ಭಾಲ್ಕಿಯಲ್ಲಿ ಲಂಗೂರ್ಗಳು ಕಚ್ಚಿ 25 ಕ್ಕೂಹೆಚ್ಚು ಮಂದಿಗೆ ಗಾಯ
Team Udayavani, May 24, 2017, 4:28 PM IST
ಭಾಲ್ಕಿ : ಇಲ್ಲಿನ ಕಾಕನಾಳದಲ್ಲಿ ಕಪ್ಪು ಮುಖದ ಲಂಗೂರ್ ಕೋತಿಗಳು ಸಿಕ್ಕ ಸಿಕ್ಕವರಿಗೆ ಕಚ್ಚಿ ಗಾಯಗೊಳಿಸುತ್ತಿದ್ದು, ಗ್ರಾಮಸ್ಥರು ತೀವ್ರ ಆತಂಕದಲ್ಲಿ ಮನೆಯಿಂದ ಹೊರಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮೇ ತಿಂಗಳಿನ ಆರಂಭದಿಂದ 2 ಕೋತಿಗಳು ಮಹಿಳೆಯರು, ಮಕ್ಕಳು, ವೃದ್ಧರೂ ಸೇರಿದಂತೆ 25 ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿದ್ದು ಗ್ರಾಮದ ಜನರು ಕಂಗಾಲಾಗಿದ್ದಾರೆ.
ಇದೀಗ ಗ್ರಾಮದಲ್ಲಿ ಎಲ್ಲರೂ ಕೈಯಲ್ಲಿ ಬಡಿಗೆ ಸೇರಿದಂತೆ ಆಯುಧಗಳನ್ನು ಹಿಡಿದು ತಿರುಗುತ್ತಿದ್ದಾರೆ. ಮಹಿಳೆಯರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ.
ಅರಣ್ಯ ಇಲಾಖೆ ಸಿಬಂದಿಗಳು ಕಚ್ಚುವ ಕೋತಿಗಳನ್ನು ಹಿಡಿಯುವ ಕೋತಿಗಳ ಬದಲು ಬೇರೆ ಕೋತಿಯನ್ನು ಹಿಡಿದಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಶೀಘ್ರದಲ್ಲಿ ಕೋತಿಗಳನ್ನು ಸೆರೆ ಹಿಡಿದು ಸಮಸ್ಯೆಯಿಂದ ಪಾರು ಮಾಡಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಜನಪ್ರತಿನಿಧಿಗಳಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ