ಶಿಕ್ಷಣ ಗುಣಮಟ್ಟ ಹೆಚ್ಚದೆ ವಿಶ್ವಮಾನ್ಯತೆ ಅಸಾಧ್ಯ

Team Udayavani, Apr 23, 2017, 1:20 PM IST

dvg3.jpg

ದಾವಣಗೆರೆ: ನಮ್ಮ ವಿಶ್ವವಿದ್ಯಾಲಯಗಳಲ್ಲಿ ಕೈಗೊಳ್ಳುವ ಸಂಶೋಧನೆ ಮತ್ತು ಶಿಕ್ಷಣ ಮಟ್ಟದ ಸುಧಾರಣೆ ಆಗದೇ ವಿಶ್ವದರ್ಜೆಗೆ ಏರುವುದು ಕನಸಿನ ಮಾತು ಎಂದು ವಿಶ್ವೇಶರಾಯ ತಾಂತ್ರಿಕ ವಿವಿ ವಿಶ್ರಾಂತ ಕುಲಪತಿ ಪ್ರೊ|ಎಚ್‌.ಪಿ. ಖೀಂಚಾ ಅಭಿಪ್ರಾಯಪಟ್ಟರು. 

ತಾಲ್ಲೂಕಿನ ತೋಳಹುಣಸೆ ಗ್ರಾಮದ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರೂಸ ಅನುದಾನಿತ ವಿವಿಗಳ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ನಾವು ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವ ಹವಣಿಕೆ  ಹೊಂದಿದ್ದೇವೆ.

ಆದರೆ, ನಮ್ಮ ಸಂಶೋಧನೆ, ಶೈಕ್ಷಣಿಕ ಗುಣಮಟ್ಟ ಇಂದಿಗೂ ಆ ಮಟ್ಟಕ್ಕೆ ಏರಿಲ್ಲ ಎಂದರು. ಸಮಾಜದಲ್ಲಿ ಇಂದು ವ್ಯಕ್ತಿ ಗಳಿಸಿದ ಅಂಕಕ್ಕಿಂತ ಪ್ರತಿಭೆ ಗುರುತಿಸಲಾಗುತ್ತಿದೆ. ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಕೌಶಲ್ಯಭಿವೃದ್ಧಿ ಮತ್ತು ಜ್ಞಾನಮಟ್ಟದ ವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ. 

ಆದರೆ, ಇಂದು ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣಗೊಂಡಿರುವುದರಿಂದ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಇಸ್ರೋದ ವೈಜ್ಞಾನಿಕ ಸಲಹೆಗಾರ ಡಾ| ಟಿ.ಜಿ.ಕೆ. ಮೂರ್ತಿ ಮಾತನಾಡಿ, ದೇಶದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಅತ್ಯಂತ ಅವಶ್ಯಕವೆಂದು ಪರಿಗಣಿಸಲ್ಪಟ್ಟಿದೆ. 

ಮಾನವ ಅಭಿವೃದ್ಧಿಗೊಂಡರೆ ಅದೇ ಸಂಪನ್ಮೂಲವಾಗಿ ಮಾರ್ಪಾಡಾಗುತ್ತದೆ. ಆದ್ದರಿಂದ ವಿಶ್ವವಿದ್ಯಾನಿಲಯಗಳು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವರಲ್ಲಿರುವ ಸೃಜನಶೀಲತೆ ಹೊರತರಲು ವೇದಿಕೆ ಕಲ್ಪಿಸಿಕೊಡಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಅಗತ್ಯವಿರುವ ಯುವ ಜನಾಂಗವನ್ನು ಕೊಡುಗೆಯಾಗಿ ನೀಡಬೇಕು ಎಂದರು. 

ಭಾರತದ ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಅಸಡ್ಡೆ ಮಾತುಗಳನ್ನಾಡುತ್ತಿದ್ದರು. ಆದರೆ ಇಂದು ಇಸ್ರೋ ಚಂದ್ರಯಾನ ಮತ್ತು ಮಂಗಳಯಾನ ಯಶಸ್ವಿಗೊಳಿಸಿದೆ. ಒಂದೇ ಬಾರಿ ನೂರನಾಲ್ಕು ಉಪಗ್ರಹಗಳನ್ನು ಕಕ್ಷೆಗೆ ಸೇರಿಸುವ ಮೂಲಕ ಅಭಿವೃದ್ಧಿ ಹೊಂದಿದ ದೇಶಗಳು ಹುಬ್ಬೇರಿಸುವಂತೆ ಮಾಡಿದೆ.

ಇತರೆ ರಾಷ್ಟ್ರಗಳು ಇಂದು ತಮ್ಮ ಉಪಗ್ರಹಗಳ ಉಡಾವಣೆಗೆ ಭಾರತದ ಸಹಕಾರ ಕೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಬಿ.ಬಿ ಕಲಿವಾಳ ಮಾತನಾಡಿ, ಭಾರತದಲ್ಲಿಯೇ ರೂಸಾದಿಂದ ಅನುದಾನ ಪಡೆದ ಕಿರಿಯ ವಿಶ್ವವಿದ್ಯಾನಿಲಯ ನಮ್ಮದಾಗಿದೆ.

ಈ ಅನುದಾನ ಬಳಕೆ ಮಾಡಿಕೊಂಡು ಅನೇಕ ಮೂಲಭೂತ ಸೌಕರ್ಯ ಕಲ್ಪಿಸಿಕೊಳ್ಳಲು ಅನುಕೂಲವಾಗಲಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಇಂದು ಮಾನವ ಸಂಪನ್ಮೂಲದ ಕೊರತೆ ಕಾಡುತ್ತಿದೆ. ಅದನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. 

ರಾಜ್ಯ ಉನ್ನತ ಶಿಕ್ಷಣ ಮಂಡಳಿ  ಕಾರ್ಯಕಾರಿ ನಿರ್ದೇಶಕ ಡಾ| ಎಸ್‌.ಎ. ಕೋರಿ, ತುಮಕೂರು ವಿವಿ ಕುಲಪತಿ ಪ್ರೊ| ಎ.ಎಚ್‌. ರಾಜಾಸಾಬ್‌, ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಭೈರಪ್ಪ, ದಾವಿವಿ ಕುಲಸಚಿವ ಪ್ರೊ| ಎಸ್‌.ವಿ ಹಲಸೆ, ಪರೀûಾಂಗ ಕುಲಸಚಿವ ಪ್ರೊ| ಗಂಗಾನಾಯ್ಕ ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.