ನಟಿ, ಗಾಯಕಿ ಬಿದಿಶಾ ಬೆಝ್ಬುರ್ಹಾ ನಿಗೂಢ ಸಾವು;ಪತಿ ವಶಕ್ಕೆ
Team Udayavani, Jul 19, 2017, 9:43 AM IST
ಗುರುಗ್ರಾಮ: ಅಸ್ಸಾಂನ ನಟಿ, ಗಾಯಕಿ ಬಿದಿಶಾ ಬೆಝ್ಬುರ್ಹಾ ತನ್ನ ಫ್ಲ್ಯಾಟ್ನಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ 27 ರ ಹರೆಯದ ಬಿದಿಶಾ ಶವ ಕಂಡು ಬಂದಿದೆ. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತಿ ನಿಶಿತ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಿದಿಶಾ ಅಸ್ಸಾಂನ ಟಿವಿ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು.ಇತ್ತೀಚೆಗೆ ಬಾಲಿವುಡ್ ಚಿತ್ರ ಜಗ್ಗಾ ಜಾಸೂಸ್ ನ ಹಾಡಿನಲ್ಲೂ ಕಾಣಿಸಿಕೊಂಡಿದ್ದರು.ಧಾರಾವಾಹಿಗಳಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು.
ಅಕೌಂಟ್ಸ್ ಅಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದ ಬಿದಿಶಾ ಗುಜರಾತ್ ಮೂಲದ ನಿಶಿತ್ನನ್ನು ವಿವಾಹವಾಗಿ ಉದ್ಯೋಗ ನಿಮಿತ್ತ ಗುರುಗ್ರಾಂನಲ್ಲಿ ವಾಸವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?