ಬಿಬಿಎಂಪಿ ಆನ್‌ಲೈನ್‌ ಅಪ್‌ಡೇಟ್‌ ವ್ಯವಸ್ಥೆ ದೇಶಾದ್ಯಂತ ಜಾರಿಗೆ ಚಿಂತನ


Team Udayavani, May 27, 2017, 12:47 PM IST

bbmp.jpg

ಬೆಂಗಳೂರು: ನಗರದ ವ್ಯಾಪ್ತಿಯಲ್ಲಿ ನಾನಾ ಕಾರಣಗಳಿಗೆ ರಸ್ತೆ ಅಗೆಯಲು, ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್ಸಿ) ಅಳವಡಿಸಲು ಆನ್‌ಲೈನ್‌ ಮೂಲಕ ಅನುಮತಿ ಪಡೆಯುವ ವ್ಯವಸ್ಥೆ ಜಾರಿಗೆ ತಂದ ಪಾಲಿಕೆಯ ಕ್ರಮ ಈಗ ರಾಷ್ಟ್ರ ಮಟ್ಟದ ಮಾನ್ಯತೆ ಪಡೆದುಕೊಂಡಿದೆ. ಈ ವ್ಯವಸ್ಥೆಯನ್ನು ದೇಶಾದ್ಯಂತ ಜಾರಿಗೆ ತರಲು ಕೇಂದ್ರದ ಸಂವಹನ ಇಲಾಖೆ ಚಿಂತನೆ ನಡೆಸಿದೆ. 

ನಗರದಲ್ಲಿ ಅನಧಿಕೃತವಾಗಿ ಒಎಫ್ಸಿ ಅಳವಡಿಸುವುದನ್ನು ತಡೆಯಲು, ಅನಗತ್ಯವಾಗಿ ರಸ್ತೆ ಅಗೆಯುವುದನ್ನು ನಿಲ್ಲಿಸುವ ಉದ್ದೇಶದಿಂದ ಪಾಲಿಕೆ ಆನ್‌ಲೈನ್‌ ವ್ಯವಸ್ಥೆ ಜಾರಿಗೆ ತಂದಿದೆ. ಇದರಿಂದ ನಗರದಲ್ಲಿ ಅನಧಿಕೃತ ಒಎಫ್ಸಿ ಅಳವಡಿಕೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ರಸ್ತೆ ಅಗೆತ ಅನುಮತಿ ನೀಡುವಲ್ಲಿಯೂ ಪಾರದರ್ಶಕತೆ ಮೂಡಿದೆ. 

ನಗರ ವೇಗವಾಗಿ ಅಭಿವೃದ್ಧಿಯಾಗುತ್ತಿವುದರಿಂದ ಕುಡಿಯುವ ನೀರು, ವಿದ್ಯುತ್‌, ಒಎಫ್ಸಿ ಅಳವಡಿಕೆ ಅತ್ಯಗತ್ಯ. ಅಲ್ಲದೆ, ಇವೆಲ್ಲೆವೂ ನೆಲದಡಿಯ ಜಾಲಗಳಾಗಿವೆ. ಹಾಗಾಗಿ ರಸ್ತೆ ಹಾಳಾಗದಂತೆ ಜಾಲವನ್ನು ತ್ವರಿತವಾಗಿ ಬೆಸೆಯಲು ಆನ್‌ಲೈನ್‌ ವ್ಯವಸ್ಥೆ ಸಹಕಾರಿ ಎಂದು ಕೇಂದ್ರ ಸಂವಹನ ಇಲಾಖೆ ಮನಗಂಡಂತಿದೆ. ಆ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳ ಪ್ರಮುಖ ಸ್ಥಳೀಯ ಸಂಸ್ಥೆಗಳಲ್ಲಿ ಈ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಇಲಾಖೆ ಸಲಹೆ ನೀಡಲು ಮುಂದಾಗಿದೆ. 

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಜಾರ್ಖಂಡ್‌, ಮಧ್ಯಪ್ರದೇಶ, ದೆಹಲಿ, ತಮಿಳುನಾಡು, ಗುಜರಾತ್‌, ಆಂಧ್ರಪ್ರದೇಶ ಸೇರಿ ವಿವಿಧ ರಾಜ್ಯಗಳಿಂದ ಭಾಗವಹಿಸಿದ್ದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಒಎಫ್ಸಿ ಸೇವೆ ಒದಗಿಸಲು ತಾವು ಅನುಸರಿಸುತ್ತಿರುವ ವ್ಯವಸ್ಥೆಯ ಪ್ರಾತ್ಯಕ್ಷಿಕೆ ನೀಡಿದ್ದರು. ಸಭೆಯಲ್ಲಿದ್ದ ಪಾಲಿಕೆ ಅಧಿಕಾರಿಗಳು ಸಹ ಒಎಫ್ಸಿ ಅಳವಡಿಕೆ ಹಾಗೂ ರಸ್ತೆ ಅಗೆತಕ್ಕೆ ಆನ್‌ಲೈನ್‌ ಮೂಲಕ ಅನುಮತಿ ನೀಡುವ ವ್ಯವಸ್ಥೆಯ ಕುರಿತು ಪ್ರಾತ್ಯಕ್ಷಿಕೆ ನೀಡಿದ್ದರು. ಪಾಲಿಕೆ ಅಧಿಕಾರಿಗಳ ಕ್ರಮ ಸಭೆಯಲ್ಲಿ ಹೆಚ್ಚು ಮನ್ನಣೆ ಪಡೆಯಿತು ಎನ್ನಲಾಗಿದೆ. 

ನಗರಕ್ಕೆ ಬಂದ ಸಂವಹನ ಇಲಾಖೆ ತಂಡ! 
ಪಾಲಿಕೆಯ ಯೋಜನೆಯಿಂದ ಪ್ರೇರಿತವಾದ ಸಂವಹ ಇಲಾಖೆ, ತನ್ನ 15 ಅಧಿಕಾರಿಗಳ ತಂಡವನ್ನು ಕಳೆದ ಗುರುವಾರ ನಗರಕ್ಕೆ ಕಳುಹಿಸಿತ್ತು. ಈ ವೇಳೆ ಪಾಲಿಕೆಯ ಅಧಿಕಾರಿಗಳು ಆನ್‌ಲೈನ್‌ ವ್ಯವಸ್ಥೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಪಾಲಿಕೆ ಅಳವಡಿಸಿಕೊಂಡಿರುವ ಸಾಫ್ಟ್ವೇರ್‌, ನಿರ್ವಹಣೆ ಸೇರಿದಂತೆ ವಿವಿಧ ಕ್ರಮಗಳ ಕುರಿತು ಅಧಿಕಾರಿಗಳೂ ಮಾಹಿತಿ ಪಡೆದಿದ್ದಾರೆ. ಈ ವೇಳೆ ಪಾಲಿಕೆ ಕ್ರಮಗಳಿಗೆ ಅಧಿಕಾರಿಗಳು ಅಭಿನಂದಿಸಿದ್ದಾರೆ ಎಂದು ಸಭೆಯಲ್ಲಿದ್ದ ಅಧಿಕಾರಿಯೊಬ್ಬರು “ಉದಯವಾಣಿಗೆ’ ಮಾಹಿತಿ ನೀಡಿದ್ದಾರೆ. 

ಇತರ ರಾಜ್ಯಗಳಿಗೆ ಬಿಬಿಎಂಪಿ ತಾಂತ್ರಿಕ ಸಲಹೆ ನೀಡಬೇಕು 
ರಸ್ತೆ ಅಗೆತಕ್ಕೆ ಪಾಲಿಕೆ ಅಳವಡಿಸಿಕೊಂಡಿರುವ ಆನ್‌ಲೈನ್‌ ವ್ಯವಸ್ಥೆಯನ್ನು ದೇಶದ ಇತರೆ ರಾಜ್ಯಗಳೂ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡುವುದಾಗಿ ಸಂವಹನ ಇಲಾಖೆಯ ಅಧಿಕಾರಿಗಳು ಪಾಲಿಕೆಗೆ ತಿಳಿಸಿದ್ದಾರೆ. ಜತೆಗೆ ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಮುಂದಾಗುವ ರಾಜ್ಯಗಳಿಗೆ ಬಿಬಿಎಂಪಿಯಿಂದ ತಾಂತ್ರಿಕ ನೆರವು ನೀಡಬೇಕು ಎಂದು ಸಂವಹನ ಇಲಾಖೆ ಪಾಲಿಕೆಯನ್ನು ಕೋರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ದೇಶಕ್ಕೆ ಮಾದರಿಯಾದ ಬಿಬಿಎಂಪಿ!
ವಿವಿಧ ಸಮಸ್ಯೆಗಳಿಗೆ ಪಾಲಿಕೆ ಅನುಸರಿಸುವ ಪರಿಹಾರ ಕ್ರಮಗಳಿಂದಾಗಿ ಬಿಬಿಎಂಪಿ ದೇಶದ ಇತರ ನಗರಗಳಿಗೆ ಮಾದರಿಯಾಗುತ್ತಿದೆ. ಈ ಮೊದಲು ಶೇ.50ರಷ್ಟು ಘನತ್ಯಾಜ್ಯ ವಿಂಗಡಣೆ ಸಾಧಿಸಿದ ದೇಶದ ಮೊದಲ ನಗರ ಎಂಬ ಹೆಗ್ಗಳಿಕೆಗೆ ಪಾಲಿಕೆ ಪಾತ್ರವಾಗಿತ್ತು. ಆ ಹಿನ್ನೆಲೆಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಅವರು ಬಿಬಿಎಂಪಿ ಅನುಸರಿಸುವ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ದೇಶದ ಇತರ ಸ್ಥಳೀಯ ಆಡಳಿತಗಳಿಗೆ ಸಲಹೆ ನೀಡಿದ್ದರು. ಅದರ ಬೆನ್ನಲ್ಲೆ ಇದೀಗ ಒಎಫ್ಸಿಗೆ ಅನುಮತಿ ನೀಡುವ ಆನ್‌ಲೈನ್‌ ವ್ಯವಸ್ಥೆಯನ್ನು ದೇಶದಾದ್ಯಂತ ಜಾರಿಗೊಳಿಸುವ ಪ್ರಯತ್ನ ನಡೆದಿರುವುದು ಪಾಲಿಕೆ ಇತರೆ ರಾಜ್ಯಗಳಿಗೆ ಮಾದರಿಯಾಗುವಂತೆ ಮಾಡಿದೆ. 

ಆನ್‌ಲೈನ್‌ ವ್ಯವಸ್ಥೆ ಕಾರ್ಯ ಹೇಗೆ?
ನೆಲದಡಿಯ ಜಾಲ ಬೆಸುಗೆಗೆ ರಸ್ತೆ ಅಗೆಯುವ ಮುನ್ನ ಸಂಸ್ಥೆಗಳು ಪಾಲಿಕೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ರಸ್ತೆ ಅಗೆತದ ಉದ್ದೇಶ, ಸ್ಥಳ ಹಾಗೂ ಅಗೆಯುವ ಅಳತೆಯ ಮಾಹಿತಿ ನೀಡಿ, ಗೂಗಲ್‌ ಮ್ಯಾಪಿಂಗ್‌ ಮೂಲಕ ಸ್ಥಳವನ್ನು ಪಿನ್‌ ಮಾಡಬೇಕು. ರಸ್ತೆ ಅಗೆತಕ್ಕೆ ಬಂದ ಅರ್ಜಿಯನ್ನು ವಲಯ ಜಂಟಿ ಆಯುಕ್ತರು ಹಾಗೂ ಆಯಾ ವಾರ್ಡ್‌ನ ಸಹಾಯಕ ಎಂಜಿನಿಯರ್‌ಗಳಿಗೆ ರವಾನೆ ಮಾಡಲಾಗುತ್ತದೆ. ಅವರು ಸ್ಥಳ ಪರಿಶೀಲಿಸಿ ಅನುಮತಿ ನೀಡುತ್ತಾರೆ ಅಥವಾ ನಿರಾಕರಿಸುತ್ತಾರೆ.

ಅದರಂತೆ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಒಂದೊಮ್ಮೆ ಸ್ಥಳೀಯ ಎಂಜಿನಿಯರ್‌ ಹಾಗೂ ಹಿರಿಯ ಅಧಿಕಾರಿಗಳು ಒಪ್ಪಿಗೆ ನೀಡಿದರೆ, ಸ್ವಯಂಚಾಲಿತವಾಗಿ ಡಿಮ್ಯಾಂಡ್‌ ನೋಟಿಸ್‌ ಸೃಷ್ಟಿಯಾಗಲಿದೆ. ನಿಗದಿತ ಶುಲ್ಕವನ್ನು ಬ್ಯಾಂಕ್‌ನಲ್ಲಿ ಪಾವತಿಸಿದ ನಂತರ ಅನುಮತಿ ದೊರೆಯಲಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ಅಧಿಕಾರಿಗಳು ಪ್ರಮಾಣ ಪತ್ರ ನೀಡುತ್ತಾರೆ. ಒಂದೊಮ್ಮೆ ರಸ್ತೆ ಸಮರ್ಪಕವಾಗಿ ದುರಸ್ತಿಪಡಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. 

ನಗರದಲ್ಲಿ ಡಾಂಬರೀಕರಣ ಮಾಡಿದ ಮರುದಿನವೇ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ನೆಲದಡಿಯ ಜಾಲಕ್ಕಾಗಿ ರಸ್ತೆ ಅಗೆದು ಹಾಳು ಮಾಡಿದ ಹಲವಾರು ಪ್ರಕರಣಗಳಿವೆ. ಹಾಗಾಗಿ ಆನ್‌ಲೈನ್‌ ಮೂಲಕ ಅನುಮತಿ ವ್ಯವಸ್ಥೆ ಜಾರಿಗೊಳಿಸಲಾಯಿತು. ಈಗ ರಸ್ತೆ ಅಗೆತಕ್ಕೂ ಮೊದಲು ಪಾಲಿಕೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಾರೆ. ಇದರಿಂದ ಅನಗತ್ಯವಾಗಿ ರಸ್ತೆ ಅಗೆಯುವುದು ತಪ್ಪಲಿದೆ. ಈ ವ್ಯವಸ್ಥೆಯನ್ನು ದೇಶದಾದ್ಯಂತ ಅಳವಡಿಸುವ ಕುರಿತಂತೆ ಕೇಂದ್ರ ಸಂವಹನ ಇಲಾಖೆ ಚಿಂತನೆ ನಡೆಸಿರುವುದು ಸ್ವಾಗತಾರ್ಹ. 
-ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

* ವೆಂ.ಸುನೀಲ್‌ಕುಮಾರ್‌ 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.