ಸವಾಲಾಗಿದೆ ಪ್ರಾಣಿಜನ್ಯ ತ್ಯಾ ಜ್ಯ


Team Udayavani, Apr 23, 2017, 12:20 PM IST

meat-waste.jpg

ಬೆಂಗಳೂರು: ಮನೆ, ಅಪಾರ್ಟ್‌ಮೆಂಟ್‌, ಹೋಟೆಲ್‌, ಮಾರುಕಟ್ಟೆ ಸೇರಿದಂತೆ ವಸತಿ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿಯೇ ಬಿಬಿಎಂಪಿಗೆ ತಲೆನೋವಾಗಿರು­ವಾಗ, ಅಪಾಯಕಾರಿ ಪ್ರಾಣಿಜನ್ಯ ತ್ಯಾಜ್ಯ ಮತ್ತು ಶೌಚ ತ್ಯಾಜ್ಯ ಪಾಲಿಕೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 

ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಪ್ರಾಣಿಜನ್ಯ ತ್ಯಾಜ್ಯ ಹಾಗೂ ಶೌಚತ್ಯಾಜ್ಯದ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ. ಇದು ಜನಸಾಮಾನ್ಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಆಘಾತಕಾರಿ ಸಂಗತಿ ಎಂದರೆ, ನಗರದಲ್ಲಿ ಮಾಂಸದ ಮಳಿಗೆಗಳ ತ್ಯಾಜ್ಯವನ್ನು ರಾತ್ರಿ ವೇಳೆ ರಾಜ ಕಾಲುವೆ, ಖಾಲಿ ನಿವೇಶನಗಳಲ್ಲಿ ಎಸೆದು ಹೋಗುತ್ತಿರುವುದರಿಂದ ತ್ಯಾಜ್ಯ ಕೊಳೆತು ವೈರಾಣು ಸೋಂಕು ಹರಡುವಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಪ್ರಾಣಿ ಜನ್ಯ ತ್ಯಾಜ್ಯ ಹಾಗೂ ಶೌಚ ತ್ಯಾಜ್ಯ ಸಮರ್ಪಕ ವಿಲೇವಾರಿ ವ್ಯವಸ್ಥೆ ಇಲ್ಲದಿರುವುದು.

ಸಾಮಾನ್ಯ ಹಸಿ – ಒಣ ತ್ಯಾಜ್ಯಕ್ಕಿಂತ ಪ್ರಾಣಿಜನ್ಯ ತ್ಯಾಜ್ಯ ಹಾಗೂ ಶೌಚತ್ಯಾಜ್ಯ ಹೆಚ್ಚು ಅಪಾಯಕಾರಿ. ಹಸಿ, ಒಣ ತಾಜ್ಯವನ್ನು ಒಂದೆರಡು ದಿನ ವಿಲೇವಾರಿ ಮಾಡದಿದ್ದರೂ ಹೆಚ್ಚಿನ ತೊಂದರೆಯಿಲ್ಲ. ಆದರೆ, ಪ್ರಾಣಿಜನ್ಯ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದಿದ್ದರೆ ಇಡೀ ಪರಿಸರ ಮಲೀನವಾಗುತ್ತದೆ ಎಂಬುದು ಆರೋಗ್ಯಾಧಿಕಾರಿಗಳ ಆತಂಕ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪರವಾನಗಿ ಪಡೆದ 1900 ಅಧಿಕೃತ ಮಾಂಸ ಮಾರಾಟ ಮಳಿಗೆಗಳಿವೆ. ಆದರೆ, ಅನುಮತಿ ಪಡೆಯದ ಮಳಿಗೆಗಳು ಒಂದು ಸಾವಿರಕ್ಕೂ ಹೆಚ್ಚಿವೆ. ಇವುಗಳಿಂದ ನಿತ್ಯ 100 ಟನ್‌ನಷ್ಟು ಪ್ರಾಣಿಜನ್ಯ ತಾಜ್ಯ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಬಹುಪಾಲು ತ್ಯಾಜ್ಯ ಅವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿದ್ದು, ಅನಧಿಕೃತ ಮಾಂಸ ಮಾರಾಟ ಮಳಿಗೆಗಳು ಪ್ರಾಣಿಜನ್ಯ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೇವಾರಿ ಮಾಡುತ್ತಿರುವುದು ಸಮಸ್ಯೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ. 

ಕಾಲುವೆ ಸೇರುತ್ತಿರುವ ತ್ಯಾಜ್ಯ: ನಗರದ ಬಹುತೇಕ ಕಡೆಗಳಲ್ಲಿ ಕೋಳಿ ಅಂಗಡಿಗಳ ತ್ಯಾಜ್ಯ ಮಳೆ ನೀರು ಹರಿಯುವ ರಾಜ ಕಾಲುವೆ ಸೇರುತ್ತಿದ್ದು, ಮಳಿಗೆದಾರರು ಪ್ಲಾಸ್ಟಿಕ್‌ ಚೀಲದಲ್ಲಿ ತ್ಯಾಜ್ಯ ತುಂಬಿ ರಾತ್ರಿ ವೇಳೆಯಲ್ಲಿ ಕಾಲುವೆ, ಖಾಲಿ ನಿವೇನಗಳಲ್ಲಿ ಎಸೆಯುತ್ತಿದ್ದಾರೆ. ಚೀಲದ ತುದಿ ಕಟ್ಟಿರುವುದರಿಂದ ತ್ಯಾಜ್ಯ ಅಲ್ಲೇ ಕೊಳೆತು ನಾಯಿ, ಹದ್ದುಗಳು ಮುತ್ತಿಕೊಂಡು ಎಳೆದಾಡುವ ದೃಶ್ಯಗಳು ಕೆಲವೆಡೆ ಸಾಮಾನ್ಯ. ಮಾಂಸದ ತ್ಯಾಜ್ಯ ಕಾಲುವೆಗಳಲ್ಲಿ ತುಂಬುವುದರಿಂದ ತ್ಯಾಜ್ಯ ಹೂಳು ತುಂಬಿ ಮಳೆ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಿಕೆಗೂ ಅಡ್ಡಿಯಾಗುತ್ತಿದೆ.

ನಿಯಮಾನುಸಾರ ಮಾಂಸದ ಮಳಿಗೆಗಳಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ಕೊಡಬೇಕು. ಈ ಬಗ್ಗೆ ಪರವಾನಗಿ ನೀಡುವಾಗಲೂ ಸಾಕಷ್ಟು ಷರತ್ತು ಹಾಕಲಾಗಿರುತ್ತದೆ. ಆದರೆ, ಅದ್ಯಾವುದೂ ಪಾಲನೆಯಾಗು­ತ್ತಿಲ್ಲ. ಪಾಲಿಕೆಯಲ್ಲಿ ನೋಂದಾಣಿಯಾಗದ ಮಾಂಸದ ಮಳಿಗೆಗ­ಳಿಂದ ಉತ್ಪತ್ತಿಯಾಗುವ ತ್ಯಾಜ್ಯವೆಲ್ಲಾ ಸಂಪೂರ್ಣ ಅವೈಜ್ಞಾನಿಕವಾಗಿ ವಿಲೇವಾರಿಯಾಗುತ್ತಿವೆ. ಪಾಲಿಕೆ ವತಿಯಿಂದ ಪ್ರಾಣಿಜನ್ಯ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದ್ದರೂ ಮಾಂಸ ಮಾರಾಟ ಮಳಿಗೆದಾರರು ಇದಕ್ಕೆ ಸ್ಪಂದಿಸುತ್ತಿಲ್ಲ. ಬಹುತೇಕ ಮಳಿಗೆಗಳು ಅನಧಿಕೃತವಾಗಿರುವುದರಿಂದ ಅಲ್ಲಿನ ತ್ಯಾಜ್ಯ ಪಾಲಿಕೆಗೆ ತಲುಪುತ್ತಿಲ್ಲ.

ನಾಯಿಗಳ ಹಾವಳಿ ಹೆಚ್ಚಳ: ಪ್ರಾಣಿಜನ್ಯ ತ್ಯಾಜ್ಯವನ್ನು ಸಾಮಾನ್ಯ ಕಸದೊಂದಿಗೆ ರಸ್ತೆಬದಿ, ಪಾದಚಾರಿ ಮಾರ್ಗಗಳಲ್ಲಿ ಎಸೆಯುತ್ತಿರುವುದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಮಾಂಸದ ಪೋಷಣೆಯಿಂದ ದಷ್ಟಪುಷ್ಟವಾಗಿರುವ ನಾಯಿಗಳು ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು, ದಾರಿಹೋಕರ ಮೇಲೆ ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚು ಎಂದು ಅಧಿಕಾರಿಗಳು ತಿಳಿಸುತ್ತಾರೆ.

ಶೌಚ ತ್ಯಾಜ್ಯದ ಗೊಡವೆ
ಪ್ರಾಣಿ ಜನ್ಯ ತ್ಯಾಜ್ಯದ ಜತೆಗೆ ಶೌಚ ತ್ಯಾಜ್ಯ ಸಹ ಪಾಲಿಕೆಗೆ ಸಮಸ್ಯೆಯಾಗಿದೆ. ಮನೆ, ಕ್ಲಿನಿಕ್‌, ಆಸ್ಪತ್ರೆ, ನರ್ಸಿಂಗ್‌ ಹೋಂಗಳಲ್ಲಿ ಶೌಚ ತ್ಯಾಜ್ಯದ ವಿಲೇವಾರಿ ಪ್ರತ್ಯೇಕವಾಗಿ ಆಗಬೇಕು. ಕೆಲವು ಆಸ್ಪತ್ರೆ ಹಾಗೂ ನರ್ಸಿಂಗ್‌ ಹೋಂಗಳು ಇಂತಹ ತ್ಯಾಜ್ಯದ ವಿಲೇವಾರಿಗೆ ತಮ್ಮದೇ ವ್ಯವಸ್ಥೆ ಮಾಡಿಕೊಂಡಿವೆ. ಆದರೆ, ಮನೆಗಳಲ್ಲಿ ಅಥವಾ ಸಣ್ಣಪುಟ್ಟ ಕ್ಲಿನಿಕ್‌, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯ ಸಾಮಾನ್ಯ ತ್ಯಾಜ್ಯದ ಜತೆ ರಸ್ತೆ ಸೇರುತ್ತಿದೆ. ಇದರಿಂದಾಗಿ ಕಸ ವಿಷವಾಗಿ ಪರಿಣಮಿಸುತ್ತಿದೆ. 

ಶೌಚತ್ಯಾಜ್ಯ (ಸ್ಯಾನಿಟರಿ) ಯಾವುದು?
ಬಟ್ಟೆಗಳಿಗೆ ದೇಹದ ಯಾವುದೇ ದ್ರವ ಪದಾರ್ಥ ಅಂಟಿಕೊಂಡಿದ್ದರೆ ಅವುಗಳನ್ನು ಶೌಚ (ಸ್ಯಾನಿಟರಿ) ತ್ಯಾಜ್ಯ ಎಂದು ಪರಿಗಣಿಸಲಾಗುತ್ತದೆ. ಬಟ್ಟೆಗಳು, ಪೇಯಿಂಟ್‌, ರಾಸಾಯನಿಕಗಳಿಂದ ಕೂಡಿದ್ದರೆ ಅವುಗಳನ್ನು ಅಪಾಯಕಾರಿ ಗೃಹ ತ್ಯಾಜ್ಯ ಎಂದು ವಿಂಗಡಿಸಿ ಪೌರಕಾರ್ಮಿಕರಿಗೆ ಪ್ರತ್ಯೇಕವಾಗಿ ನೀಡಬೇಕು. ಆದರೆ,  ಈ ಕೆಲಸ ಆಗುತ್ತಿಲ್ಲ. ಎಷ್ಟೇ ಜಾಗೃತಿ ಮೂಡಿಸಿದರೂ ಮನೆಗಳಿಂದ ಕಸ ಸಮರ್ಪಕವಾಗಿ ವಿಂಗಡಣೆಯಾ­ಗುತ್ತಿಲ್ಲ.

ಪಾಲಿಕೆಯಿಂದ ಪರವಾನಗಿ ನೀಡುವ ವೇಳೆ ಪ್ರಾಣಿಜನ್ಯ ತ್ಯಾಜ್ಯ ವಿಲೇವಾರಿಯ ಕುರಿತು ಹಲವು ಷರತ್ತುಗಳನ್ನು ನೀಡಲಾಗುತ್ತದೆ. ಆದರೆ, ಮಳಿಗೆದಾರರು ಅವುಗಳ ಪಾಲನೆಗೆ ಮುಂದಾಗುತ್ತಿಲ್ಲ. ಇದರೊಂದಿಗೆ ನಗರದಲ್ಲಿ ಅನಧಿಕೃತ ಮಾಂಸ ಮಾರಾಟ ಮಳಿಗೆಗಳು ಹೆಚ್ಚಿವೆ. ಮಾಂಸ ಮಾರಾಟ ಮಳಿಗೆದಾ­ರರು ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಪಾಲಿಕೆಯ ಸಿಬ್ಬಂದಿಗೆ ನೀಡಿದರೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯಬಹುದಾಗಿದೆ. ಈಗಾಗಲೇ ಪಾಲಿಕೆಯಿಂದ ಅನಧಿಕೃತ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯ ಹಾಕುವವರ ಪತ್ತೆ ದಳ ರಚಿಸಲು ಮುಂದಾಗಿದ್ದೇವೆ. 
-ಎನ್‌. ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.