ವಿಟ್ಲ  ತಾ| ರಚನೆಗೆ ರಾಜಕೀಯ ಇಚ್ಛಾಶಕ್ತಿಯೇ ತೊಡಕು

Team Udayavani, Mar 19, 2017, 2:15 PM IST

Vittal.jpg

ವಿಟ್ಲ: ಈ ಬಜೆಟ್‌ನಲ್ಲಿ ಕಡಬ, ಮೂಡಬಿದಿರೆ ತಾಲೂಕುಗಳ ಘೋಷಣೆಯಾದಾಗ ವಿಟ್ಲ ತಾಲೂಕು ರಚನೆ ಸಮಿತಿಯ ಹೋರಾಟಗಾರರು ನಿರಾಶೆ ವ್ಯಕ್ತಪಡಿಸಿದರು. 

“ನಮ್ಮ ಹೋರಾಟವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ರಾಜಕೀಯ ಇಚ್ಛಾಶಕ್ತಿಯೇ ಇಲ್ಲ’ ಎಂಬುದು ಅವರ ಬೇಸರದ ನುಡಿ. 

ವಿಸ್ತೀರ್ಣದಲ್ಲಿ ದೊಡ್ಡದು
ಬಂಟ್ವಾಳ ತಾಲೂಕಿನ ಮೂರು ಹೋಬಳಿಗಳು ಬಂಟ್ವಾಳ, ಪಾಣೆಮಂಗಳೂರು ಮತ್ತು ವಿಟ್ಲ. ಇವುಗಳಲ್ಲಿ ಗ್ರಾಮಗಳ ಲೆಕ್ಕಾಚಾರದಲ್ಲಿ ಬಂಟ್ವಾಳ ದೊಡ್ಡದು. ವಿಸ್ತೀರ್ಣ ಲೆಕ್ಕಾಚಾರದಲ್ಲಿ ವಿಟ್ಲ ಹೋಬಳಿ ದೊಡ್ಡದು. ಬಂಟ್ವಾಳದಲ್ಲಿ 31 ಗ್ರಾಮಗಳು, ಪಾಣೆಮಂಗಳೂರು ಹೋಬಳಿಯಲ್ಲಿ 30 ಗ್ರಾಮಗಳು ಮತ್ತು ವಿಟ್ಲ ಹೋಬಳಿಯಲ್ಲಿ 23 ಗ್ರಾಮಗಳಿವೆ.ವಿಸ್ತೀರ್ಣದ ಲೆಕ್ಕಾಚಾರದಲ್ಲಿ ವಿಟ್ಲವು 64,158.59 ಚದರಡಿ ಇದ್ದು ವಿಟ್ಲವೇ ಉಳಿದವುಗಳಿಗಿಂತ ದೊಡ್ಡದಾಗಿದೆ. ವಿಟ್ಲ ಹೋಬಳಿಯ ಕರೋಪಾಡಿ, ಮಾಣಿಲ ಮೊದಲಾದ ದೂರದ ಹಾಗೂ ಗಡಿಭಾಗದ ನಾಗರಿಕರು ಕಂದಾಯ ಇಲಾಖೆ ಕೆಲಸಗಳಿಗೆ 45 ಕಿ.ಮೀ. ದೂರದ ಬಂಟ್ವಾಳದ ತಾಲೂಕು ಕೇಂದ್ರಕ್ಕೆ ಮತ್ತು ಶಾಸಕರನ್ನು ಸಂಪರ್ಕಿಸಲು ಪುತ್ತೂರಿಗೂ ಅಲೆದಾಡುವ ಸ್ಥಿತಿ.

ಬಹುಕಾಲದ ಬೇಡಿಕೆ
ಸರಕಾರ 1973ರಲ್ಲಿ ತಾಲೂಕು ಪುನಾರಚನೆ ಬಗ್ಗೆ ಅಧ್ಯಯನ ನಡೆಸಲು ವಾಸುದೇವ ರಾವ್‌ ಸಮಿತಿಯನ್ನು ನೇಮಿಸಿತ್ತು.ಆಗ ವಿಟ್ಲದ ಬಾಬು ಶೆಟ್ಟಿ, ದೇವಸ್ಯ ನಾರಾಯಣ ಭಟ್‌, ಮಾಜಿ ಸಚಿವ ವಿಟuಲದಾಸ ಶೆಟ್ಟಿ ಮನವಿ ನೀಡಿ ತಾಲೂಕು ರಚನೆಗೆ ಒತ್ತಾಯಿಸಿದ್ದರು. ಬಳಿಕ 1985ರಲ್ಲಿ ಹುಂಡೇಕರ್‌ ಸಮಿತಿಯ ಮುಂದೆ ಕೂಡೂರು ಕೃಷ್ಣ ಭಟ್ಟರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. 2009ರಲ್ಲಿ ಮತ್ತೆ ಎಂ.ಪಿ.ಪ್ರಕಾಶ್‌ ಅವರಿಗೆ ಕರಾವಳಿ ಕರ್ನಾಟಕ ಗಡಿ, ನೆಲ ಜಲ ಸಂರಕ್ಷಣಾ ಸಮಿತಿಯ ಅಧ್ಯಕ್ಷ ರಾಮಣ್ಣ ಶೆಟ್ಟಿ ಪಾಲಿಗೆ, ಮುರುವ ನಡುಮನೆ ಮಹಾಬಲ ಭಟ್‌ ನೇತೃತ್ವದಲ್ಲಿ ಹಾಗೂ 2013ರಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು.

ಹೀಗೆ ತಾಲೂಕಾಗಬೇಕೆಂಬ ಹೋರಾಟ ಕಾಗದ ಪತ್ರ ವ್ಯವಹಾರದಲ್ಲಿರುವಾಗಲೇ ವಿಟ್ಲ ವಿಧಾನಸಭಾ ಕ್ಷೇತ್ರ ಮಾಯವಾಗಿ ಮೂರು ವಿಧಾನಸಭಾ ಕ್ಷೇತ್ರಕ್ಕೆ ಹಂಚಲಾಯಿತು. ಬಂಟ್ವಾಳ ತಾಲೂಕಿನ ವಿಟ್ಲಪೇಟೆ, ಅಳಿಕೆ, ಪುಣಚ, ಕೇಪು, ವಿಟ್ಲಮುಟ್ನೂರು, ಇಡಿRದು, ಪೆರುವಾಯಿ, ಮಾಣಿಲ ಮೊದಲಾದ ಗ್ರಾಮಗಳು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸೇರ್ಪಡೆಗೊಂಡು ಇಲ್ಲಿನ ರಾಜಕೀಯ ಶಕ್ತಿಗಳು ಚೆಲ್ಲಾಪಿಲ್ಲಿಯಾದವು.

ಹೋಬಳಿಯಲ್ಲಿ  ಏನೇನಿದೆ
ಸಬ್‌ ರಿಜಿಸ್ಟ್ರಾರ್‌ ಕಚೇರಿ, ನಾಡ ಕಚೇರಿ, ಪೊಲೀಸ್‌ ಠಾಣೆ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರ, ಮೆಸ್ಕಾಂ ಉಪವಿಭಾಗ, ಕೆಎಸ್‌ಆರ್‌ಟಿಸಿ ಬಸ್‌  ನಿಲ್ದಾಣ, ಕೇಂದ್ರೀಯ ತೋಟಗಾರಿಕೆ ಬೆಳೆಗಳ ಸಂಶೋಧನಾ ಕೇಂದ್ರ, ಎಲ್ಲ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳು, ಗ್ರಾಮೀಣ ಸಹಕಾರಿ ಬ್ಯಾಂಕ್‌, 45ಕ್ಕೂ ಅಧಿಕ ಸಹಕಾರಿ ಸಂಘಗಳು, ಕ್ಯಾಂಪ್ಕೋ ಶಾಖೆ, ಮಹಿಳಾ ಸೌಹಾರ್ದ ಸಹಕಾರಿ ಸಂಘ, ಅಳಿಕೆ ಸತ್ಯಸಾಯಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸರಕಾರಿ ಮತ್ತು ಖಾಸಗಿ ಐಟಿಐ, ಪ್ರವಾಸಿ ಮಂದಿರ, ಪಿಯು ಕಾಲೇಜು, ಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆ, ಮೈತ್ರೇಯಿ ಗುರುಕುಲ, ಹಲವು ಪ್ರೌಢ-ಪ್ರಾಥಮಿಕ ಶಾಲೆಗಳು ಇನ್ನಿತರ ಹಲವು ಸಂಘ-ಸಂಸ್ಥೆಗಳು ವಿಟ್ಲ ಹೋಬಳಿಯ ಪ್ರಮುಖ ಕೇಂದ್ರ ವಿಟ್ಲದಲ್ಲಿ ಇವೆ.

ವಿಶ್ವವಿಖ್ಯಾತಿಯ  ದೇಗುಲ 
ಗಜಾಕೃತಿಯನ್ನು ಹೊಂದಿರುವ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ, ಮಾಣಿಲ ಶ್ರೀಧಾಮ ಮಹಾಲಕ್ಷಿ$¾à ಕ್ಷೇತ್ರ, ಬಾಳೆಕೋಡಿ ಕಾಶೀಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರ, ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರ, ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠ, ವಿಟ್ಲ ಮೇಗಿನಪೇಟೆಯ ಕೇಂದ್ರ ಜುಮ್ಮಾ ಮಸೀದಿ, ಕನ್ಯಾನ ರಹ್ಮಾನಿಯ ಜುಮ್ಮಾ ಮಸೀದಿ, ವಿಟ್ಲ ಶೋಕಮಾತಾ ಇಗರ್ಜಿ, ಚಂದ್ರನಾಥ ಸ್ವಾಮಿ ಬಸದಿ, ಅಲ್ಲದೇ ಹಿಂದೂ ಕ್ರೈಸ್ತ ಮುಸಲ್ಮಾನರ ಅದೆಷ್ಟೋ ಧಾರ್ಮಿಕ ಕೇಂದ್ರಗಳಿವೆ. 

23 ಗ್ರಾಮಗಳು 
ವಿಟ್ಲ ಹೋಬಳಿಯಲ್ಲಿ ಒಟ್ಟು 23 ಗ್ರಾಮಗಳಿವೆ. ಬಿಳಿಯೂರು, ಪೆರ್ನೆ, ಕೆದಿಲ, ಮಾಣಿ, ಪೆರಾಜೆ, ಅನಂತಾಡಿ, ನೆಟ್ಲಮುಟ್ನೂರು, ಇಡಿRದು, ಕುಳ, ವೀರಕಂಭ, ಬೋಳಂತೂರು, ವಿಟ್ಲಮುಟ್ನೂರು, ಕೇಪು, ಪುಣಚ, ಪೆರುವಾಯಿ, ಮಾಣಿಲ, ಅಳಿಕೆ, ಕನ್ಯಾನ, ಕರೋಪಾಡಿ, ಕೊಳ್ನಾಡು, ಸಾಲೆತ್ತೂರು, ವಿಟ್ಲಪಟ್ನೂರು, ವಿಟ್ಲಕಸಬಾ ಗ್ರಾಮಗಳು ಒಳಪಟ್ಟಿವೆ. ಈ ಗ್ರಾಮಗಳಲ್ಲಿ ಕೆಲವು ಬಂಟ್ವಾಳ ವಿಧಾನಸಭಾಕ್ಷೇತ್ರಕ್ಕೆ ಒಳಪಟ್ಟಿವೆ. ವಿಟ್ಲ ಹೋಬಳಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಅಂತಾರಾಜ್ಯ ಹೆದ್ದಾರಿ ಸಾಗುತ್ತದೆ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.