“ಮೌಲ್ಯ ಉಳಿಸಿಕೊಂಡ ನಿಜವಾದ ನೇತಾರ ಬಾಳಪ್ಪ’


Team Udayavani, Feb 25, 2017, 11:19 AM IST

2402bteph2.jpg

ಬಂಟ್ವಾಳ : ಬದುಕಿನಲ್ಲಿ ಮೌಲ್ಯಗಳನ್ನು ಉಳಿಸಿ ಕೊಂಡವರು ಮಾತ್ರ ನಿಜವಾದ ನೇತಾರರು. ಡಾಣ ಅಮ್ಮೆಂಬಳ ಬಾಳಪ್ಪ ಜೀವನಪೂರ್ತಿ ಮೌಲ್ಯಗಳ ಪ್ರೇರಕರಾಗಿದ್ದರು ಎಂದು ಮಂಗಳೂರು ವಿವಿ ಸಿಂಡಿಕೇಟ್‌ ಮಾಜಿ ಸದಸ್ಯ ಪಿ.ವಿ.ಮೋಹನ್‌ ಹೇಳಿದರು.

ಅವರು  ಬಂಟ್ವಾಳ ಎಸ್‌ವಿಎಸ್‌ ಕಾಲೇಜು ಸಭಾಂಗಣದಲ್ಲಿ ಡಾಣ ಅಮ್ಮೆಂಬಳ ಬಾಳಪ್ಪ ಸೇವಾ ಪ್ರತಿಷ್ಠಾನ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಜಂಟಿ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರ  ಡಾಣ ಅಮ್ಮೆಂಬಳ ಬಾಳಪ್ಪ ಅವರ 96ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿದರು.

ರಾಮ್‌ಮನೋಹರ ಲೋಹಿಯಾ ಅಭಿಮಾನಿಯಾಗಿದ್ದ ಬಾಳಪ್ಪ ಅವರು ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿದವರು. ರಾಜಕೀಯ ಮೌಲ್ಯಕ್ಕಿಂತ ವೈಯಕ್ತಿಕ ಜೀವನ ಮೌಲ್ಯ ಮುಖ್ಯ. ಮೌಲ್ಯಗಳನ್ನು ಅನುಕೂಲಕ್ಕೆ ತಕ್ಕಂತೆ ಬದಲಾಯಿಸುವುದಲ್ಲ. ದ್ವೇಷ, ಅಸಹಿಷ್ಣುತೆ ಇಂದಿನ ರಾಜಕೀಯದಲ್ಲಿ ಕಂಡು ಬರುತ್ತಿದ್ದು ನೈತಿಕತೆ ಇಲ್ಲವಾಗಿದೆ. ಸಮಾನತೆ, ಸಾಮಾಜಿಕ ನ್ಯಾಯ ರಾಜಕೀಯದಿಂದ ಸಿಗುವಂತಾಗಬೇಕು. ಧರ್ಮದ ಹೆಸರಿನಲ್ಲಿ ರಾಜಕೀಯ ಸಲ್ಲದು. ದೇಶವು ಧರ್ಮ ನಿರಪೇಕ್ಷಿತ ಸಿದ್ಧಾಂತ ಹೊಂದಿದ್ದು ಎಲ್ಲಾ ಮತಧರ್ಮಗಳು ಒಳ್ಳೆಯದನ್ನು ಹೇಳಿವೆ. ಇಂದಿನ ಯುವಕರು ದೇಶದ ಎಲ್ಲಾ ವರ್ಗದ ಜನರನ್ನು ಪ್ರೀತಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಇಂದಿನ ರಾಜಕೀಯ ಹಳಿ ತಪ್ಪುತ್ತಿದ್ದು ಈ ಬಗ್ಗೆ ಯುವ ಜನರು ಜಾಗೃತರಾಗಿ ಜಾತ್ಯತೀತ,  ಪ್ರಜಾಪ್ರಭುತ್ವ ಉಳಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ. ಮೋಹನ ರಾವ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಡಾ| ಬಾಳಪ್ಪ ಅವರ ಜನ್ಮ ದಿನಾಚರಣೆ ಆಚರಿಸುವುದು ಹೆಮ್ಮೆಯ ವಿಚಾರ. ರಾಷ್ಟ್ರ ರಾಜಕಾರಣಕ್ಕೆ ಅಮ್ಮೆಂಬಳ ಅವರ ಕೊಡುಗೆ ಮಹತ್ವದ್ದು. ಅವರು ಬಂಟ್ವಾಳ ತಾಲೂಕಿನವರು ಎನ್ನುವುದು ನಮಗೆ ಹೆಮ್ಮೆಯಾಗಿದೆ ಎಂದರು.

ಸ್ವಾತಂತ್ರ್ಯಯೋಧ ಡಾ| ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ ಬಂಟ್ವಾಳ ಇದರ ಅಧ್ಯಕ್ಷ, ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,  ಪ್ರತಿಷ್ಠಾನದ ಮೂಲಕ ಅಮ್ಮೆಂಬಳ ಅವರ ತತ್ವಸಿದ್ಧಾಂತವನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸುವ ಮೂಲಕ ಮುಂದಿನ ಪೀಳಿಗೆಗೆ ದೇಶಭಕ್ತಿ, ದೇಶ ಪ್ರೇಮದ ಮನೋಭಾವ ಮೂಡಿಸುವುದು ಅಗತ್ಯವಿದೆ ಎಂದರು.

ಬಂಟ್ವಾಳ ಎಸ್‌ವಿಎಸ್‌ ಕಾಲೇಜು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್‌ ಶುಭ ಹಾರೈಸಿದರು.

ಸಾಮಾಜಿಕ ನ್ಯಾಯ ಕಲ್ಪಿಸಿದವರು
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ. ಕುಲಾಲ್‌ ಪ್ರಸ್ತಾವನೆ ನೀಡಿ ಡಾ| ಬಾಳಪ್ಪ  ಕ್ವಿಟ್‌ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ ಬ್ರಿಟಿಷರ ವಿರುದ್ದ ಹೋರಾಡಿ ಜೈಲು ಶಿಕ್ಷೆ ಅನುಭವಿಸಿದವರು.  ಕಾರ್ಮಿಕರು, ಕೃಷಿಕರ ಬಗ್ಗೆ ನ್ಯಾಯೋಚಿತ ಹೋರಾಟ ನಡೆಸಿ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸಿದವರು ಎಂದು ಹೇಳಿದರು. ಹಿರಿಯ ಸಾಮಾಜಿಕ ನೇತಾರ ಎ. ಸಿ.ಭಂಡಾರಿ, ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಕೆ. ದಯಾನಂದ ಬೆಳ್ಳೂರು ಉಪಸ್ಥಿತರಿದ್ದರು.

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ| ತುಕಾರಾಂ ಪೂಜಾರಿ, ಜಿಲ್ಲಾ ಕಸಾಪ ಗೌ.ಕಾರ್ಯದರ್ಶಿ  ಬಿ. ತಮ್ಮಯ್ಯ, ಬಂಟ್ವಾಳ ಕಸಾಪ ನಿಕಟಪೂರ್ವ ಅಧ್ಯಕ್ಷ ಜಯಾನಂದ ಪೆರಾಜೆ,  ದಾಮೋದರ ಬಿ.ಎಂ.,  ಧರ್ಮಜಾಗರಣ ಪ್ರತಿಷ್ಠಾನ ಅಧ್ಯಕ್ಷ ಕೈಯೂರು ನಾರಾಯಣ ಭಟ್‌, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಸದಸ್ಯ ಪರಮೇಶ್ವರ ಎಂ., ಬಂಟ್ವಾಳ ಸಿಪಿಐ ಕಾರ್ಯದರ್ಶಿ ಶೇಖರ ಬಿ.,  ಭೂನ್ಯಾಯ ಮಂಡಳಿ ಮಾಜಿ ಸದಸ್ಯ ಮುತ್ತಪ್ಪ ಪೂಜಾರಿ ಮೊದಲಾದವರು ಪಾಲ್ಗೊಂಡಿದ್ದರು.ಬಂಟ್ವಾಳ ತಾ| ಕನ್ನಡ ಭವನ ನಿರ್ಮಾಣ ಸಮಿತಿ ಸಂಚಾಲಕ ಗಂಗಾಧರ ಭಟ್‌ ಕೊಳಕೆ ಸ್ವಾಗತಿಸಿ, ಟ್ರಸ್ಟ್‌ ಕಾರ್ಯದರ್ಶಿ ಉಮೇಶ್‌ ಪಿ. ಕೆ. ವಂದಿಸಿದರು. ಉಪನ್ಯಾಸಕ ಚೇತನ್‌ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು.
 

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.