ಮಾರಣಾಂತಿಕ ರೇಬಿಸ್‌ ತಡೆಗೆ ಜಾಗೃತಿ ಅಗತ್ಯ

Team Udayavani, Sep 23, 2017, 10:43 AM IST

bid-3.jpg

ಬೀದರ: ಪ್ರಾಣಿಗಳ ಮೂಲಕ ಮನುಷ್ಯರಿಗೆ ಹರಡುವ ರೇಬಿಸ್‌ ಸೋಂಕು ಮಾರಣಾಂತಿಕವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಿಸಿದಲ್ಲಿ ಪ್ರಾಣಹಾನಿ ತಡೆಯಲು ಸಾಧ್ಯವಿದೆ ಎಂದು ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಡೀನ್‌ ಡಾ| ಬಿ.ವಿ. ಶಿವಪ್ರಕಾಶ ಸಲಹೆ ನೀಡಿದರು.

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶು ವೈದ್ಯಕೀಯ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಶಾರದಾ ರೂಡಸೆಟ್‌ ಸಭಾಂಗಣದಲ್ಲಿ ನಡೆದ ವಿಶ್ವ ರೇಬಿಸ್‌ ದಿನಾಚರಣೆ ಮತ್ತು ನಾಯಿಗಳಿಗೆ ಉಚಿತ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ವೈದ್ಯಕೀಯ ಮಹಾವಿದ್ಯಾಲಯಗಳು ಈ ಕಾಯಿಲೆ ಬಗ್ಗೆ ಜನರಲ್ಲಿ ಸೂಕ್ತ ಜಾಗೃತಿ ಮೂಡಿಸಬೇಕಿದೆ. ಎಲ್ಲ ಪ್ರಾಣಿಗಳಿಗೂ ನಿಯಮಿತವಾಗಿ ಲಸಿಕೆ ನೀಡಲು ಮುಂದಾಗಬೇಕು ಎಂದು ಹೇಳಿದರು.

ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ| ಡಿ.ಎಸ್‌. ಹವಾಲ್ದಾರ ಮಾತನಾಡಿ, ರೇಬಿಸ್‌ ಸೋಂಕು ನಿಯಂತ್ರಣಕ್ಕೆ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜನರೆ ಮುಂದೆ ಬಂದು ತಮ್ಮ ಸಾಕು ಪ್ರಾಣಿಗಳಿಗೆ ಲಸಿಕೆ ಪಡೆಯಲು ಮುಂದಾಗುವಂತಹ ವಾತಾವರಣ ನಿರ್ಮಿಸುವ ಅಗತ್ಯವಿದೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಡಾ| ಚಂದ್ರಶೇಖರ ಪಾಟೀಲ ಮಾತನಾಡಿ, ಚಿಕ್ಕ ಮಕ್ಕಳು ಹೆಚ್ಚು ಪ್ರಮಾಣದಲ್ಲಿ ನಾಯಿ ಕಡಿತಕ್ಕೆ ಒಳಗಾಗುವುದರಿಂದ ರೇಬಿಸ್‌ ಸೋಂಕು ಮಕ್ಕಳಲ್ಲಿ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಜನರು ತಮ್ಮ ಸುತ್ತಲಿನಲ್ಲಿರುವ ನಾಯಿಗಳಿಗೆ ರೇಬಿಸ್‌ ಲಸಿಕೆ ನೀಡಿ ಮಕ್ಕಳನ್ನು ರಕ್ಷಿಸಬೇಕು ಎಂದು ಹೇಳಿದರು.

ಸಂಘದ ಅಧ್ಯಕ್ಷ ಡಾ| ಶಿವಶರಣಪ್ಪಾ ಯಲಗೊಡ, ವೈದ್ಯರಾದ ಡಾ| ಜೀನ್‌ ಕ್ರಿಸ್ಟೋಪ್‌, ಡಾ| ನಿಲೇಖಾ ದೇಸಾಯಿ, ಸಂಘದ ಉಪಾಧ್ಯಕ್ಷ ಡಾ| ಶ್ರೀಕಾಂತ ಬಿರಾದಾರ, ಪ್ರಧಾನ ಕಾರ್ಯದರ್ಶಿ ಡಾ| ನೀಲಕಂಠ ಚನಶೆಟ್ಟಿ, ಖಜಾಂಚಿ
ಡಾ| ಗಣಾಧೀಶ್ವರ ಹಿರೇಮಠ, ಸಂಘದ ಪದಾಧಿಕಾರಿಗಳು, ವೈದ್ಯರು, ಪಶುವೈದ್ಯಕೀಯ ಮಹಾವಿದ್ಯಾಲಯದ ಅಧ್ಯಾಪಕರು, ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು. ಬೀದಿ ನಾಯಿಗಳಿಗೆ ಲಸಿಕೆ: ಇದಕ್ಕೂ ಮುನ್ನ ನಗರದ ಗಾಂಧಿ  ಗಂಜ್‌ನಲ್ಲಿರುವ ಕೃಷಿ ಮಾರುಕಟ್ಟೆಯಲ್ಲಿ ಬೀದಿ ನಾಯಿಗಳಿಗೆ ರೇಬಿಸ್‌ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆರ್‌.ಸೆಲ್ವಮಣಿ ಅವರು ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.