ಕ್ರೀಡಾ ಚಟುವಟಿಕೆಗೆ ಸೌಲಭ್ಯ ಕೊರತೆ

Team Udayavani, Aug 21, 2017, 11:56 AM IST

bidar 6.jpg

ಹುಮನಾಬಾದ: ದೈಹಿಕವಾಗಿ ಸದೃಢರಾಗಲು ಮನುಷ್ಯನಿಗೆ ಕ್ರೀಡೆಗಳು ಅವಶ್ಯ ಎಂದು ಅನೇಕರು ಹೇಳುತ್ತಾರೆ. ಆದರೆ ಇಲ್ಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಕ್ರೀಡಾಂಗಣ ಹಾಗೂ ಸೌಲಭ್ಯಗಳ ಕೊರತೆಯಿಂದಾಗಿ ಕ್ರೀಡೆಗೆ ಗ್ರಹಣ ಹಿಡಿದಂತಾಗಿದೆ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ 12ನೇ ಹಣಕಾಸು ಯೋಜನೆಯಡಿ ಕೆಆರ್‌ಐಡಿಎಲ್‌ ವತಿಯಿಂದ 42.25 ಲಕ್ಷ ರೂ. ವೆಚ್ಚದಲ್ಲಿ ಮಾಣಿಕನಗರದಲ್ಲಿ ನಿರ್ಮಾಣಗೊಂಡ ಕ್ರೀಡಾಂಗಣದಲ್ಲಿ ಸೌಲಭ್ಯಗಳ ಕೊರತೆ ಇದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಚುನಾಯಿತ ಜನ ಪ್ರತಿನಿಧಿಗಳು, ಅಧಿಕಾರಿಗಳಿಗೆ ಹಿಡಿ ಶಾಪ ಹಾಕುವಂತಾಗಿದೆ. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹಿಂದುಳಿಯುವ ಬೀದರ ಜಿಲ್ಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲೂ ಕೊನೆ ಸ್ಥಾನದಲ್ಲಿದ್ದಾರೆ. ಕಾರಣ ಮೂಲ ಸೌಲಭ್ಯಗಳ ಕೊರತೆ ಎಂಬುದು ದೈಹಿಕ ಶಿಕ್ಷಣ ಶಿಕ್ಷಕರ ಮಾತು. ಹೋಬಳಿ, ವಲಯ, ತಾಲೂಕು, ಜಿಲ್ಲೆ, ವಿಭಾಗೀಯ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಳುವ ಕ್ರೀಡಾಪಟುಗಳು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಸೋಲು ಅನುಭವಿಸುವುದು ಖಚಿತ. ಕಾರಣ ಜಿಲ್ಲೆಯ ಯಾವ ತಾಲೂಕು ಕೇಂದ್ರಗಳಲ್ಲೂ ಕ್ರೀಡೆಗಳ ಪ್ರೋತ್ಸಾಹಕ್ಕೆ ಸೂಕ್ತ ವ್ಯವಸ್ಥೆ ಇಲ್ಲ. ಅಲ್ಲದೇ ಬಹುತೇಕ ಶಾಲೆಗಳಲ್ಲಿ ಆಟದ ಮೈದಾನ ಕೂಡ ಇಲ್ಲ ಎಂಬುವುದು ಶಿಕ್ಷಕರ ಮಾತು. ಈ ಹಿನ್ನೆಲೆಯಲ್ಲಿ ಕ್ರೀಡೆಗಳ ಪ್ರೋತ್ಸಾಹಕ್ಕೆ ಸರ್ಕಾರ ಚಿಂತನೆ ನಡೆಸುವ ಅವಶ್ಯಕತೆ ಇದೆ. ಸೌಕರ್ಯ ಕೊರತೆ: ಪ್ರತಿವರ್ಷ ವಲಯ ಮಟ್ಟ ಹಾಗೂ ತಾಲೂಕು ಮಟ್ಟದ ಕ್ರೀಡಾಕೊಟಗಳು ಮಾಣಿಕ ನಗರದ ಕ್ರೀಡಾಂಗಣದಲ್ಲಿ ನಡೆಯುತ್ತವೆ. ಆದರೆ ಕ್ರೀಡಾಂಗಣದಲ್ಲಿ ಶೌಚಾಲಯ, ಕುಡಿವ ನೀರಿನ ಕೊರತೆ ಇದ್ದು, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕಿಯರು ಹೆಚ್ಚು ಸಮಸ್ಯೆ ಎದುರಿಸುವಂತಾಗಿದೆ. ವಲಯ ಮಟ್ಟದ ಕ್ರೀಡೆಗೆ ಸುಮಾರು 500, ತಾಲೂಕು ಮಟ್ಟದ ಕ್ರೀಡೆಗಳಲ್ಲಿ ಸುಮಾರು 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಮಳೆ ಬಂದರೆ ಮಕ್ಕಳು ನಿಲ್ಲಲೂ ಕೂಡ ಛಾವಣಿಯ ವ್ಯವಸ್ಥೆ ಇಲ್ಲಿಲ್ಲ. ಖೋ ಖೋ, ಕಬ್ಬಡಿ, ವಾಲಿಬಾಲ್‌, ಹಾಕಿ, ಫುಟ್‌ಬಾಲ್‌, ಬಾಸ್ಕೇಟ್‌ ಬಾಲ್‌, ಬ್ಯಾಟ್‌ಮೆಂಟನ್‌, ಬಾಲ್‌ ಬ್ಯಾಟಮೀಟನ್‌, ಟೇಬಲ್‌ ಟೆನ್ನಿಸ್‌, ಥ್ರೋಬಾಲ್‌, ಕುಸ್ತಿ, ಅಥ್ಲೆಟಿಕ್ಸ್‌, ಯೋಗ, ಚಕ್ರ ಎಸೆತ, ಗುಂಡು ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ, ಓಟದ ಸ್ಪರ್ಧೆಗಳು ಇಲ್ಲಿ ನಡೆಯುತ್ತವೆ. ಆದರೆ ಕಬ್ಬಡಿ ಸ್ಪರ್ಧೆಗೆ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳು ಗಾಯಗೊಂಡ ಘಟನೆಗಳು ನಡೆಯುತ್ತಿವೆ. ಬ್ಯಾಟ್‌ ಮೆಂಟನ್‌, ಬಾಲ್‌ ಬ್ಯಾಟಮೀಟನ್‌ ಆಟಗಳಿಗೆ ಒಳಾಂಗಣ ಕ್ರೀಡಾಂಗಣ ವ್ಯವಸ್ಥೆ ಇಲ್ಲದ ಕಾರಣ ಸೂಕ್ತ ಸೌಲಭ್ಯಗಳಿಲ್ಲದ ಖಾಸಗಿ ಗೋದಾಮಿನಲ್ಲಿ ಆಟ ಆಡಿಸುವ ಅನಿವಾರ್ಯತೆ ಶಿಕ್ಷಕರಿಗೆ ಎದುರಾಗಿದೆ. ಅಲ್ಲದೆ ಭಾಸ್ಕೇಟ್‌ ಬಾಲ್‌ ಕ್ರೀಡೆಗಂತೂ ಯಾವುದೇ ಸೌಕರ್ಯ ಇಲ್ಲದ ಕಾರಣ ಯಾವ ಶಾಲೆಯೂ ಈ ಸ್ಪರ್ಧೆಗೆ ಮುಂದಾಗುತ್ತಿಲ್ಲ. ಅನುದಾನ ಕೊರತೆ: ವಿವಿಧ ಹಂತದ ಕ್ರೀಡಾಕೂಟಗಳಿಗೆ ಶಿಕ್ಷಣ ಇಲಾಖೆ ಅಥವಾ ಸರ್ಕಾರದಿಂದ ಸೂಕ್ತ ಪ್ರಮಾಣದ ಅನುದಾನ ದೊರೆಯದ ಕಾರಣ ಶಿಕ್ಷಣ ಇಲಾಖೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸುವ ಸ್ಥಿತಿ ನಿರ್ಮಾಣಗೊಂಡಿದೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಾವಿರಾರೂ ರೂ. ಖರ್ಚು ಮಾಡಿ ಕ್ರೀಡಾಕೂಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಶಾಲೆಗಳಿಂದ ವಸೂಲಿ ಮಾಡುವ ಕ್ರೀಡಾ ನಿಧಿ  ಹಣವನ್ನು ಕ್ರೀಡೆಗೆ ಬರುವ ಕ್ರೀಡಾಪಟು ಹಾಗೂ ಮೇಲ್ವಿಚಾರಕರಿಗೆ ನೀಡಲು ಬಳಸಲಾಗುತ್ತಿದೆ ಎಂದು ದೈಹಿಕ ಶಿಕ್ಷಕರು ತಿಳಿಸಿದ್ದು, ಕ್ರೀಡೆಗಳ ಪ್ರೋತ್ಸಾಹಕ್ಕೆ ಸರ್ಕಾರ ವಿಶೇಷ ಅನುದಾನ ನೀಡುವ ಕುರಿತು ಚಿಂತನೆ ನಡೆಸುವ ಅವಶ್ಯಕತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.