ವಾಣಿಜ್ಯ ಮಂಡಳಿ ಚುನಾವಣೆ ಜೂನ್‌ 16ಕ್ಕೆ ತೀರ್ಮಾನ


Team Udayavani, May 27, 2017, 11:55 AM IST

sa-ra-govindu.jpg

ಅಂತೂ ಇಂತೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಸಬೇಕೋ ಬೇಡವೋ ಎಂಬ ತೀರ್ಮಾನ, ಜೂನ್‌ 16 ಕ್ಕೆ ಹೊರ ಬೀಳಲಿದೆ. ಈ ಕುರಿತಂತೆ ಶುಕ್ರವಾರ ನಡೆದ ಧರಣಿ ಹಾಗೂ ಸಭೆಯಲ್ಲಿ ಸ್ವತಃ ಅಧ್ಯಕ್ಷರೇ, ಜೂನ್‌ 16 ರಂದು ಸರ್ವಸದಸ್ಯರ ಸಭೆ ಕರೆದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂಬುದಾಗಿ ಹೇಳಿದ್ದಾರೆ. ಹಾಗಾದರೆ, ಧರಣಿ ಹಾಗೂ ಸಭೆಯಲ್ಲಿ ನಡೆದದ್ದೇನು ಎಂಬ ಸಣ್ಣ ವರದಿ ಇದು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ಆಡಳಿತ ಮಂಡಳಿಯನ್ನು, ಮುಂದಿನ ಒಂದು ವರ್ಷದ ಕಾಲ ಮುಂದುವರೆಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಮಂಡಳಿ ಎದುರು ಧರಣಿ ನಡೆಸಲಾಯಿತು. ಇದೇ ವೇಳೆ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು, ಅನೇಕ ನಿರ್ಮಾಪಕರು, ವಿತರಕರು ಹಾಗೂ ಪ್ರದರ್ಶಕರು ಇನ್ನೊಂದು ಅವಧಿಗೆ ನೀವೇ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಬೇಕು ಎಂದು ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರಿಗೆ ಮನವಿ ಪತ್ರವೊಂದನ್ನೂ ಸಲ್ಲಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮಂಡಳಿಯಲ್ಲಿ ಸಭೆಯೊಂದನ್ನು ನಡೆಸಲಾಯಿತು. ಸಭೆ ಬಳಿಕ ಮಾತನಾಡಿದ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, “ಸಾ.ರಾ.ಗೋವಿಂದು ಅವರು ಸಮರ್ಥ ಆಡಳಿತ ನೀಡಿದ್ದಾರೆ. ಯಾವುದೇ ಸಮಯಲ್ಲೂ ಚಿತ್ರರಂಗದ ಹಲವು ಸಮಸ್ಯೆಗಳನ್ನ ಸರಿಯಾದ ರೀತಿಯಲ್ಲಿ ಪರಿಹರಿಸಿದ್ದಾರೆ. ಅವರಂತಹ ನಾಯಕರು ನಮ್ಮ ಮಂಡಳಿ ಅಧ್ಯಕ್ಷರಾಗಿ ಇನ್ನೊಂದು ಅವಧಿಗೆ ಮುಂದುವರೆಯಲೇಬೇಕು. ಹೀಗಾಗಿ ಅವರು ನಮ್ಮ ಮನವಿಯನ್ನು ಆಲಿಸಿ, ಚುನಾವಣೆ ಮುಂದೂಡಬೇಕು ಎಂದರು.

ಇದೇ ಸಂದರ್ಭದಲ್ಲಿ ಚಿತ್ರರಂಗದ ಗಣ್ಯರ ಮನವಿ ಸ್ವೀಕರಿಸಿ ಮಾತನಾಡಿದ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, “ನನಗೆ ಅಧಿಕಾರದ ವ್ಯಾಮೋಹ ಇಲ್ಲ. ನಾನು ಕಳೆದ ಕಾರ್ಯಕಾರಿ ಸಮಿತಿಯಲ್ಲೇ ಚುನಾವಣೆ ಪ್ರಸ್ತಾಪ ಮುಂದಿಟ್ಟಿದ್ದೆ. ಆದರೆ, ಸಭೆಯಲ್ಲಿ ಎಲ್ಲರೂ ಇದನ್ನು ವಿರೋಧಿಸಿದ್ದರು. ನೀವೇ ಇನ್ನೊಂದು ಅವಧಿಗೆ ಮುಂದುವರೆಯಬೇಕು ಎಂದು ಒತ್ತಾಯಿಸಿದ್ದರು. ಅದರಂತೆ, ಜೂನ್‌ 16 ರಂದು ಸರ್ವ ಸದಸ್ಯರ ಸಭೆಯನ್ನು ಕರೆದಿದ್ದೇನೆ.

ಆ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ’ ಎಂದು ಅವರು ಸ್ಪಷ್ಟಪಡಿಸಿದರು. ಧರಣಿಯ ನೇತೃತ್ವವನ್ನು ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಅಶೋಕ್‌ ವಹಿಸಿದ್ದರು. ಈ ಸಂದರ್ಭದಲ್ಲಿ ಕೆ.ಮಂಜು, ನಟ ಜಗ್ಗೇಶ್‌, ಡಿ.ಕೆ.ರಾಮಕೃಷ್ಣ (ಪ್ರವೀಣ್‌), ವಿತರಕರಾದ ಕೆ.ಮಂಜು, ಎ.ಗಣೇಶ್‌, ಜಯಣ್ಣ, ಎಸ್‌.ವಿ.ಬಾಬು, ಕೆ.ಪಿ.ಶ್ರೀಕಾಂತ್‌, ಕೆ.ವಿ.ವೆಂಕಟೇಶ್‌ ಹಾಗೂ ಪ್ರದರ್ಶಕ ಕೆ.ಸಿ.ಅಶೋಕ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.