ಬಂಟ್ವಾಳ ಕಲ್ಲುತೂರಾಟ ಕೇಸ್; ಹಿಂದೂ ಮುಖಂಡರ ವಿರುದ್ಧದ FIRಗೆ ತಡೆ
Team Udayavani, Aug 18, 2017, 5:48 PM IST
ಬೆಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್ ಸಿ ಕೋರ್ಟ್ ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ.
ಸತ್ಯಜಿತ್ ಸುರತ್ಕಲ್ ಸೇರಿ ಐವರು ಹಿಂದು ಮುಖಂಡರ ವಿರುದ್ಧ ಬಂಟ್ವಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೆ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಗೆ ಹಾಗೂ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಹಿಂದೂಪರ ಸಂಘಟನೆ ಮುಖಂಡರು ಹೈಕೋರ್ಟ್ ಮೆಟ್ಟಿಲೇರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಲ್ಲಿ ಜುಲೈ 7ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆ ನಡೆಯುತ್ತಿದ್ದ ವೇಳೆ ಗಲಭೆ ನಡೆದಿತ್ತು. ಜುಲೈ 4ರಂದು ಶರತ್ ಮಡಿವಾಳ ಹತ್ಯೆಗೆ ಯತ್ನಿಸಿದ್ದು, ಜುಲೈ 7ರಂದು ಶರತ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ