ಮದರಸಾಗಳಿಗೆ ವಿಶೇಷ ಅನುದಾನ

Team Udayavani, May 29, 2017, 3:25 PM IST

gul1.jpg

ಕಲಬುರಗಿ: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ದಿಸೆಯಲ್ಲಿ ರಾಷ್ಟ್ರೀಯ ಶಿಕ್ಷಣ ಯೋಜನೆಯಡಿ ಜಿಲ್ಲೆಯ ಮದರಸಾಗಳಿಗೆ ವಿಶೇಷ ಅನುದಾನ ನೀಡಲಾಗುವುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮಹಬೂಲ್‌ ಕಾರಟಗಿ ಹೇಳಿದರು. 

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಪ್ರಾಧಿಕಾರದ ಅಧ್ಯಕ್ಷ ಮಹ್ಮದ್‌ ಅಸಗರ ಚುಲಬುಲ್‌ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸರ್ಕಾರ ಯೋಜನೆ ಮದರಸಾಗಳ ಗುಣಮಟ್ಟವನ್ನು ಉನ್ನತೀಕರಣಗೊಳಿಸಲು ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. 

ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಮದರಸಾಗಳಲ್ಲಿ ಮೂಲಭೂತ ಸೌಲಭ್ಯ ಇರುವ ಕನಿಷ್ಠ 25 ಮಕ್ಕಳಿಗೆ ಊಟ ವಸತಿ ಸೌಕರ್ಯ ನೀಡುವ ಸಂಸ್ಥೆಗಳಿಗೆ ವಿಶೇಷ ಸೌಲಭ್ಯ ಕಲ್ಪಿಸುವ 12 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ಹೇಳಿದರು. 

ಕುಡಾ ಅಧ್ಯಕ್ಷ ಹಾಗೂ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಸದಸ್ಯರಾದ ಮಹಮದ್‌ ಅಸಗರ್‌ ಚುಲಬುಲ್‌ ಮಾತನಾಡಿ, ಮದರಸಾಗಳಿಗೆ ಕೇಂದ್ರ ಸರ್ಕಾರ ನೀಡುವ ವಿಶೇಷ ಅನುದಾನ ನೀಡುವ ತಿಳಿವಳಿಕೆ ಮೂಡಿಸಿಕೊಳ್ಳಲು ಈ ಸಭೆ ಕರೆಯಲಾಗಿದೆ. ಸರ್ಕಾರದ ಅತ್ಯುತ್ತಮ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು. 

ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಕೇವಲ 43 ಮೈನಾರಿಟಿ ಡಿಕ್ಲೇರ್ಡ್‌ ಶಿಕ್ಷಣ ಸಂಸ್ಥೆ ಘೋಷಣೆಯಾಗಿದೆ. ಆದರೆ ಇನ್ನೂ 200ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ಅಲ್ಪಸಂಖ್ಯಾತ ಡಿಕ್ಲೇರ್ಡ್‌ ಸಂಸ್ಥೆ ಬಾಕಿ ಇರುತ್ತದೆ. ಉಳಿದ 200 ಶಿಕ್ಷಣ ಸಂಸ್ಥೆ ಮೈನಾರಿಟಿ ಡಿಕ್ಲೇರ್ಡ್‌ ಪ್ರಮಾಣ ಪತ್ರ ಶಿಕ್ಷಣ ಇಲಾಖೆಯಿಂದ ಪಡೆಯಬೇಕೆಂದು ಅಸಗರ ಚುಲ್‌ಬುಲ್‌ ಮನವಿ ಮಾಡಿದರು. 

ಮಸ್ತಾನ್‌ ಬಿರಾದಾರ ಮಾತನಾಡಿ, ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳಾದರೂ ಪ್ರಧಾನ ಮಂತ್ರಿಗಳ 15 ಅಂಶಗಳ ಅನುಷ್ಠಾನ ಸಮಿತಿಯನ್ನು ರಚಿಸಲು ಇನ್ನೂ ಸಾಧ್ಯವಾಗಿಲ್ಲ. ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯನ್ನೊಳಗೊಂಡ ಅನುಷ್ಠನ ಸಮಿತಿ ರಚಿಸಿದರೆ, ಆ ಮೂಲಕ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿತ್ತು ಎಂದರು. 

ಮಹಾನಗರ ಪಾಲಿಕೆ ಮೇಯರ್‌ ಶರಣುಕುಮಾರ ಮೋದಿ, ಶಿಕ್ಷಣಾಧಿಕಾರಿ ಭರತರಾಜ ಸಾವಳಗಿ, ಜಿಲ್ಲಾ ವಕ್‌ ಅಧಿಕಾರಿಯಾದ ಗುಲಾಮ ಸಾಮದಾನಿ ಇ.ಸಿ.ಒ., ನುಸ್ರತ್‌ ಮೊಹಿನುದ್ದೀನ್‌, ಇಕ್ಬಾಲ್‌ ಅಲಿ, ಮಾಜಿ ಮೇಯರ್‌ ಅಸಾಧಿಕ್‌ ಅಹ್ಮದ್‌ ಚುಲಬುಲ್‌ ಹಾಜರಿದ್ದರು.  

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.