ಪಾರ್ವತಮ್ಮ ಆರೋಗ್ಯ ಸ್ಥಿತಿ ಗಂಭೀರ; ಸುಳ್ಳು ಸುದ್ದಿ ಹಬ್ಬಿಸಬೇಡಿ
Team Udayavani, May 18, 2017, 5:12 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ,ದಿ. ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏತನ್ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಡಾ.ಶಿವರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರು, ವೈದ್ಯರ ತಂಡ ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಊಹಾಪೋಹಕ್ಕೆ ತೆರೆ ಎಳೆದು ಸ್ಪಷ್ಟನೆ ನೀಡಿದೆ.
ಪಾರ್ವತಮ್ಮ ರಾಜ್ ಕುಮಾರ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದ್ದು, ಮುಂದಿನ 48ಗಂಟೆಗಳ ಕಾಲ ನಿಗಾವಹಿಸಲಾಗುತ್ತದೆ. ಬಳಿಕ ಚಿಕಿತ್ಸೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಆದರೆ ಪಾರ್ವತಮ್ಮನವರ ಅನಾರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂಬ ಮಾಹಿತಿ ಬಂದಿದೆ. ಹಾಗಾಗಿ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಪುತ್ರ, ನಟ ಶಿವರಾಜ್ ಕುಮಾರ್ ತಿಳಿಸಿದರು.
ಅವರು ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗಂತ ನಮಗೂ ಭಯ ಇದೆ. ಆದರೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಯಾರು ಆತಂಕ, ಗಾಬರಿಪಡಬೇಕಾದ ಅಗತ್ಯವಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ರಾಘವೇಂದ್ರ ರಾಜ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್