ಸಾಮಾಜಿಕ ಜಾಲ ತಾಣಗಳ ಸಂಗತಿಗಳೇ ಮಾಧ್ಯಮ ಸರಕು

Team Udayavani, Jun 23, 2017, 12:17 PM IST

social-media.jpg

ಬೆಂಗಳೂರು: “ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೊಳಪಡುವ ಬಹುತೇಕ ಸಂಗತಿಗಳೇ ಇಂದಿನ ಮಾಧ್ಯಮಗಳ ಪ್ರಮುಖ ಸುದ್ದಿ ಸರಕಾಗಿದೆ,’ ಎಂದು ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಸಂಶೋಧನಾ ವಿಭಾಗದ ಮುಖ್ಯಸ್ಥ ಪ್ರೊ. ರಾಜೀವ್‌ಗೌಡ ಅಭಿಪ್ರಾಯಪಟ್ಟಿದ್ದಾರೆ. 

“ಕಮ್ಯೂನಿಕೇಷನ್‌ ಫಾರ್‌ ಡೆವಲೆಪ್‌ಮೆಂಟ್‌ ಆ್ಯಂಡ್‌ ಲರ್ನಿಂಗ್‌’ ಹಾಗೂ “ನ್ಯಾಷನಲ್‌ ಫೌಂಡೇಷನ್‌ ಫಾರ್‌ ಇಂಡಿಯಾ’ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ “ಸುದ್ದಿಮನೆಗಳಲ್ಲಿ ಸಾಮಾಜಿಕ ಜಾಲತಾಣ-ಪ್ರವೃತ್ತಿಗಳು ಮತ್ತು ಅಭ್ಯಾಸಗಳು’ ಕುರಿತ ವಿಚಾರಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.

“ಸಾಮಾಜಿಕ ಜಾಲತಾಣಗಳು ಹೆಚ್ಚು ಪ್ರಸಿದ್ಧಿ ಪಡೆದುಕೊಳ್ಳುತ್ತಿವೆ. ಜತೆಗೆ ಸಾಮಾಜಿಕ ಜಾಲತಾಣಗಳನ್ನು ಬಳಸುವವರು ಅತ್ಯಂತ ಜಾಗೃತ ಮತ್ತು ಸಕಾಲಿಕವಾಗಿರುತ್ತಾರೆ. ಪ್ರತಿಯೊಂದು ವಿಷಯ ಮತ್ತು ವಿದ್ಯಮಾನಗಳ ಬಗ್ಗೆ ಅಲ್ಲಿ ಪ್ರತಿಕ್ರಿಯೆಗಳು ವ್ಯಕ್ತವಾಗಿರುತ್ತವೆ.

ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾರ್ವಜನಿಕರಿಗೆ ಇಲ್ಲಿ ಮುಕ್ತ ಅವಕಾಶವಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ನಡೆದ ಅನೇಕ ಚರ್ಚೆಗಳು ವ್ಯವಸ್ಥೆಯ ಮೇಲೆ ಪ್ರಭಾವ ಬೀರಿದ ಅನೇಕ ಉದಾಹರಣೆಗಳಿವೆ. ಹಾಗಾಗಿ ಹಲವು ಸಂದರ್ಭಗಳಲ್ಲಿ ಮುಖ್ಯವಾಹಿನಿ ಮಾಧ್ಯಮಗಳು ಸಾಮಾಜಿಕ ಜಾಲತಾಣಗಳನ್ನು ಅನುಸರಿಸಿದ ಅನೇಕ ನಿದರ್ಶನಗಳು ನಮ್ಮ ಮುಂದಿವೆ,’ ಎಂದರು.

“ಇಂದು ಸಾಮಾಜಿಕ ಜಾಲತಾಣಗಳ ವಿಶ್ವಾರ್ಸಹತೆಯೂ ಚರ್ಚಿತ ವಿಷಯವಾಗಿದೆ. ಅದಾಗ್ಯೂ ಆದರ ಅವಶ್ಯಕತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ.  ನಿರ್ಭಯಾ ಪ್ರಕರಣದಲ್ಲಿ ವ್ಯಕ್ತವಾದ ಜನರ ಸ್ಪಂದನೆ ಮತ್ತು ಆ ಘಟನೆ ಆಧರಿಸಿ ಕಾನೂನು ರಚನೆ ಆಗಿರುವುದಕ್ಕೆ ಮಾಧ್ಯಮಗಳ ಜತೆಗೆ ಸಾಮಾಜಿಕ ಜಾಲತಾಣದ ಸಕ್ರೀಯ ಪಾತ್ರ ಕಾರಣ ಅನ್ನುವುದನ್ನು ಮರೆಯುವಂತಿಲ್ಲ,’ ಎಂದು ಹೇಳಿದರು.

ಈ ಸಂದರ್ಭದಲ್ಲಿ “ಡಿಜಿಟಲ್‌ ಮಾಧ್ಯಮಗಳ ಮೂಲಕ ನಾಗರಿಕ ಸಮಸ್ಯೆಗಳ ಪ್ರಚಾರ’ ಕುರಿತು ಮೆಗಸ್ಸೇ ಪ್ರಶಸ್ತಿ ವಿಜೇತ ಪತ್ರಕರ್ತ ಪಿ. ಸಾಯಿನಾಥ್‌ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಹೇಮಾ ಪ್ರಸನ್ನ, ಸಂಗನದಾಸ ಗುಪ್ತ, ಎನ್‌ಎಫ್‌ಐ ನಿರ್ದೇಶಕ ಅಮಿತಾಬ್‌ ಬಿಹಾರ್‌, ಪರಂಜಯ ಗುಹಾ ಠಾಕೂರ್ಥ, ನೂಪುರ್‌ ಬಸು, ವಾಸಂತಿ ಹರಿಪ್ರಕಾಶ, ಕಾಂಚನ ಕೌರ್‌, ಪ್ರಕಾಶ ಬೆಳವಾಡಿ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.