ಎಚ್‌ಐವಿ ಸೋಂಕಿತರ ಜೀವಿತಾವಧಿ ಹೆಚ್ಚಳ

Team Udayavani, Mar 22, 2017, 3:04 PM IST

dvg6.jpg

ದಾವಣಗೆರೆ: ಎಚ್‌ಐವಿ ಸೋಂಕಿತರು ಅಗತ್ಯ ಔಷದೋಪಚಾರ ಪಡೆಯುವ ಮೂಲಕ ಸಮಾಜದ ಎಲ್ಲರಂತೆ ಜೀವನ ನಡೆಸಬಹುದು ಎಂದು ಎಚ್‌ಐವಿ-ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಜಿ.ಡಿ. ರಾಘವನ್‌ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಮಂಗಳವಾರ ಅಂತರ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಎಚ್‌ ಐವಿ ಸೋಂಕಿತರ ಬಗ್ಗೆ ಮಾತನಾಡಿದರು.

10-15 ವರ್ಷಗಳ ಹಿಂದೆ ಎಚ್‌ಐವಿ ಸೋಂಕಿತರ ಬಗೆಗಿದ್ದ ತಪ್ಪು ಕಲ್ಪನೆ ದೂರವಾಗಿವೆ. ತಿರಸ್ಕಾರ ಭಾವನೆ ಹೋಗಲಾಡಿಸಿದರೆ ಅವರೂ ಸಮಾಜದ ಮುಖ್ಯ ವಾಹಿನಿಯಲ್ಲಿ ಬರುತ್ತಾರೆ ಎಂದರು. ಕೆಲವಾರು ವರ್ಷಗಳ ಹಿಂದೆ ಯಾರಲ್ಲೇ ಆಗಲಿ ಎಚ್‌ಐವಿ ಕಂಡು ಬಂದರೆ ವಾರ ತಿಂಗಳೊಳಗೆ ಮರಣ ಹೊಂದುತ್ತಾರೆ ಎಂಬ ಭಾವನೆಯಿತ್ತು.

ಅದರೆ, ಬದಲಾದ ಪರಿಸ್ಥಿತಿ, ಜೀವನಶೈಲಿ, ನಿರಂತರ ಔಷಧ ಸೇವನೆಯಿಂದ ಜೀವಿತಾವಧಿ ಹೆಚ್ಚಳವಾಗಿದೆ ಎಂದು ತಿಳಿಸಿದರು. ಎಚ್‌ಐವಿ, ಏಡ್ಸ್‌ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಅರೋಗ್ಯ ಇಲಾಖೆ, ನ್ಯಾಕೋ ವಿವಿಧ ಸ್ವಯಂಸೇವಾ ಸಂಸ್ಥೆಗಳು ಅವಿರತವಾಗಿ ಶ್ರಮಿಸುತ್ತಿವೆ. ಎಲ್ಲಾ ಅಧಿಕಾರಿ ಮಿತ್ರರು ತಮ್ಮ ಇಲಾಖೆಗೆ ಅಂತವರು ಬಂದಾಗ ಆದ್ಯತೆಯ ಮೇಲೆ ಅವರವರ ಕೆಲಸ ಮಾಡಿಕೊಡುವಂತಾಗಹಬೇಕು.

ಅವರಲ್ಲಿ ಜೀವನೋತ್ಸಾಹ ತುಂಬಬೇಕು. ರಾಜ್ಯದಲ್ಲಿ ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ದಾವಣಗೆರೆ ಜಿಲ್ಲೆ 3ನೇ ಸ್ಥಾನದಲ್ಲಿದ್ದು ಆ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ತಿಳಿಸಿದರು. ಸಾರ್ವಜನಿಕರು, ಸರ್ಕಾರಿ ನೌಕರರು ಸೋಂಕು ಪೀಡಿತ ಮಕ್ಕಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಅವರ ಅಭ್ಯುದಯಕ್ಕೆ ನೆರವಾಗಬೇಕು.

ವಿವಿಧ ಇಲಾಖೆಗಳಲ್ಲಿ ಎಚ್‌ ಐವಿ ಪೀಡಿತರಿಗೆ ಹಲವಾರು ಸೌಲಭ್ಯಗಳಿದ್ದು ಅವುಗಳ ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲಾ ಎಚ್‌ಐವಿ ಪೀಡಿತರಿಗೆ ಬಿಪಿಎಲ್‌ ಹಾಗೂ ಎಪಿಎಲ್‌ ಕಾರ್ಡ್‌ ನೀಡಲಾಗುತ್ತಿದೆ. ಈವರೆಗೂ 6,947 ರೇಷನ್‌ಕಾರ್ಡ್‌ ವಿತರಿಸಲಾಗಿದೆ. ಈಗಾಗಲೇ 100 ನಿವೇಶನ ಹಾಗೂ 80 ಮನೆಗಳಿಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅವು ಮಂಜೂರಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಿವೇಶನ ಇರುವವರಿಗೆ ಮನೆ ಕಟ್ಟಿಕೊಳ್ಳಲು ಧನಸಹಾಯ ನೀಡಲಾಗುತ್ತಿದೆ. ಚೇತನ ಯೋಜನೆಯಲ್ಲಿ 20 ಸಾವಿರ ರೂ. ಧನಸಹಾಯ ಹಾಗೂ ಧನಶ್ರೀ ಯೋಜನೆಯಲ್ಲಿ ಗೃಹ ಕೈಗಾರಿಕೆ ಆರಂಭಿಸುವವರಿಗೆ 40 ಸಾವಿರ ರೂಪಾಯಿ ಧನಸಹಾಯ ನೀಡಲಾಗುವುದು. ಜಿಲ್ಲೆಯ ಎರಡು ಎಆರ್‌ಟಿ ಕೇಂದ್ರಗಳಲ್ಲಿ ಔಷಧಿ ನೀಡಲಾಗುತ್ತಿದೆ.

ತಂದೆ-ತಾಯಿ ಇಲ್ಲದ ಎಚ್‌ಐವಿ ಪೀಡಿತ 400 ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ತಿಂಗಳಿಗೆ 750 ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಇಂತಹ ಅನಾಥ ಮಕ್ಕಳನ್ನು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ದತ್ತು ತೆಗೆದುಕೊಳ್ಳುವ ಮೂಲಕ ಅವರ ಭವಿಷ್ಯಕ್ಕೆ ದಾರಿದೀಪವಾಗಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್‌. ತ್ರಿಪುಲಾಂಬ, ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಕೆ. ನೀಲಾಂಬಿಕೆ, ನಿವಾಸಿ ವೈದ್ಯಾಧಿಕಾರಿ ಡಾ| ರಾಘವೇಂದ್ರಸ್ವಾಮಿ, ದಾವಣಗೆರೆ ತಾಪಂ ಕಾರ್ಯನಿರ್ವಹಣಾಧಿಕಾರಿ ಎಲ್‌. ಎಸ್‌. ಪ್ರಭುದೇವ್‌, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವಯಂ ಸೇವಾ ಸಂಘದ ಪ್ರತಿನಿಧಿಗಳು ಇದ್ದರು. 

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.