Updated at Wed,23rd Aug, 2017 2:52PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಶೂಟಿಂಗ್‌ ವೇಳೆ ಹಿರಿಯ ನಟ ದೊಡ್ಡಣ್ಣ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರರಂಗದ ಹಿರಿಯ ಪೋಷಕ ನಟ ದೊಡ್ಡಣ್ಣ ಅವರು ಗುರುವಾರ ರಾತ್ರಿ ವಿಜಯಪುರದಲ್ಲಿ ತೆಲುಗು ಚಿತ್ರವೊಂದರ ಚಿತ್ರೀಕರಣದ ವೇಳೆ ಕುಸಿದು ಬಿದ್ದಿದ್ದು ಅವರನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿ ಚಿತ್ರೀಕರಣ ನಡೆಯುವ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು ಅವರನ್ನು ಸ್ಥಳೀಯ ಆಯುಷ್‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿ 2.30 ರ ವೇಳೆಗೆ ಬೆಂಗಳೂರಿಗೆ ಕರೆತರಲಾಗಿದೆ.

ಅವರ ಆರೋಗ್ಯ ಸ್ಥಿರವಾಗಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬ ಮೂಲಗಳು ಮತ್ತು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Back to Top