ಡಿಸಿ ಸೂಚನೆ: ನಗರಸಭೆಯಿಂದ ಅಕ್ರಮ ಗೂಡಂಗಡಿ ತೆರವು


Team Udayavani, Aug 4, 2017, 2:47 PM IST

04-CHIT-3.jpg

ಚಿತ್ರದುರ್ಗ: ನಗರದ ರೋಟರಿ ಕ್ಲಬ್‌ ಮುಂಭಾಗದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಗೂಡಂಗಡಿಗಳನ್ನು ಜಿಲ್ಲಾಧಿಕಾರಿಯವರ ಆದೇಶದ ಮೇರೆಗೆ ನಗರಸಭೆ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು.

ನಗರದ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿ ಕಳೆದ ಮೂರು ತಿಂಗಳ ಹಿಂದೆ ಏಕಾಏಕಿ ಅಕ್ರಮವಾಗಿ ಗೂಡಂಗಡಿಗಳು ತಲೆ ಎತ್ತಿದ್ದವು. ಈ ಬಗ್ಗೆ ಸಾರ್ವಜನಿಕರ ದೂರುಗಳು ಕೇಳಿಬಂದಿದ್ದವು. ರೋಟರಿ ಭವನ ಮುಂಭಾಗದ ರಸ್ತೆಯ ಅಕ್ಕ ಪಕ್ಕದಲ್ಲಿ ಹೆಚ್ಚಿನ ಜನಸಂದಣಿಯಿದ್ದು ಗೂಡಂಗಡಿಗಳಿಗೆ
ತೆರಳುವಾಗ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದರಿಂದ ಸಾರ್ವಜನಿಕರು ದಿನ ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದರು. ಅಲ್ಲದೆ ಈ ಜಾಗದಲ್ಲಿ ಒಂದು ಉದ್ಯಾನವನವಿದ್ದು ಅದನ್ನು ಸಂಪೂರ್ಣ ಮುಚ್ಚಿ ಹೋಗುವ ಮಾದರಿಯಲ್ಲಿ ಸಾಲಾಗಿ ಗೂಡಂಗಡಿಗಳು ತಲೆ ಎತ್ತಿದ್ದವು. ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯ ಜೋತ್ಸಾ° ಅಧಿಕಾರ ವಹಿಸಿಕೊಂಡ ಬಳಿಕ ನಗರ ಪ್ರದಕ್ಷಿಣೆ ಮಾಡಿದ್ದರು. ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದರು. ಇದರಿಂದ ಪುಟ್‌ಪಾತ್‌ ಮೇಲಿನ ಗೂಡಂಗಡಿಗಳ ತೆರವು ಕಾರ್ಯ
ಮುಂದುವರೆದಿದೆ. 

ಜಿಲ್ಲಾಧಿಕಾರಿಯವರ ಕ್ರಮದಿಂದಾಗಿ ಜನರಿಗೆ ಪುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗಲು ಅನುಕೂಲವಾಗಿದೆ. ಅಲ್ಲದೆ ನಗರ ಸುಂದರವಾಗಿ ಕಾಣಲು ಸಹಕಾರಿಯಾಗಿದೆ. ಬೆಳಗ್ಗೆಯಿಂದಲೇ ನಗರಸಭೆ ಸಿಬ್ಬಂದಿಗಳು ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದರು. 

ಸರ್ಕಾರಿ ಆಸ್ಪತ್ರೆಯ ಬಸ್‌ನಿಲ್ದಾಣದಿಂದ ತುರುವನೂರು ರಸ್ತೆ ಮಾರ್ಗವಾಗಿ ಆರ್‌ಟಿಒ ಕಚೇರಿ ಮುಂಭಾಗದಲ್ಲಿ ಸಾಕಷ್ಟು ಗೂಡಂಗಡಿಗಳಿವೆ. ಜಿಲ್ಲಾಧಿ  ಕಾರಿಯವರು ಅಲ್ಲಿನ ಗೂಡಂಗಡಿಗಳನ್ನೂ ತೆರವುಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪರ್ಯಾಯ ವ್ಯವಸ್ಥೆಗೆ ವ್ಯಾಪಾರಸ್ಥರ ಆಗ್ರಹ
ಚಿತ್ರದುರ್ಗ: ರೋಟರಿ ಕ್ಲಬ್‌ ಮುಂಭಾಗದಲ್ಲಿದ್ದ ಗೂಡಂಗಡಿಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಹಾಗೂ ಪರ್ಯಾಯ ವ್ಯವಸ್ಥೆ ಮಾಡುವಂತೆ ಗೂಡಂಗಡಿಗಳ ಮಾಲೀಕರು ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಜಿಲ್ಲಾಇಕಾರಿಯವರ ಸೂಚನಾದೇಶದ ಮೇರೆಗೆ ನಗರಸಭೆ ಸಿಬ್ಬಂದಿ ಗೂಡಂಗಡಿ ತೆರವು ಕಾರ್ಯಾಚರಣೆ ನಡೆಸಿದೆ. ಏಕಾಏಕಿ ತೆರವು ಕಾರ್ಯ ಮಾಡಿದ್ದರಿಂದ ಜೀವನ ನಿರ್ವಹಣೆಗೆ ಚಿಂತೆಯಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಕಾರ್ಯಕ್ಕೆ ಮುಂದಾಗಬೇಕಿತ್ತು ಎಂದು ಸಂತ್ರಸ್ತರು ಜಿಲ್ಲಾಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಗೂಡಂಗಡಿಗಳಿಂದ ಬರುತ್ತಿದ್ದ ಆದಾಯದಲ್ಲಿ ಜೀವನ ಕಟ್ಟಿಕೊಂಡಿದ್ದೇವೆ. ಪದೇ ಪದೇ ಗೂಡಂಗಡಿಗಳ ತೆರವು ಕಾರ್ಯ ಮಾಡಿದರೆ ಹತ್ತಾರು ಸಾವಿರ ರೂ. ಗಳನ್ನು ಖರ್ಚು ಮಾಡಿ ಗೂಡಂಗಡಿಗಳನ್ನು ನಿರ್ಮಿಸಿರುತ್ತೇವೆ. ಈ ಸಾಲದ ಹೊರೆ, ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ
ಕಷ್ಟವಾಗಲಿದೆ ಎಂದು ನೋವು ತೋಡಿಕೊಂಡರು. ಜಿಲ್ಲಾ ಕೇಂದ್ರಕ್ಕೆ ಅದರಲ್ಲೂ ಜಿಲ್ಲಾಧಿಕಾರಿ ಕಚೇರಿ ವೃತ್ತ, ಕೋರ್ಟ್‌, ತಾಲೂಕು ಕಚೇರಿಗಳಿಗೆ ಪ್ರತಿದಿನ ಗ್ರಾಮೀಣ ಪ್ರದೇಶಗಳ ನೂರಾರು ಜನ ಆಗಮಿಸುತ್ತಾರೆ. ಕಡಿಮೆ ದರದಲ್ಲಿ ಅವರಿಗೆ ತಿಂಡಿ, ಊಟ ನೀಡುತ್ತೇವೆ. ಅಲ್ಪಸ್ವಲ್ಪ
ಹಣ ತರುವ ರೈತರು, ಬಡವರು ಬೀದಿ ಬದಿಯಲ್ಲೇ ಏನೋ ತಿಂದು ಹೋಗುತ್ತಾರೆ. ಇದಕ್ಕೆಲ್ಲ ಜಿಲ್ಲಾಡಳಿತ ಕಲ್ಲು ಹಾಕಿದೆ ಎಂದು ದೂರಿದರು.

ಗೂಡಂಗಡಿ ತೆರವು ಮಾಡುವುದು ಸುಲಭ. ಆದರೆ ಅದರ ಹಿಂದಿನ ಶ್ರಮ, ನೋವು, ನಲಿವುಗಳನ್ನು ಅರಿಯಬೇಕು. ಕಾನೂನು ರೀತ್ಯ ಜಾಗ ಗುರುತಿಸಿ ಅಂಗಡಿಗಳನ್ನು ಇಟ್ಟುಕೊಳ್ಳಲು ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.