ಲೋಡ್‌ ಶೆಡ್ಡಿಂಗ್‌ಗೆ ಆಕ್ರೋಶ

Team Udayavani, Mar 26, 2017, 1:05 PM IST

dvg4.jpg

ದಾವಣಗೆರೆ: ಪರೀಕ್ಷಾ ಸಮಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ಶನಿವಾರ ನಡೆದ ತಾಲ್ಲೂಕು ಪಂಚಾಯಿತಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಸಭೆ ಆರಂಭದಲ್ಲಿ ಅನುಪಾಲನಾ ವರದಿ ಮಂಡನೆ ವೇಳೆ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಇತರೆ ಸದಸ್ಯರು ಬೆಸ್ಕಾಂ ಅಧಿಕಾರಿಗಳನ್ನು ವಿದ್ಯುತ್‌ ಕಡಿತದ ತರಾಟೆಗೆ ತೆಗೆದುಕೊಂಡರು. ಪಿಯು ಪರೀಕ್ಷೆ ನಡೆಯುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ  ಮಕ್ಕಳು ಸಿದ್ದರಾಗುತ್ತಿದ್ದಾರೆ.

ಮತ್ತೂಂದು ಕಡೆ ರೈತರು ಪಂಪ್‌ಸೆಟ್‌ ಮೂಲಕ ಹೊಲಗಳಿಗೆ ನೀರು ಹಾಯಿಸಲು ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯುತ್‌ ಕಡಿತ ಮಾಡುತ್ತಿರುವುದು ನಿಮ್ಮ ಬೇಜವಾಬ್ದಾರಿಗೆ ಹಿಡಿದ ಕನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಆಗ ಆನಗೋಡು ವಿಭಾಗದ ಬೆಸ್ಕಾಂ ಎಇಇ ನಾಗರಾಜ್‌, ವಿದ್ಯುತ್‌ನ ಅಭಾವ ಇರುವುದರಿಂದಲೇ ನಿರಂತರ ಜ್ಯೋತಿ ಯೋಜನೆಯಲ್ಲಿಯೂ ಸಮರ್ಪಕ ವಿದ್ಯುತ್‌ ಪೂರೈಕೆ ಸಾಧ್ಯ ಆಗುತ್ತಿಲ್ಲ. 24 ಗಂಟೆ ವಿದ್ಯುತ್‌ ಪೂರೈಕೆ ಮಾಡಬೇಕೆಂಬ ನಿಯಮವಿದ್ದರೂ ಕೇವಲ 5 ಗಂಟೆ ವಿದ್ಯುತ್‌ ಕೊಡುವುದು ಕಷ್ಟವಾಗಿದೆ ಎಂದರು. 

ಎಇಇ ಉತ್ತರದಿಂದ ತೀವ್ರ ಅಸಮಧಾನಗೊಂಡ ಸದಸ್ಯರು, ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹೆಚ್ಚುವರಿ ವಿದ್ಯುತ್‌ ಇದೆ. ಲೋಡ್‌ ಶೆಡ್ಡಿಂಗ್‌ ಸಮಸ್ಯೆ ಎಲ್ಲಿಯೂ ಉಂಟಾಗುವುದಿಲ್ಲ ಎಂದಿದ್ದಾರೆ. ನೀವ್ಯಾಕೆ ಈ ತರಹ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. ಇದಕ್ಕೆ ಅಧಿಕಾರಿ ನಾಗರಾಜ್‌ ಮತ್ತು ಲೋಹಿತ್‌ಕುಮಾರ್‌ ವಿದ್ಯುತ್‌ ಸಮಸ್ಯೆ ಇದೆ.

36 ಮೆಗಾವ್ಯಾಟ್‌ ಕ್ರಾಸ್‌ ಆದರೆ, ವಿದ್ಯುತ್‌ ಕಡಿತವುಂಟಾಗುತ್ತದೆ ಎಂದರು. ಮಾಯಕೊಂಡ ಶಾಸಕ ಕೆ. ಶಿವಮೂರ್ತಿ ನಾಯ್ಕ, ಉಪಾಧ್ಯಕ್ಷ ಪರಮೆಶ್ವರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್‌, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಲ್‌.ಎಸ್‌. ಪ್ರಭುದೇವ್‌, ತಾಪಂ ಸದಸ್ಯರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.