24ರಿಂದ ಆ.21ರ ವರೆಗೆ ಶ್ರಾವಣ ಕಾರ್ಯಕ್ರಮ


Team Udayavani, Jul 22, 2017, 1:47 PM IST

22-dv-4.jpg

ದಾವಣಗೆರೆ: ಶ್ರಾವಣ ಮಾಸದ ಪ್ರಯುಕ್ತ ಜು.24 ರಿಂದ ಆ.21ರ ವರೆಗೆ ಕಲ್ಯಾಣ ದರ್ಶನ ಪ್ರವಚನ, ಶ್ರೀ ಜಯದೇವ
ಜೋಳಿಗೆ, ಹಾಲು ಕುಡಿಸುವ ಹಬ್ಬ, ಕಂಠ ಪಾಠ, ವೇಷಭೂಷಣ, ಭಾಷಣ, ವಚನ ಗಾಯನ ಒಳಗೊಂಡಂತೆ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದ್ದಾರೆ.

ಶ್ರಾವಣ ಮಾಸದ ಅಂಗವಾಗಿ ದಾವಣಗೆರೆ ವಿರಕ್ತ ಮಠದಲ್ಲಿ 1911ರಲ್ಲಿ ಶ್ರೀ ಮೃತ್ಯುಂಜಯ ಅಪ್ಪ ಮತ್ತು ಹಡೇìಕರ್‌ ಮಂಜಪ್ಪನವರು ಪ್ರವಚನ ಕಾರ್ಯಕ್ರಮ ಪ್ರಾರಂಭಿಸಿದರು. ಅಂದಿನಿಂದ ಈವರೆಗೆ ಪ್ರವಚನ ಕಾರ್ಯಕ್ರಮ ಆಯೋಜಿಸ 
ಲಾಗುತ್ತಿದೆ. ಶ್ರಾವಣ ಮಾಸದಲ್ಲಿ ಸದ್ವಿಚಾರ ಕೇಳುವುದು ಒಳ್ಳೆಯದು ಎಂಬ ಮಾತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜು. 24ರ ಸೋಮವಾರ ಸಂಜೆ 6ಕ್ಕೆ ನಡೆಯುವ ಪ್ರವಚನ ಉದ್ಘಾಟನಾ ಸಮಾರಂಭದಲ್ಲಿ ಪೂರ್ವ ವಲಯ ಪೊಲೀಸ್‌ ಮಹಾ ನಿರೀಕ್ಷಕ ಡಾ| ಎಂ.ಎ. ಸಲೀಂ, ನಗರಸಭೆ ಮಾಜಿ ಅಧ್ಯಕ್ಷ ಬಿ. ವೀರಣ್ಣ, ಬಸವ ಕೇಂದ್ರದ ಅಧ್ಯಕ್ಷ ಎಂ. ಜಯಕುಮಾರ್‌ ಇತರರು ಭಾಗವಹಿಸುವರು. ಗದಗದ ಟಿ.ಎಂ. ಪಂಚಾಕ್ಷರಿಶಾಸ್ತ್ರಿಗಳು ಪ್ರವಚನ ನಡೆಸಿಕೊಡುವರು. ಪ್ರತಿ ದಿನ ಸಂಜೆ 6.30 ರಿಂದ ರಾತ್ರಿ 8ರ ವರೆಗೆ ಪ್ರವಚನ ನಡೆಯಲಿದೆ ಎಂದು ತಿಳಿಸಿದರು.

ಆ. 28, 29 ರಂದು ಕಲ್ಲು ನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲಾಗಲಿ…ಎಂಬ ವೈಚಾರಿಕ ಚಿಂತನೆಯ ಬಸವ
ಪಂಚಮಿ, ಹಾಲು ಕುಡಿಸುವ ಹಬ್ಬ ದೊಡ್ಡಪೇಟೆಯ ಎಸ್‌.ಜೆ.ಎಂ. ಶಾಲೆಯಲ್ಲಿ ನಡೆಯಲಿದೆ. ಆ. 1ರಿಂದ ನಗರದ ವಿವಿಧ ಭಾಗದಲ್ಲಿ ಶ್ರೀ ಜಯದೇವ ಜೋಳಿಗೆ ಕಾರ್ಯಕ್ರಮ, ಆ. 14 ರಿಂದ 28ರ ವರೆಗೆ ವಿರಕ್ತ ಮಠದಲ್ಲಿ ಮಕ್ಕಳಿಗಾಗಿ ವಚನ ಕಂಠಪಾಠ ಸ್ಪರ್ಧೆ, ವಚನ ಗಾಯನ ಸ್ಪರ್ಧೆ, ಬಸವಾದಿ ಶರಣರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಸ್ಪರ್ಧೆ, ಭಾಷಣ ಸ್ಪರ್ಧೆ ನಡೆಯಲಿವೆ. 1 ರಿಂದ 10ನೇ ತರಗತಿ ಮಕ್ಕಳು ಭಾಗವಹಿಸುವರು ಎಂದು ತಿಳಿಸಿದರು.

ಜು. 30, ಆ. 6,13 ಮತ್ತು 20 ರಂದು ಭಾನುವಾರಗಳಂದು ಬೆಳಗ್ಗೆ 7.30 ರಿಂದ 9.30ರ ವರೆಗೆ ವಿರಕ್ತ ಮಠದಲ್ಲಿ ಸಹಜ
ಶಿವಯೋಗ ಮತ್ತು ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು. ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ, ಎಂ. ಜಯಕುಮಾರ್‌, ಎಸ್‌. ಓಂಕಾರಪ್ಪ, ಪಲ್ಲಾಗಟ್ಟೆ ಕೊಟ್ಟೂರೇಶಪ್ಪ, ಎಂ.ಕೆ. ಬಕ್ಕಪ್ಪ, ಜೆ. ಸೋಮನಾಥ್‌, ಅಂದನೂರು ಮುಪ್ಪಣ್ಣ, ಕುಂಟೋಜಿ ಚನ್ನಪ್ಪ, ಚಂದ್ರಶೇಖರಪ್ಪ ಇತರರಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.