ಪೊಲೀಸ್ ಠಾಣೆ ಆವರಣದಲ್ಲೇ ಗುಂಡುಪಾರ್ಟಿ;ASI ಸೇರಿ ಮೂವರು ಸಸ್ಪೆಂಡ್


Team Udayavani, Jun 14, 2017, 3:57 PM IST

Police-party.jpg

ವಿಜಯಪುರ: ಪೊಲೀಸ್ ಠಾಣೆಯ ಆವರಣದೊಳಗೆಯೇ ಎಎಸ್ಐ “ಗುಂಡು ಪಾರ್ಟಿ” ನಡೆಸಿದ್ದು, ಮಹಿಳಾ ಪೇದೆಯೊಬ್ಬರು ಮದ್ಯವನ್ನು ಸರಬರಾಜು ಮಾಡುತ್ತಿರುವ ದೃಶ್ಯವನ್ನೊಳಗೊಂಡ ವರದಿಯನ್ನು ಖಾಸಗಿ
ಟಿವಿ ಚಾನೆಲ್ ಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಗುಂಡು ಪಾರ್ಟಿ ನಡೆಸಿದ್ದ ಎಎಸ್ಐ ಸೇರಿದಂತೆ ಮೂವರನ್ನು ಅಮಾನತುಗೊಳಿಸಿ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಜೈನ್ ಆದೇಶ
ಹೊರಡಿಸಿದ್ದಾರೆ.

ಏನಿದು ಗುಂಡುಪಾರ್ಟಿ ಜಟಾಪಟಿ?
ವಿಜಯಪುರದ ಜಲನಗರ ಪೊಲೀಸ್ ಠಾಣೆಯ ಆವರಣದ ಕಲ್ಲು ಬೆಂಚಿನ ಮೇಲೆ ಎಎಸ್ಐ ಮಾಳೆಗಾಂವ್, ಪೇದೆಗಳಾದ ಪ್ರಕಾಶ್ ಸೊಡ್ಡಿ ಪಾರ್ಟಿ ಮಾಡುತ್ತಿರುವ ಹಾಗೂ ಅವರಿಗೆ ಮಹಿಳಾ ಕಾನ್ಸಟೇಬಲ್
ವೊಬ್ಬರು ಮದ್ಯವನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಖಾಸಗಿ ಚಾನೆಲ್ ಗಳು ವರದಿ ಮಾಡಿದ್ದವು.

ಈ ಘಟನೆ ಜಲನಗರ ಠಾಣೆಯಲ್ಲಿ ಮೇ 14ರಂದು ನಡೆದಿತ್ತು. ಈ ಗುಂಡುಪಾರ್ಟಿಯ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿ ಠಾಣೆಗೆ ಭೇಟಿ ನೀಡಿ ತರಾಟೆಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಮೊದಲಿಗೆ ಅವರು ಮದ್ಯ ಸೇವಿಸಿಲ್ಲ, ಸಾಂಬಾರ್ ಸೇವಿಸಿದ್ದು ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೆ ಘಟನೆಗೆ ಸಂಬಂಧಿಸಿದಂತೆ ಕೆಲವು ಸಂಘಟನೆಗಳು ಠಾಣೆ ಮುಂಭಾಗದಲ್ಲಿ ತೀವ್ರ ಪ್ರತಿಭಟನೆ ನಡೆಸಲು ಶುರು ಮಾಡಿದ್ದವು.

ಮೂವರ ಅಮಾನತು: 
ಎಎಸ್ಐ ಮಾಳೆಗಾಂವ್, ಪೊಲೀಸ್ ಪೇದೆ ಐ ವೈ ಈರಣ್ಣ ಸೊಡ್ಡಿ, ಮಹಿಳಾ ಪೇದೆ ಪದ್ಮಾವತಿ ರಾಠೋಡ್ ಅವರನ್ನು ಅಮಾನತುಗೊಳಿಸಿ ವಿಜಯಪುರ ಎಸ್ಪಿ ಕುಲದೀಪ್ ಜೈನ್ ಆದೇಶ ನೀಡಿದ್ದಾರೆ. ಪೊಲೀಸರು ಮದ್ಯಸೇವಿಸಿರುವ ಬಗ್ಗೆ ದೃಢಪಟ್ಟಿಲ್ಲ, ಈ ಬಗ್ಗೆ ಮತ್ತಷ್ಟು ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.