ರೂಪಾಯಿ 4 ತಿಂಗಳ ಕನಿಷ್ಠಕ್ಕೆ : ಮುಂಬಯಿ ಶೇರು 247 ಅಂಕ ಕುಸಿತ
Team Udayavani, Sep 22, 2017, 10:35 AM IST
ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿ ಮತ್ತು ಹೆಚ್ಚಿದ ವಿದೇಶೀ ಬಂಡವಾಳ ಹೊರ ಹರಿವಿನ ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 232 ಅಂಕಗಳ ನಷ್ಟಕ್ಕೆ ಗುರಿಯಾಗಿ 32,138.25 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆರಂಭಿಸಿತು.
ಬ್ಯಾಂಕಿಂಗ್, ಹಣಕಾಸು, ಕ್ಯಾಪಿಟಲ್ ಗೂಡ್ಸ್ ಮತ್ತು ಎಫ್ ಎಂ ಸಿ ಜಿ ರಂಗದ ಶೇರುಗಳು ಭಾರೀ ಪ್ರಮಾಣದ ಮಾರಾಟ ಒತ್ತಡಕ್ಕೆ ಗುರಿಯಾದವು.
ಡಾಲರ್ ಎದುರು ರೂಪಾಯಿ ವಿನಿಮಯ ದರ ನಾಲ್ಕು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದದ್ದು ಕೂಡ ಶೇರು ಮಾರುಕಟ್ಟೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 53.72 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.
ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್ 274.40 ಅಂಕಗಳ ನಷ್ಟದೊಂದಿಗೆ 32,094.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 102.60 ಅಂಕಗಳ ನಷ್ಟದೊಂದಿಗೆ 10,019.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಬೆಳಗ್ಗಿನ ವಹಿವಾಟಿನ ಟಾಪ್ ಗೇನರ್ಗಳಾಗಿ ಎಚ್ ಸಿ ಎಲ್ ಟೆಕ್, ಟಾಟಾ ಮೋಟರ್, ಭಾರ್ತಿ ಇನ್ಫ್ರಾಟೆಲ್, ಸನ್ ಫಾರ್ಮಾ, ಟಾಟಾ ಮೋಟರ್ (ಡಿ) ಶೇರುಗಳು ಕಾಣಿಸಿಕೊಂಡವು. ಟಾಪ್ ಲೂಸರ್ಗಳಾಗಿ ಎಸ್ ಬ್ಯಾಂಕ್, ಹಿಂಡಾಲ್ಕೊ, ವೇದಾಂತ, ಅಂಬುಜಾ ಸಿಮೆಂಟ್ಸ್, ಅಲ್ಟ್ರಾ ಟೆಕ್ ಸಿಮೆಂಟ್ ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ