ಶಿವಗಂಗೆಯಲ್ಲಿ ನೀರಿಗೆ  ತತ್ವಾರ

Team Udayavani, May 8, 2017, 12:25 PM IST

sivgange.jpg

ನೆಲಮಂಗಲ: ಬೆಟ್ಟದ ತಪ್ಪಲಿನಲ್ಲಿ ಇತಿಹಾಸ ಪ್ರಸಿದ್ಧ ದೇವಾಲಯ, ಹನಿ ನೀರಿಲ್ಲದೇ ಒಣಗಿ ನಿಂತಿರುವ ಕೊಳವೆ ಬಾವಿಗಳು, ನೆಲ್ಲಿಗಳು ಇದು ತಾಲೂಕಿನ ಶಿವಗಂಗೆ ಗ್ರಾಮದಲ್ಲಿ ಕಂಡು ಬರುವ ದೃಶ್ಯಗಳು. ದಕ್ಷಿಣ ಕಾಶಿ ಎಂದೇ ಕರೆಯುವ ಗವಿಗಂಗಾಧರೇಶ್ವರ ಪುಣ್ಯಕ್ಷೇತ್ರದಲ್ಲಿ (ಶಿವಗಂಗೆ ಬೆಟ್ಟ) ಸಾಕ್ಷಾತ್‌ ಪರಮಶಿವನ ಜೊತೆಯಲ್ಲಿ ಗಂಗೆಯೂ ನೆಲೆಸಿದ್ದು, ಈ ಗ್ರಾಮದಲ್ಲಿ ಇದುವರೆಗೂ ನೀರಿಗಾಗಿ ಬರ ಬಂದಿರಲಿಲ್ಲ. ಆದರೆ, ಈ ಬಾರಿಯ ಬಿರು ಬೇಸಿಗೆಯಿಂದ ಇದ್ದ ನೀರು ಇಂಗಿಹೋಗಿದೆ.

ಗ್ರಾಮದ ಪ್ರತಿ ಮನೆಯಲ್ಲೂ ಬಾವಿಗಳಿವೆ. ಆದರೆ, ಯಾವುದರಲ್ಲೂ ಹನಿನೀರಿಲ್ಲ. ಬಿಸಿಲಿನ ಪ್ರತಾಪಕ್ಕೆ ನೀರು ಸಿಗದೆ ಗ್ರಾಮಸ್ಥರು ಜೀವ ಜಲಕ್ಕಾಗಿ ಪರದಾಡುತ್ತಿದ್ದಾರೆ. ದೇವರ ಪೂಜೆಗೂ ನೀರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಗ್ರಾಪಂನಿಂದ ವಾರಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಆದರೆ, ಅದೂ ಸಾಕಾಗದೆ ಜನರು ಹಣ ಕೊಟ್ಟು ಟ್ಯಾಂಕರ್‌ ನೀರು ಖರೀದಿ ಮಾಡಿ ದಿನನಿತ್ಯ ಬಳಸುವಂತಾಗಿದೆ.

ಈ ಗ್ರಾಮದಲ್ಲಿ ಸಾಕ್ಷಾತ್‌ ಗಂಗೆಮಾತೆ ವಾಸವಾಗಿದ್ದಾಳೆಂದು ಹೇಳಲಾಗುತ್ತೆ. ಈ ಪುಣ್ಯಕ್ಷೇತ್ರದಲ್ಲಿ ಎಂದೂ ನೀರು ಬತ್ತಿಹೋಗಿರುವ ಉದಾಹರಣೆಗಳೇ ಇಲ್ಲ. ಪೂರ್ವಿಕರ ಕಾಲದಿಂದಲೂ ಈ ಗ್ರಾಮದಲ್ಲಿನ ಪ್ರತಿ ಮನೆಯಲ್ಲಿಯೂ ಬಾವಿಗಳಿದ್ದು, ಕೈಗೆಟಕುವಷ್ಟು ನೀರು ತುಂಬಿ ತುಳುಕುತ್ತಿತ್ತು. ಆದರೆ, ಈ ಬಾರಿ ಭೀಕರ ಬರಗಾಲದ ಕಾರಣ ನೀರಿನ ಅಭಾವ ಉಂಟಾಗಿದೆ. ಗ್ರಾಮಸ್ಥರಲ್ಲದೇ, ದೇವಾಲಯಕ್ಕೆ ಬರುವಂತಹ ಭಕ್ತರು ನೀರಿಗಾಗಿ ಪರದಾಡುವಂತಾಗಿದೆ.

ಸದ್ಯ ಗ್ರಾಮಸ್ಥರು ಟ್ಯಾಂಕರ್‌ ಮೂಲಕ ಹಣಕೊಟ್ಟು ನೀರು ತರಿಸಿಕೊಳ್ಳುತ್ತಿದ್ದು, ಪ್ರತಿ ತಿಂಗಳು ನೀರಿಗಾಗಿ ಎರಡು ಮೂರು ಸಾವಿರ ರೂ.ಖರ್ಚು ಮಾಡುತ್ತಿದ್ದಾರೆ, ಗ್ರಾಪಂ ಅಧಿಕಾರಿಗಳು ದೇವಾಲಯಕ್ಕೆ ಬರುವಂತಹ ಭಕ್ತರಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ಗಂಗೆ ವಾಸವಿರುವ ಶಿವಗಂಗೆ ಪುಣ್ಯ ಕ್ಷೇತ್ರದಿಂದಲೇ ಗಂಗೆ ಮಾಯವಾಗುವಂತೆ ಮಾಡಿದೆ, ಆದಷ್ಟು ಬೇಗ ವರುಣ ಕರುಣೆ ತೋರಲಿ ಅಂತ ಗ್ರಾಮಸ್ಥರು ಗವಿ ಗಂಗಾಧರೇಶ್ವರನನ್ನು ಜಪಿಸುತ್ತಿದ್ದಾರೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.