5ದಿನಗಳಲ್ಲಿ 2386 ಮಾನವ ದಿನ ಸೃಷ್ಟಿ

Team Udayavani, Feb 18, 2017, 3:21 PM IST

gul1.jpg

ಕಲಬುರಗಿ: ಇದೊಂದು ಹೊಸ ನಡೆ, ಬರದ ಅಬ್ಬರ ಕಡಿಮೆ ಮಾಡಲು ಜಿಲ್ಲಾ ಪಂಚಾಯಿತಿ ಪುನಃ ಕೆರೆಗಳಿಗೆ ಹೆಜ್ಜೆ ಇಟ್ಟಿದೆ. ಕೇವಲ ಐದು ದಿನಗಳಲ್ಲಿ 2386 ಮಾನವ ದಿನಗಳನ್ನು ಸೃಷ್ಟಿ ಮಾಡಲಾಗಿದೆ. ಈ ಮುಖೇನ ಗುಳೆ ಹೋಗುವುದನ್ನು ತಪ್ಪಿಸುವಲ್ಲಿ ಜಿಪಂ ಸಿಇಒ ಅನಿರುದ್ಧ ಅವರ ಉಪಾಯ ಫಲಿಸಿದೆ.

ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿನ ಕೆರೆ ಹೂಳೆತ್ತುವುದು ಹಾಗೂ ಅರಣ್ಯದ ಬದುಗಳಲ್ಲಿ ಕೆಲಸ ಮಾಡುವ ಮೂಲಕ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸೈಯದ್‌ ಚಿಂಚೋಳಿ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಕೆರೆಯಲ್ಲಿ ಫೆ. 6 ರಿಂದ ಕೆಲಸ ಆರಂಭಿಸಲಾಗಿದೆ.

ದಿನೇ ದಿನೇ ಜನರು ಕೂಲಿಗಾಗಿ ಹೆಚ್ಚು ಹೆಚ್ಚು ಹೆಸರುಗಳನ್ನು ನೋಂದಾಯಿಸಿಕೊಳ್ಳುತ್ತಿದ್ದಾರೆ. ಅಂತಿಮವಾಗಿ 514 ಜನರು ಕೂಲಿ ಕೆಲಸಕ್ಕಾಗಿ ಹೆಸರು  ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 300 ಹೆಣ್ಣು ಮತ್ತು 200ಕ್ಕೂ ಹೆಚ್ಚು ಗಂಡು ಕೂಲಿಯಾಳುಗಳು ಕೆಲಸ ಮಾಡುತ್ತಿದ್ದಾರೆ. ಕೂಲಿ ಪಾವತಿಯಲ್ಲೂ ಯಾವುದೇ ತೊಂದರೆಯಾಗಿಲ್ಲ.

ಉತ್ತಮವಾಗಿ ಕೆಲಸ ನಡೆಯುತ್ತಿದೆ. ಇದರಿಂದ ನಮಗೆ ಅನುಕೂಲವಾಗಿದೆ ಎಂದು ತಾಜ್‌ಸುಲ್ತಾನಪುರ ಭೀಮವ್ವ ಹಾಗೂ ಮಕಬೂಲ್‌ “ಉದಯವಾಣಿ”ಗೆ ತಿಳಿಸಿದರು. ಕಳೆದ ವರ್ಷ ಇದೇ ಸೈಯದ್‌ ಚಿಂಚೋಳಿ ಕೆರೆಯಲ್ಲಿ ಹೂಳೆತ್ತುವ ಕೆಲಸ ಆರಂಭಿಸುವ ಮೂಲಕ ಗುಳೆ ಹೋಗುವುದನ್ನು ತಡೆಯಲಾಗಿತ್ತು.

ಆದರೆ, ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಜಿಪಂ ಸಿಇಒ ಅನಿರುದ್ಧ ಶ್ರವಣ ಕೆಲಸ ಆರಂಭಿಸಿದ್ದಾರೆ. ಇದಕ್ಕೆ ವ್ಯಾಪಕ ಬೆಂಬಲವೂ ಸಿಕ್ಕಿದೆ. ಒಟ್ಟು 514 ಜನ ಶುಕ್ರವಾರ ಕೆಲಸ ಮಾಡಿದರು. ಇದರಿಂದ ಕಳೆದ ಐದು ದಿನಗಳಲ್ಲಿ ಒಟ್ಟು 2386 ಮಾನವ ದಿನಗಳ ಸೃಷ್ಟಿಯಾಗಿದೆ. ಇದರಿಂದ ಕೂಲಿ ಕಾರ್ಮಿಕರಿಗೆ ಕೆಲಸ ಸಿಕ್ಕಂತಾಗಿದೆ. 

ಅರಣ್ಯ ಮತ್ತು ಕೆರೆ ಹೂಳೆತ್ತುವ ಕಾಮಗಾರಿಗಳಲ್ಲಿ ಈಗಾಗಲೇ 100 ದಿನಗಳ ಕೆಲಸವನ್ನು ಸೃಷ್ಟಿ ಮಾಡಲಾಗಿದೆ. ಒಟ್ಟು 150 ದಿನಗಳ ಕೆಲಸದ ವಾಗ್ಧಾನವನ್ನು ಪೂರ್ಣ ಮಾಡಿ ಹೆಚ್ಚುವರಿ ಮಾನವ ದಿನಗಳ ಸೃಷ್ಟಿ ಮಾಡುವ ಮೂಲಕ ಜನರಿಗೆ ಕೆಲಸ ನೀಡಿ ಗುಳೇ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕೆಲಸ ಭಾರಿ ಪ್ರಶಂಸೆಗೆ ಕಾರಣವಾಗಿದೆ.

* ಸೂರ್ಯಕಾಂತ ಎಂ.ಜಮಾದಾರ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.