ಅಪಘಾತ ತಡೆಗೆ ಸಂಚಾರ ನಿಯಮ ಪಾಲನೆ ಮುಖ್ಯ

Team Udayavani, Mar 21, 2017, 3:47 PM IST

hub6.jpg

ಹುಬ್ಬಳ್ಳಿ: ವಿಶ್ವದಲ್ಲಿ ರಸ್ತೆ ಅಪಘಾತದಿಂದಾಗಿಯೇ ಪ್ರತಿ ಮೂರು ನಿಮಿಷಕ್ಕೊಂದು ಜೀವ ಹೋಗುತ್ತಿದೆ. ಅಪಘಾತ ತಪ್ಪಿಸಲು ಪ್ರತಿಯೊಬ್ಬರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ ಎಂದು ನರರೋಗ ತಜ್ಞ ಡಾ| ಕ್ರಾಂತಿ ಕಿರಣ ಹೇಳಿದರು. 

ನ್ಯೂಕಾಟನ್‌ ಮಾರ್ಕೆಟ್‌ನ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮೀಷ°ರೇಟ್‌ ಹಾಗೂ ಶ್ರೀ ಬಾಲಾಜಿ ಇನ್‌ಸ್ಟಿಟೂಟ್‌ ಆಫ್‌ ನ್ಯೂರೋ ಸಾಯನ್ಸ್‌ ಆ್ಯಂಡ್‌ ಟ್ರಾಮಾ ಸೆಂಟರ್‌ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಲೆಪೆಟ್ಟು ಜಾಗೃತಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ರಸ್ತೆ ಅಪಘಾತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ 20ರಿಂದ 40 ವಯಸ್ಸಿನವರು ಸಾಯುತ್ತಿದ್ದಾರೆ. ಇದರಲ್ಲಿ ಬಹುತೇಕರು ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಜಗತ್ತಿನಲ್ಲಿ ಪ್ರತಿ ವರ್ಷ 14 ಲಕ್ಷ ಜನ ಸಾವನ್ನಪಿದ್ದರೆ, ಪ್ರತಿದಿನ 4500, ಪ್ರತಿ ಗಂಟೆಗೆ 200 ಜನರ ಪ್ರಾಣಪಕ್ಷಿ ಹಾರಿ ಹೋಗುತ್ತಿದೆ. ದೇಶದಲ್ಲಿ ನಿಮಿಷಕ್ಕೆ ಒಬ್ಬರು ಸಾಯುತ್ತಿದ್ದಾರೆ.

2016ರಲ್ಲಿ ದೇಶದಲ್ಲಿ 1.60 ಸಾವಿರ ಸಾವಿಗೀಡಾದರೆ, ರಾಜ್ಯದಲ್ಲಿ 12 ಸಾವಿರ ಜನರು ಮೃತಪಟ್ಟಿದ್ದಾರೆ. ವಿಶ್ವದಲ್ಲಿ ಭಾರತವು ಶೇ. 3ರಷ್ಟು ವಾಹನಗಳನ್ನು ಬಳಸಿದರೆ, ಅಪಘಾತದಲ್ಲಿ ಸಾಯುವರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು. ಹು-ಧಾ ಪೊಲೀಸ್‌ ಆಯುಕ್ತ ಪಾಂಡುರಂಗ ರಾಣೆ ಮಾತನಾಡಿ, ರಸ್ತೆ ಅಪಘಾತಗಳಲ್ಲಿ ಅಮಾಯಕ ಜೀವಗಳು ಬಲಿಯಾಗುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ.

ಇದರಲ್ಲಿ ಬಹುತೇಕರು ದ್ವಿಚಕ್ರ ವಾಹನ ಸವಾರರಾಗಿದ್ದಾರೆ. ಇದಕ್ಕೆ ಹೆಲ್ಮೆಟ್‌ ಬಳಸದಿರುವುದು ಮತ್ತು ನಿಯಮ ಉಲ್ಲಂ ಸುತ್ತಿರುವುದು ಪ್ರಮುಖ ಕಾರಣವಾಗಿದೆ. ಅಜಾಗರೂಕತೆಯಿಂದಲೇ ಅನಾಹುತಗಳು  ನಡೆಯುತ್ತಿವೆ. ಥ್ರಿಲ್‌ ಮಾಡಿದರೆ ಕಿಲ್‌ ಆಗುವುದು ಗ್ಯಾರಂಟಿ. ಆದ್ದರಿಂದ ಪೊಲೀಸರು ಒತ್ತಾಯಿಸಿದ್ದಾರೆಂದು ಕಾಟಾಚಾರಕ್ಕೆಂಬಂತೆ ಹೆಲ್ಮೆಟ್‌ ಧರಿಸುವ ಬದಲು ಐಎಸ್‌ಐ ಮಾರ್ಕ್‌ನ ಗುಣಮಟ್ಟದ ಹೆಲ್ಮೆಟ್‌ ಧರಿಸಿ ಜೀವ ಉಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು. 

ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಸಿ.ಎಸ್‌. ಪಾಟೀಲ ಮಾತನಾಡಿ, ವಿದೇಶಗಳಲ್ಲಿ ರಸ್ತೆ ಅಪಘಾತಗಳಲ್ಲಿ ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಕೊಡಿಸುವ ಬದಲು ವಿಡಿಯೋ ಮಾಡಿಕೊಳ್ಳುತ್ತಿರುವುದು ಕಂಡು ಬಂದರೆ ಶಿಕ್ಷೆ ವಿಧಿಸುವ ಕಾನೂನುವಿದೆ. ಆದರೆ ಭಾರತದಲ್ಲಿ ಈ ಕಾನೂನನ್ನು ಇನ್ನು ಮಾಡಿಲ್ಲ.

ಪಾಲಕರೂ ಸಹಿತ ಮಕ್ಕಳು ಪ್ರೌಢಾವಸ್ಥೆಗೆ ಬರುವವರೆಗೂ ಅವರಿಗೆ ವಾಹನ ಚಲಾಯಿಸಲು ಬಿಡಬಾರದು ಎಂದರು. ಎಸ್‌ಡಿಎಂ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ| ನಿರಂಜನ, ಕಿಮ್ಸ್‌ ನಿರ್ದೇಶಕ ಡಾ| ದತ್ತಾತ್ರೇಯ ಬಂಟ್‌, ಡಿಸಿಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು. 

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.