ವಿಮೆ ದುರ್ಬಳಕೆ: ಡಿವಿಎಸ್‌ ಬೇಸರ


Team Udayavani, Jul 24, 2017, 11:43 AM IST

sadasnadagowda.jpg

ಬೆಂಗಳೂರು: ಆರೋಗ್ಯ ವಿಮಾ ಪಾಲಿಸಿಗಳನ್ನು ಕೆಲ ಆಸ್ಪತ್ರೆಗಳು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಇದರಲ್ಲಿ ಹಲವು ವಿಮಾ ಕಂಪೆನಿಗಳು ಶಾಮೀಲಾಗಿವೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೇಂದ್ರ ಸಾಂಖೀಕ ಮತ್ತು ಯೋಜನಾ ಅನುಷ್ಠಾನ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು. ನಗರದ ಆರ್‌ಜಿ ರಾಯಲ್‌ ಹೋಟೆಲ್‌ನಲ್ಲಿ ಶನಿವಾರ ಜನರಲ್‌ ಇನ್ಷೊರನ್ಸ್‌ ಏಜೆಂಟ್ಸ್‌ ಫೆಡರೇಷನ್‌ ಇಂಟಿಗ್ರೇಟೆಡ್‌ ಹಮ್ಮಿಕೊಂಡಿದ್ದ ಆರೋಗ್ಯ ವಿಮಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 

ಕೆಲವು ಆಸ್ಪತ್ರೆಗಳು ಆದಾಯದ ದೃಷ್ಟಿಯಿಂದ ವಿಮಾ ಕಂಪೆನಿಗಳನ್ನೇ ಅವಲಂಭಿತವಾಗಿವೆ. ಬಡ-ಮಧ್ಯಮ ವರ್ಗಗಳ ವಿಮಾ ಪಾಲಿಸಿಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಶೋಷಣೆ ಮಾಡುತ್ತಿವೆ. ಇಂತಹ ಪ್ರವೃತ್ತಿ ನಿಲ್ಲಬೇಕು. ಈ ನಿಟ್ಟಿನಲ್ಲಿ ವಿಮಾ ಏಜೆಂಟರುಗಳ ಒಕ್ಕೂಟದ ಜವಾಬ್ದಾರಿ ಹೆಚ್ಚಿದೆ ಎಂದು ಹೇಳಿದರು. 

ಪರಿಹಾರ ನಿಧಿಯೂ ದುರುಪಯೋಗ: ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೂಡ ದುರುಪಯೋಗ ಆಗಿರುವುದನ್ನು ನಾನು ಸ್ವತಃ ಕಂಡಿದ್ದೇನೆ. ನಾನು ಮುಖ್ಯಮಂತ್ರಿ ಆಗಿದ್ದಾಗ, ಪರಿಹಾರ ನಿಧಿಯಿಂದ ಬಡ ರೋಗಿಗಳಿಗೆ ಆರ್ಥಿಕ ನೆರವು ನೀಡಿದ್ದೆ. ನಂತರ ಅನಿರೀಕ್ಷಿತವಾಗಿ ಆ ಆಸ್ಪತ್ರೆಗಳಿಗೆ ಭೇಟಿ ನೀಡಿದಾಗ, ಅದು ಮಧ್ಯವರ್ತಿಗಳ ಪಾಲು ಆಗಿರುವುದು ಕಂಡುಬಂತು. ಆದ್ದರಿಂದ ಈ ರೀತಿಯ ದುರುಪಯೋಗಗಳನ್ನು ತಡೆಗಟ್ಟುವ ಅವಶ್ಯಕತೆ ಇದೆ ಎಂದರು.  

ಅನ್ನ ಮತ್ತು ಅಕ್ಷರಕ್ಕಿಂತ ಮುಖ್ಯವಾದುದು ಮನುಷ್ಯನ ಆರೋಗ್ಯ. ಆದರೆ, ದುಶ್ಚಟ, ಪರಿಸರ ಹಾಳಾಗುತ್ತಿರುವುದು, ಕಳಪೆ ಗುಣಮಟ್ಟದ ಆಹಾರ ಮತ್ತಿತರ ಸಮಸ್ಯೆಗಳ ನಡುವೆಯೂ ದೇಶದ 125 ಕೋಟಿ ಜನರ ಆರೋಗ್ಯ ಕಾಪಾಡುವುದು ಒಂದು ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಪೂರಕ ಹೆಜ್ಜೆಗಳನ್ನು ಇಟ್ಟಿದೆ. ಇದಕ್ಕೆ ಜನ ಮತ್ತು ವಿಮಾ ಕಂಪೆನಿಗಳು ಮತ್ತು ಏಜೆಂಟರ ಸಹಕಾರವೂ ಮುಖ್ಯ ಎಂದರು.

ಇದೇ ವೇಳೆ ಎಲ್ಲ ಪ್ರಕಾರದ ವಿಮೆಗಳಿಗೆ ಏಕರೂಪದ ವಿಮಾ ಸೌಲಭ್ಯ ಮತ್ತು ಕಮೀಷನ್‌ ನೀಡಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಜನರಲ್‌ ಇನ್ಷೊರನ್ಸ್‌ ಏಜೆಂಟ್ಸ್‌ ಫೆಡರೇಷನ್‌ ಇಂಟಿಗ್ರೇಟೆಡ್‌ ಮನವಿ ಸಲ್ಲಿಸಿತು. ಅಧ್ಯಕ್ಷ ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ಯುನೈಟೆಡ್‌ ಇಂಡಿಯಾ ಇನ್ಷೊರನ್ಸ್‌ ಲಿ., ಬೆಂಗಳೂರು ಪ್ರಾದೇಶಿಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಡಾ.ಎಂ.ಅಬ್ದುಲ್‌ ಅಜೀಜ್‌, ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಎಸ್‌.ಬಿ. ಶ್ರೀನಿವಾಸಾಚಾರಿ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.