ಸಾಯಿ ಮಂದಿರ ಆಡಳಿತಾಧಿಕಾರಿ ನೇಮಕಕ್ಕೆ ಒತ್ತಾಯ

Team Udayavani, May 23, 2017, 4:35 PM IST

hub2.jpg

ಹುಬ್ಬಳ್ಳಿ: ಸಾಯಿ ಮಂದಿರದಲ್ಲಿ ಆಡಳಿತ ಮಂಡಳಿಯವರೇ ಲೂಟಿ ಮಾಡುತ್ತಿದ್ದು ನ್ಯಾಯ ಯಾರ ಬಳಿ ಕೇಳಬೇಕು. ಶ್ರೀ ಶಿರಡಿ ಸಾಯಿ ಮಂದಿರಕ್ಕೆ ಈ ಕೂಡಲೇ ಆಡಳಿತಾಧಿಕಾರಿ ನೇಮಕ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ ಒತ್ತಾಯಿಸಿದರು. 

ಈ ಕುರಿತು ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದ ಆಡಳಿತ ಮಂಡಳಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಯಿ ಮಂದಿರದಲ್ಲಿ ಕಳೆದ ಹಲವು ವರ್ಷಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ.

ಈ ಹಿಂದೆ ದೇಣಿಗೆ ಪೆಟ್ಟಿಗೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿ ಬಿದ್ದು ಅಮಾನತುಗೊಂಡ ವ್ಯಕ್ತಿಯೇ ಇದೀಗ ಆಡಳಿತ ಮಂಡಳಿಯ ಅಧ್ಯಕ್ಷನಾಗಿರುವುದು ವಿಪರ್ಯಾಸದ ಸಂಗತಿ. ಅಂತಹ ಭ್ರಷ್ಟನನ್ನು ಕೂಡಲೇ ವಜಾಗೊಳಿಸಬೇಕು, ಐದು ದಿನಗಳಲ್ಲಿ ಮಂದಿರಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಮುತಾಲಿಕ ಒತ್ತಾಯಿಸಿದರು. 

ಶೋಭಾ ಸವದತ್ತಿ ಮಾತನಾಡಿ, ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿ ಸಿದ್ದಪ್ಪ ಸವದತ್ತಿ ಅವರನ್ನು ಇತ್ತೀಚೆಗೆ ತೆಗೆದು ಹಾಕಿದ್ದರು. ಅದನ್ನು ಮನಸ್ಸಿಗೆ ಹಚ್ಚಿಕೊಂಡು ಅವರು ಕಳೆದ 15 ದಿನಗಳ ಹಿಂದೆ ಮೃತಪಟ್ಟಿದ್ದಾರೆ. ಎರಡು ಪುಟ್ಟ ಮಕ್ಕಳಿದ್ದು ಅವರನ್ನು ಸಾಕುವುದು ಕಷ್ಟವಾಗಿದೆ.  

ಮಂದಿರದಿಂದ ಏನಾದರೂ ಸಹಾಯ, ಸಹಕಾರ ನೀಡಬೇಕೆಂದು ಶೋಭಾ ತಮ್ಮ ಅಳಲು ತೋಡಿಕೊಂಡರು. ಮಂದಿರದ ಅರ್ಚಕ ಪಾಂಡುರಂಗ ಮುನವಳ್ಳಿ ಮಾತನಾಡಿ, ತನ್ನನ್ನು ಕೆಲಸದಿಂದ ತೆಗೆದುಹಾಕಿದ್ದು, ಅಲ್ಲಿ ನಾಲ್ಕು ಜನ ಭಟ್ಟರನ್ನು ತಂದಿಟ್ಟುಕೊಂಡಿದ್ದಾರೆ. ಮಂದಿರದ ವ್ಯವಸ್ಥಾಪಕ  ಪರಮ ಭ್ರಷ್ಟನಾಗಿದ್ದು, ಮೊದಲು ಅವರನ್ನು ಕೆಲಸದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು. 

ಇದಕ್ಕೂ  ಪೂರ್ವದಲ್ಲಿ ದಾಜೀಬಾನ ಪೇಟೆ ತುಳಜಾಭವಾನಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. ಅನಿಲ ಮಿಸ್ಕಿನ್‌, ದೀಪಕ ಜಾಧವ, ಸೇರಿದಂತೆ ಮೊದಲಾದವರು ಇದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.