನಿ, ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ| ಮಾರುತೇಶ ಆರ್‌ (ಲವಳಸರ), ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಗ್ರಾಮೀಣ ಘಟಕದ ಅಧ್ಯಕ್ಷ ರಾಜು ಮುದೇನೂರ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.