ಅಘೋಷಿತ ತುರ್ತು ಪರಿಸ್ಥಿತಿಯ ಆತಂಕ 

Team Udayavani, Jun 28, 2017, 11:41 AM IST

devegowda.jpg

ಬೆಂಗಳೂರು: “1975 ರಲ್ಲಿ ಘೋಷಿತ ತುರ್ತುಪರಿಸ್ಥಿತಿ ಇತ್ತು, ಈಗ ಅಘೋಷಿತ ತುರ್ತು ಪರಿಸ್ಥಿತಿಯಿದೆ ಎಂದು ಸಾಹಿತಿಗಳು ಅಭಿಪ್ರಾಯಪಟ್ಟರೆ, ಯಾವುದೇ ಕಾರಣಕ್ಕೂ  ಈಗ ತುರ್ತು ಪರಿಸ್ಥಿತಿ ಬರಲು ಸಾಧ್ಯವಿಲ್ಲ, ಏಕೆಂದರೆ ಕೇಂದ್ರ ಸರ್ಕಾರ ಕಾರ್ಪೋರೇಟ್‌ ವಲಯದ ಕೈಯಲ್ಲಿದೆ. ಹೀಗಾಗಿ ಹೆದರುವ ಅಗತ್ಯವಿಲ್ಲ,’ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಪ್ರತಿಪಾದಿಸಿದರು.

ತುರ್ತು ಪರಿಸ್ಥಿತಿ ವಿರೋಧಿ ದಿನದ ಅಂಗವಾಗಿ ಗಾಂಧಿಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಹಿತಿ-ಗಣ್ಯರು ತುರ್ತು ಪರಿಸ್ಥಿತಿ ಕುರಿತು ಹಾಗೂ ಪ್ರಸ್ತುತ ಪರಿಸ್ಥಿತಿ ಕುರಿತು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದರು.

ಮೊದಲಿಗೆ ಮಾತನಾಡಿದ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ, “ಅಂದು ಘೋಷಿತ ತುರ್ತು ಪರಿಸ್ಥಿತಿ ಇತ್ತು. ಇಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ. ಕೇಂದ್ರ ಸರ್ಕಾರದ ವರ್ತನೆ ಶುಗರ್‌ ಕೋಟೆಡ್‌ ವಿಷದಂತಾಗಿದೆ,’ ಎಂದು ಹೇಳಿದರು.

 “ಜಾತ್ಯಾತೀತ ಜನತಾದಳ ಬಿಜೆಪಿಯೊಂದಿಗೆ ಮಾಡಿದ ಸಖ್ಯ ಗುಲಗಂಜಿಯಲ್ಲಿ ಕಪ್ಪು ಚುಕ್ಕೆಯಂತೆ. ಅದನ್ನು ಸಮತೋಲನ ಮಾಡುವ ಕೆಲಸವನ್ನು ದೇವೇಗೌಡರು ಮಾಡಬೇಕು,’ ಎಂದು ತಿಳಿಸಿದರು. ಜೆಡಿಯು ನಾಯಕ ಡಾ.ಎಂ.ಪಿ.ನಾಡಗೌಡ, “ಆಡಳಿತ ಪಕ್ಷಕ್ಕೆ ಸೈದ್ಧಾಂತಿಕವಾದ ಪ್ರತಿಪಕ್ಷ ಇರಬೇಕು.

ಯಾವಾಗ ಪ್ರತಿಪಕ್ಷಗಳು ಒಡೆದು ಹೋಗುತ್ತವೆಯೋ ಆಗ ಆಡಳಿತ ಪಕ್ಷ ಸರ್ವಾಧಿಕಾರಿಯಂತೆ ವರ್ತಿಸಲು ಆರಂಭಿಸುತ್ತದೆ. ಅದಕ್ಕೆ ಇಂದಿನ ಕೇಂದ್ರ ಸರ್ಕಾರವೇ ನಿದರ್ಶನ,’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಮೈಕೆಲ್‌ ಫೆರ್ನಾಂಡಿಸ್‌ ಅವರು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ತಮ್ಮ ಸಹೋದರರಾದ ಕೇಂದ್ರದ ಮಾಜಿ ಸಚಿವ ಜಾರ್ಜ್‌ ಫೆರ್ನಾಂಡಿಸ್‌, ಲಾರೆನ್ಸ್‌ ಫೆರ್ನಾಂಡಿಸ್‌ ಅವರೊಂದಿಗೆ ಜೈಲುವಾಸ ಅನುಭವಿಸಿದ್ದನ್ನು ಮತ್ತು ಅಂದಿನ ಪೊಲೀಸ್‌  ದೌರ್ಜನ್ಯದ ಕಹಿ ಘಟನೆಗಳನ್ನು ಮೆಲುಕು ಹಾಕಿದರು.  

ಆಹಾರ ವಿಚಾರದಲ್ಲಿ ದಬ್ಟಾಳಿಕೆ: ಸಾಹಿತಿ ಚಂದ್ರಶೇಖರ್‌ ಪಾಟೀಲ್‌ ಮಾತನಾಡಿ, “ಪ್ರಜಾಪ್ರಭುತ್ವದ ಮೂಲಕ ಅಧಿಕಾರಕ್ಕೆ ಬಂದವರೂ ಸಹ ಸರ್ವಾಧಿಕಾರಿ ದಾರಿ ಹಿಡಿಯುತ್ತಿರುವುದನ್ನು ಖಂಡಿಸಬೇಕು. ತುರ್ತು ಪರಿಸ್ಥಿತಿ ಕೇವಲ ಇತಿಹಾಸವಲ್ಲ. ಇಂದಿಗೂ ನಮ್ಮನ್ನು ಭೂತದಂತೆ ಕಾಡುತ್ತಿದೆ. ಇಂದು ಆಹಾರದ ಮೇಲೂ ಕೆಲ ಸಂಘಟನೆಗಳು ದಬ್ಟಾಳಿಕೆ ನಡೆಸುತ್ತಿವೆ. ಕೆಲ ಪ್ರದೇಶಗಳ ಆಹಾರ ಪದ್ದತಿಯನ್ನು ನಿಷೇಧಿಸಬೇಕು ಎಂದು ಒತ್ತಡ ಹೇರುತ್ತಿರುವುದು ಸರಿಯಲ್ಲ. ಲಿಂಗಾಯತ ನಾಯಕರು ದಲಿತರ ಮನೆಗೆ ಹೋಗಿ ಬಾಹ್ಮಣರ ಊಟ ತಿನ್ನುತ್ತಾರೆ ಎಂದು ವ್ಯಂಗ್ಯವಾಡಿದರು. 

ತುರ್ತು ಪರಿಸ್ಥಿತಿ ಬಾರದು… ಏಕೆಂದರೆ?: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, “ಅಂದು ತಮ್ಮ ಸ್ಥಾನ ಉಳಿಸಿಕೊಳ್ಳಲು ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದರು. ಅಂದು ಪೊಲೀಸ್‌ ಶಕ್ತಿಯ ಮೂಲಕ ಜಯಪ್ರಕಾಶ್‌ ನಾರಾಯಣ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದರು. ಆದರೆ, ಇಂದು ಕೇಂದ್ರ ಸರ್ಕಾರ ಕಾರ್ಪೊರೇಟ್‌ ಕೈಯಲ್ಲಿದ್ದು, ತುರ್ತು ಪರಿಸ್ಥಿತಿ ಬರುವುದಿಲ್ಲ,’ ಎಂದು ಅಭಿಪ್ರಾಯಪಟ್ಟರು. 

“ಎರಡು ರಾಷ್ಟ್ರೀಯ ಪಕ್ಷಗಳು ತಮ್ಮ ಬಲ ಹೆಚ್ಚಿಸಿಕೊಳ್ಳಲು ಮತ್ತು ಸಂಘಟನೆಗಾಗಿ ಅನೈತಿಕ ರಾಜಕಾರಣ ಮಾಡಲು ಹಿಂದೇಟು ಹಾಕಲ್ಲ. ಈ ವಿಚಾರವನ್ನು ನಾನು ಎಳೆ ಎಳೆಯಾಗಿ ಬಿಚ್ಚಿಡಲು ಹೆದರಲ್ಲ. ಸ್ವಾರ್ಥಕ್ಕಾಗಿ ನಾನೆಂದು ರಾಜಕಾರಣ ಮಾಡಿಲ್ಲ. ಎಂತಹ ಪರಿಸ್ಥಿತಿ ಬಂದರೂ ಹಿಂದೆ ತಿರುಗಿ ನೋಡದೆ ಮುಂದೆ ಹೆಜ್ಜೆ ಇಡುತ್ತೇನೆ. ವೈಯಕ್ತಿಕ ಸ್ವಾರ್ಥ ಬಿಟ್ಟು ರಾಜ್ಯದ ಹಿತ ಕಾಪಾಡಬೇಕಿದೆ,’ ಎಂದು ಹೇಳಿದರು. 

ಮನೆಗೇ ಬಂದು ಬೆಂಬಲ ಕೇಳಿದರು: ಕಾಂಗ್ರೆಸ್‌ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಮನೆ ಬಾಗಿಲಿಗೆ ಕಾಂಗ್ರೆಸ್‌ ನಾಯಕರೇ ಬಂದು ಮನವಿ ಮಾಡಿದರು. ಜತೆಗೆ ದಲಿತ ವಿರೋಧಿ ಎಂದು ಬಿಂಬಿಸಿಕೊಳ್ಳಬಾರದು ಅಂತ ಬೆಂಬಲ ನೀಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.