ಅವ್ಯವಸ್ಥೆಗಳ ಆಗರವಾದ ಕನ್ನಡ ನುಡಿ ಜಾತ್ರೆ

Team Udayavani, Mar 26, 2017, 4:53 PM IST

shahrukh-house.jpg

ಚಿಕ್ಕಬಳ್ಳಾಪುರ (ಡಾ.ಎಚ್‌.ನರಸಿಂಹಯ್ಯ ವೇದಿಕೆ): ಅಕ್ಷರ ಜಾತ್ರೆಯಲ್ಲಿ ಊಟಕ್ಕಾಗಿ ಪರದಾಟ..ಸಾಹಿತ್ಯ ಸಮ್ಮೇಳನದ ಕಡೆಗೆ ಮುಖ ಮಾಡದ ಜಿಲ್ಲೆಯ ಶಾಸಕರು. ಪುಸ್ತಕ ಪ್ರೇಮಿಗಳ ಕೊರತೆಯಿಂದ ಬಣಗುಡುತ್ತಿದ್ದ ಮಾರಾಟ ಮಳಿಗೆಗಳು, ಬರೀ ಉದ್ಘಾಟನೆಗೆ ಸೀಮಿತವಾದ ನುಡಿ ಜಾತ್ರೆ, ವಿಚಾರಗೋಷ್ಠಿಗಳಿಗೆ ಪ್ರೇಕ್ಷಕರ ಬರ..! ಜಿಲ್ಲೆಯ ಗೌರಿಬಿದನೂರು ತಾಲೂಕು ಕೇಂದ್ರದಲ್ಲಿ ಶನಿವಾರದಿಂದ ಆರಂಭಗೊಂಡ ಎರಡು ದಿನಗಳ ಆರನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ದಿನ ಕಂಡು ಬಂದ ದೃಶ್ಯಗಳಿವು.

ಊಟದ ಕೊರತೆ: ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಗಣ್ಯರು, ಸಾಹಿತಿಗಳು ಹಾಗೂ ಸಾರ್ವಜನಿಕರಿಗೆ ಊಟದ ಕೊರತೆ ಉಂಟಾಗಿ ಸಮ್ಮೇಳನದ ಅವ್ಯವಸ್ಥೆಯನ್ನು ಬಿಂಬಿಸುವಂತಿತ್ತು. ನೂರಾರು ಮಂದಿ ಊಟಕ್ಕೆ ಕೂತು ಊಟ ಸಿದ್ಧವಾಗಿಲ್ಲ ಎಂಬ ಮಾಹಿತಿ ಅರಿತು ಹೊರ ನಡೆದರು. ಸಮ್ಮೇಳನಕ್ಕೆ ಆಗಮಿಸಿದ್ದ ಸಾಹಿತಿಗಳಿಗೆ ಅಕ್ಷರ ಜಾತ್ರೆಯಲ್ಲಿ ಊಟ ಸಿಗದೇ ಖಾಸಗಿ ಹೋಟೆಲ್‌ಗ‌ಳನ್ನು ಆಶ್ರಯಿಸಬೇಕಾಯಿತು.

ಶಾಸಕರ ಗೈರು: ಜಿಲ್ಲಾ ಮಟ್ಟದಲ್ಲಿ ನಡೆದ ಅಕ್ಷರ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕಾಗಿದ್ದ ಜಿಲ್ಲೆಯ ಬಹುತೇಕ ಶಾಸಕರು ಸಮ್ಮೇಳನದತ್ತ ಮುಖ ಮಾಡಲಿಲ್ಲ. ತೂಪಲ್ಲಿ ಆರ್‌.ಚೌಡರೆಡ್ಡಿ ಹಾಗೂ ಗೌರಿಬಿದನೂರು ಶಾಸಕರು ಬಿಟ್ಟರೆ ಉಳಿದ ಜಿಲ್ಲೆಯ ಯಾವೊಬ್ಬ ಶಾಸಕರು ಸಾಹಿತ್ಯ ಸಮ್ಮೇಳನದ ಕಡೆಗೆ ಹೆಜ್ಜೆ ಹಾಕಲಿಲ್ಲ. ಸಮ್ಮೇಳನಕ್ಕೆ ಆಹ್ವಾನಿತರಾಗಿದ್ದ ಕೋಲಾರ ಸಂಸದ ಕೆ.ಎಚ್‌.ಮುನಿಯಪ್ಪ ಕೂಡ ಬಂದಿರಲಿಲ್ಲ. 

ಬಿಕೋ ಎಂದ ಪುಸ್ತಕ ಮಳಿಗೆಗಳು: ಎರಡು ದಿನಗಳ ನುಡಿ ಜಾತ್ರೆಯ ಪ್ರಯುಕ್ತ ಡಾ.ಎಚ್‌.ನರಸಿಂಹಯ್ಯ ಕಲಾ ಭವನದ ಹೊರ ಭಾಗದಲ್ಲಿ ತೆರೆದಿದ್ದ ಪುಸ್ತಕ ಮಾರಾಟ ಮಳಿಗೆಗಳು ಪುಸ್ತಕ ಪ್ರೇಮಿಗಳ ಕೊರತೆಯಿಂದ ಬಿಕೋ ಎನ್ನುತ್ತಿದ್ದವು. ದೂರದ ಬೆಂಗಳೂರು, ಕೋಲಾರ, ತುಮಕೂರು ಮತ್ತಿತರ ಜಿಲ್ಲೆಗಳಿಂದ ಪುಸ್ತಕ ಮಾರಾಟದ ಪ್ರಕಾಶಕರು ಆಗಮಿಸಿದ್ದರು. ಆದರೆ ಪುಸ್ತಕ ಮಾರಾಟದ ಕಡೆಗೆ ಯಾರೊಬ್ಬರು ಹೆಜ್ಜೆ ಹಾಕಲಿಲ್ಲ. 

ಕಸಾಪ ಭಿನ್ನಮತ ಸ್ಫೋಟ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ಪದಾಧಿಕಾರಿಗಳ ಭಿನ್ನಮತ ಸ್ಫೋಟಗೊಂಡಿತು. ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ನಡೆದರೂ ಜಿಲ್ಲೆಯ ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲೂಕುಗಳ ಯಾವೊಬ್ಬ ಕಸಾಪ ಪದಾಧಿಕಾರಿಗಳ ಸುಳಿವೇ ಇರಲಿಲ್ಲ. ಜಿಲ್ಲಾ ಕಸಾಪ ಅಧ್ಯಕ್ಷರ ಕಾರ್ಯವೈಖರಿಯಿಂದ ಬೆಸತ್ತು ಜಿಲ್ಲೆಯ ಬಹಳಷ್ಟು ಮಂದಿ ಪದಾಧಿಕಾರಿಗಳು ಗೈರು ಹಾಜರಾಗಿದ್ದು ಎದ್ದು ಕಾಣುತ್ತಿತ್ತು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.