ನಾಗ ವಿರುದ್ಧ 5 ಕೋಟಿ ರೂ. ವಂಚನೆ ದೂರು


Team Udayavani, Apr 24, 2017, 11:47 AM IST

bomb-naga.jpg

ಬೆಂಗಳೂರು: ಬ್ಲ್ಯಾಕ್‌ ಆ್ಯಂಡ್‌ ವೈಟ್‌ ದಂಧೆಯಲ್ಲಿ ಭಾಗಿಯಾಗಿ ಪೊಲೀಸ್ಟರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಮಾಜಿ ರೌಡಿಶೀಟರ್‌ ನಾಗರಾಜ್‌ಗೆ ಮತ್ತೂಂದು ಸಂಕಟ ಎದುರಾಗಿದೆ. ಹಳೆ ನೋಟುಗಳ ಬದಲಾವಣೆ ನೆಪದಲ್ಲಿ ಐದು ಕೋಟಿ ರೂ. ವಂಚಿಸಲಾಗಿದೆ ಎಂದು ಆರೋಪಿಸಿ ರಿಯಲ್‌ ಎಸ್ಟೇಟ್‌ ಏಜೆಂಟ್‌ ಅರುಣ್‌ ಎಂಬುವರು ನಾಗರಾಜ್‌ ವಿರುದ್ಧ ಶ್ರೀರಾಮಪುರ ಠಾಣೆಗೆ ದೂರು ನೀಡಿದ್ದಾರೆ.

ಮತ್ತೂಂದೆಡೆ ಶುಕ್ರವಾರ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಾಗರಾಜ್‌ ವಿರುದ್ಧ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ತಮ್ಮ ಠಾಣೆಯಲ್ಲೇ ದೂರು ದಾಖಲಿಸಿಕೊಂಡಿದ್ದಾರೆ.

ಹಲ್ಲೆ ನಡೆಸಿ ವಂಚನೆ: ಕಮಿಷನ್‌ ಆಧಾರದ ಮೇಲೆ ಹಳೇ ನೋಟುಗಳನ್ನು ಬದಲಾವಣೆ ಮಾಡಿಕೊಡುವುದಾಗಿ ಮನೆಗೆ ಕರೆಸಿಕೊಂಡ ನಾಗರಾಜ್‌ ತನ್ನ ಬೆಂಬಲಿಗರು ಹಾಗೂ ಇಬ್ಬರು ಮಕ್ಕಳ ಮೂಲಕ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಐದು ಕೋಟಿ ರೂ. ವಂಚನೆ ಮಾಡಿದ್ದಾನೆ. ಅಲ್ಲದೆ, ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದ ಎಂದು ಅರುಣ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ನಾಗರಬಾವಿ ನಿವಾಸಿ ಅರುಣ್‌ ಗ್ಯಾರೆಜ್‌ ಒಂದರ ಮಾಲೀಕರಾಗಿದ್ದು, ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದಾರೆ. ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ಸೆಲ್ವಂ ಎಂಬ ಮಧ್ಯವರ್ತಿಯ ಮೂಲಕ ಪರಿಚಯವಾದ ನಾಗರಾಜ್‌, ಹಳೇ ನೋಟುಗಳನ್ನು ಶೇ.25ರಷ್ಟು ಕಮಿಷನ್‌ ಆಧಾರದ ಮೇಲೆ ಬದಲಾವಣೆ ಮಾಡಿಕೊಡುವುದಾಗಿ ಹೇಳಿದ್ದ.

ಅದರಂತೆ ಪರಿಚಯಸ್ಥರು ಹಾಗೂ ಕೆಲ ರಿಯಲ್‌ ಎಸ್ಟೇಟ್‌ ಉದ್ಯಮಿಗಳ 5 ಕೋಟಿ ರೂ. ಹಳೆ ನೋಟುಗಳ ಬದಲಾವಣೆ ಮಾಡಿಕೊಳ್ಳಲು ಜನವರಿ 7ರಂದು ನಾಗರಾಜ್‌ ಮನೆಗೆ ಹೋಗಿದ್ದೆ. ಆ ವೇಳೆ ಕಮಿಷನ್‌ ವಿಚಾರದಲ್ಲಿ ಇಬ್ಬರ ನಡುವೆ ಮಾತುಕತೆ ನಡೆಯಿತು. ಆಗ ನಾಗರಾಜ್‌, ಇಬ್ಬರು ಮಕ್ಕಳಾದ ಶಾಸ್ತ್ರೀ ಮತ್ತು ಗಾಂಧಿ ಹಾಗೂ ಆತನ ಬೆಂಬಲಿಗರು ಪಿಸ್ತೂಲ್‌ ಮತ್ತು ಮಾರಕಾಸ್ತ್ರಗಳಿಂದ ಬೆದರಿಕೆ ಹಾಕಿದರು.

ಅಲ್ಲದೆ, ಕೊಂಡೊಯ್ದಿದ್ದ ಹಳೆ ನೋಟುಗಳನ್ನು ವಾಪಸ್‌ ಕೊಡದೆ, ಬೇರೆ ನೋಟುಗಳನ್ನೂ ನೀಡದೆ ಮನೆಯಿಂದ ಹೊರಹಾಕಿದ್ದರು ಎಂದು ಅರುಣ್‌ ದೂರಿನಲ್ಲಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಶುಕ್ರವಾರ ಬಿಡುಗಡೆಯಾದ ಒಂದೂವರೆ ಗಂಟೆ ವಿಡಿಯೋದಲ್ಲಿ ಹೆಣ್ಣೂರು ಠಾಣೆ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರನ್ನು ನಾಗರಾಜ್‌ ಅವಹೇಳನಕಾರಿಯಾಗಿ ನಿಂದಿಸಿದ್ದ. ಈ ಮೂಲಕ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ. ಈ ಸಂಬಂಧ ಇನ್‌ಸ್ಪೆಕ್ಟರ್‌ ಶ್ರೀನಿವಾಸ್‌ ಅವರು ನಾಗರಾಜ್‌ ವಿರುದ್ಧ ದೂರು ನೀಡಿದ್ದಾರೆ.

150 ಕೋಟಿ ರೂ. ದಂಡ?
ಗರಿಷ್ಠ ಮುಖ ಬೆಲೆಯ ನೋಟುಗಳು ಅಮಾನ್ಯಗೊಂಡ ಬಳಿಕ ಕೇಂದ್ರ ಸರ್ಕಾರ ಜಾರಿಗೆ ತಂದ ನಿಯಮದ ಪ್ರಕಾರ ಸಾರ್ವಜನಿಕರು 10ಕ್ಕಿಂತ ಅಧಿಕ ಹಳೆ ನೋಟುಗಳನ್ನು ಹೊಂದುವಂತಿಲ್ಲ. ಆದರೆ, ಪೊಲೀಸರ ದಾಳಿ ಸಂದರ್ಭದಲ್ಲಿ ನಾಗರಾಜ್‌ ಮನೆಯಲ್ಲಿ 14.80 ಕೋಟಿ ರೂ. ಮೌಲ್ಯದ 500 ಮತ್ತು 1000 ಮುಖ ಬೆಲೆಯ ನೋಟುಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ನಾಗರಾಜ್‌ಗೆ ಸಂಗ್ರಹದ ಹಣದ ಮೇಲೆ 10 ಪಟ್ಟು ದಂಡ ವಿಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

Manipal Hospitals; ಟ್ರಾನ್ಸ್‌ಪ್ಲಾಂಟ್ನಿಂದ ಬದುಕುಳಿದವರಿಗೆ ಕ್ರಿಕೆಟ್‌ ಪಂದ್ಯದ ಉಲ್ಲಾಸ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.