Updated at Tue,30th May, 2017 5:25PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ನ್ಯಾ. ಅಬ್ದುಲ್‌ ನಜೀರ್‌ಗೆ ಬೀಳ್ಕೊಡುಗೆ

ಬೆಂಗಳೂರು: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಯಾಗಿ ಪದನ್ನೋತಿ ಪಡೆದಿರುವ ನ್ಯಾ. ಎಸ್‌. ಅಬ್ದುಲ್‌ ನಜೀರ್‌ ಅವರಿಗೆ ಹೈಕೋರ್ಟ್‌ ಹಾಗೂ ಬೆಂಗಳೂರು ವಕೀಲರ ಸಂಘದಿಂದ ಗುರುವಾರ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. 

ಹೈಕೋರ್ಟ್‌ ಸಭಾಂಗಣದಲ್ಲಿ ಗುರುವಾರ ಮಧ್ಯಾಹ್ನ ಹೈಕೋರ್ಟ್‌ ಹಾಗೂ ಬೆಂಗಳೂರು ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ನ್ಯಾ. ಅಬ್ದುಲ್‌ ನಜೀರ್‌ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಹೈಕೋರ್ಟ್‌ ನ್ಯಾಯಮೂರ್ತಿಗಳ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಮಾತನಾಡಿ, "ಸ್ನೇಹಜೀವಿ, ಮೃದು ಸ್ವಭಾವ ಮತ್ತು ಮಿತಭಾಷಿ ಆಗಿರುವ ಅಬ್ದುಲ್‌ ನಜೀರ್‌ ಅವರು ತಮ್ಮ 14 ವರ್ಷಗಳ ಸುದೀರ್ಘ‌ ಸೇವಾವಧಿಯಲ್ಲಿ ಅನೇಕ ಉತ್ತಮ ತೀರ್ಪುಗಳನ್ನು ನೀಡಿದ್ದಾರೆ.

ಹೈಕೋರ್ಟ್‌ನ ಆಡಳಿತ ವಿಚಾರದಲ್ಲಿ ನನಗೆ ಸಂಪೂರ್ಣ ಸಹಕಾರ ನೀಡಿದ್ದಾರೆ,'' ಎಂದು ಹೇಳಿದರು. ಬೆಂಗಳೂರು ವಕೀಲರ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಎಚ್‌.ಸಿ. ಶಿವರಾಮು ಮಾತನಾಡಿ, "ಹೈಕೋರ್ಟ್‌ನಲ್ಲಿ ಉತ್ತಮ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ ಅಬ್ದುಲ್‌ ನಜೀರ್‌ ಅವರು ಸುಪ್ರೀಂಕೋರ್ಟ್‌ನಲ್ಲೂ ಉತ್ತಮ ಸೇವೆ ಸಲ್ಲಿಸಿ ನ್ಯಾಯಾಂಗ ಕ್ಷೇತ್ರ ಹಾಗೂ ಕರ್ನಾಟಕಕ್ಕೆ ಕೀರ್ತಿ ತರಲಿ,'' ಎಂದು ಹಾರೈಸಿದರು.

ಬೀಳ್ಕೊàಡುಗೆ ಸ್ವೀಕರಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ನ್ಯಾ. ಅಬ್ದುಲ್‌ ನಜೀರ್‌, ತಮ್ಮ ಏಳಿಗೆಗೆ ಕಾರಣರಾದವರನ್ನು ಸ್ಮರಿಸಿಕೊಂಡರು.


More News of your Interest

Trending videos

Back to Top