ರೈತರ ಆದಾಯ ದ್ವಿಗುಣಕ್ಕೆ 8 ಗ್ರಾಮ ಆಯ್ಕೆ


Team Udayavani, Jul 22, 2017, 11:39 AM IST

TN-Prakash-Kammaradi.gif

ಕಲಬುರಗಿ: ಪದೇ ಪದೇ ಬರಗಾಲ, ಮಳೆ ಕೊರತೆ ಮತ್ತು ಕೃಷಿ ಕಷ್ಟದಾಯಕ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಂಟು ಜಿಲ್ಲೆಗಳ ಎಂಟು ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಇದೊಂದು ಪ್ರಾಯೋಗಿಕ
ಪ್ರಯತ್ನವಾಗಿದೆ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ| ಟಿ.ಎನ್‌. ಪ್ರಕಾಶ ಕಮ್ಮರಡಿ ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಳಂದ ತಾಲೂಕಿನ ತೆಲ್ಲೂರು ಗ್ರಾಮದ ರೈತರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದು ಪ್ರಧಾನಿ ನರೇಂದ್ರ ಮೋದಿ ಆಲೋಚನೆ. ಇದಕ್ಕಾಗಿ ಕರ್ನಾಟಕದ 8 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳಲ್ಲಿನ ರೈತರ ಈಗಿನ ಆರ್ಥಿಕ ಸ್ಥಿತಿ ಮತ್ತು ಸರ್ಕಾರಿ 
ಯೋಜನೆಗಳಿಂದ ಬದಲಾಗುವ ಆರ್ಥಿಕ ಪರಿಸ್ಥಿತಿ ಪರಾಮರ್ಶಿಸಲಾಗುವುದು. ಈ ಪ್ರಾಯೋಗಿಕ ಯೋಜನೆಯನ್ನಾಧರಿಸಿ 2018ನೇ ಸಾಲಿನ ಬಜೆಟ್‌ ಪೂರ್ವದಲ್ಲಿಯೇ ಆಯೋಗವು ಸರ್ಕಾರಕ್ಕೆ ಸಂಪೂರ್ಣ ನೀಲನಕ್ಷೆ ಸಲ್ಲಿಸಲಿದೆ ಎಂದರು.

ಸಂಸ್ಥೆಗೆ ಹೊಣೆ: ಪ್ರತಿ ಹಳ್ಳಿಯ ನೀಲನಕ್ಷೆ ತಯಾರಿಸುವ ಜವಾಬ್ದಾರಿಯನ್ನು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಗೆ ವಹಿಸಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಪೂರ್ಣ ಸಮ್ಮತಿ ಇದೆ. ಕಾರ್ಯಕ್ರಮ ಯಶಸ್ವಿಯಾದಲ್ಲಿ ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲು ಯೋಜಿಸಲಾಗಿದೆ ಎಂದರು. ರೈತರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ 52 ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿದೆ. ಈ ಎಲ್ಲ ಕಾರ್ಯಕ್ರಮಗಳನ್ನು ತೆಲ್ಲೂರು ಗ್ರಾಮಕ್ಕೆ ತಲುಪಿಸುವುದರೊಂದಿಗೆ ಈ
ಗ್ರಾಮದ ರೈತರಲ್ಲಿ ಆರ್ಥಿಕ ಮಟ್ಟ ಹೆಚ್ಚಳವಾಗುವ ಆತ್ಮವಿಶ್ವಾಸ ಬರುವಂತೆ ಆಗಬೇಕು. ಈ ನಿಟ್ಟಿನಲ್ಲಿ ರೈತರ ಸರ್ವತೋಮುಖ ಅಭಿವೃದ್ಧಿಯ ಮಹತ್ವದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ರೈತರ ಆದಾಯ ಹಾಗೂ ಅಭಿವೃದ್ಧಿಗಾಗಿ ಅಧಿಕಾರಿಗಳು
ಹೆಚ್ಚು ಶ್ರಮಿಸಬೇಕು. ಇದಕ್ಕಾಗಿ ವಿವಿಧ ಇಲಾಖೆಗಳ ಸಂಯೋಜನೆ ಅತೀ ಮುಖ್ಯ ಎಂದು ಹೇಳಿದರು.

ಜಂಟಿ ನಿರ್ದೇಶಕರಿಂದ ಮೇಲ್ವಿಚಾರಣೆ: ತೆಲ್ಲೂರು ಗ್ರಾಮದಲ್ಲಿ ಒಟ್ಟು 112 ಕುಟುಂಬಗಳಿವೆ. ಎಲ್ಲ ಕುಟುಂಬಗಳ ಹೊಲದ ಮಣ್ಣಿನ ಮತ್ತು ರೈತರ ಆರೋಗ್ಯ ತಪಾಸಣೆ ಮಾಡಿ ಆರೋಗ್ಯ ಚೀಟಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಅನುಷ್ಠಾನಗೊಳ್ಳಲಿದೆ. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಅನುಷ್ಠಾನಾ ಧಿಕಾರಿಯಾಗಿದ್ದು, ಜಂಟಿ
ಕೃಷಿ ನಿರ್ದೇಶಕರು ಕಾರ್ಯಕ್ರಮದ ಮೇಲ್ವಿಚಾರಣೆ ಮಾಡುವರು ಎಂದರು. 

ಸರ್ವೇ ಸಿದ್ಧಪಡಿಸಲು ಸೂಚನೆ: ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಅರಣ್ಯ, ಹೈನುಗಾರಿಕೆ, ಕೋಳಿ ಮತ್ತು ಕುರಿ ಸಾಕಣೆ, ಮೀನುಗಾರಿಕೆ, ನೀರಾವರಿ, ಕೃಷಿ ಮಾರುಕಟ್ಟೆ, ಅರಣ್ಯ, ನಬಾರ್ಡ್‌, ಲೀಡ್‌ ಬ್ಯಾಂಕ್‌ ಹಾಗೂ ಇತರ ಇಲಾಖೆಗಳ ಎಲ್ಲ
ಅ ಧಿಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಕೂಡಲೇ ತೆಲ್ಲೂರು ಗ್ರಾಮಕ್ಕೆ ಭೇಟಿ ನೀಡಿ ತಮ್ಮ ತಮ್ಮ ಇಲಾಖಗಳಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ರೈತರಿಗೆ ವಿವರಿಸಬೇಕು. ಇದಲ್ಲದೆ ಒಂದು ತಾಂತ್ರಿಕ
ಕಾರ್ಯಾಗಾರವನ್ನು ಆಯೋಜಿಸಬೇಕು. ನಂತರ ಇಲಾಖೆಗಳು ಅನುಷ್ಠಾನಗೊಳಿಸಲಿರುವ ವಿವಿಧ ಯೋಜನೆಗಳ ವಿಸ್ತೃತ ಸರ್ವೇ ಸಿದ್ಧಪಡಿಸಬೇಕೆಂದು ಸೂಚಿಸಿದರು.

ವಿಶೇಷ ಸಾಲದ ಅಭಿಯಾನ: ಕೃಷಿ ಮಾರುಕಟ್ಟೆ ಇಲಾಖೆಯಿಂದ ತೊಗರಿ ಅಡಮಾನ ಸಾಲದ ವಿಶೇಷ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡು ರೈತರಿಗೆ ಸೂಕ್ತ ತಿಳಿವಳಿಕೆ ನೀಡಬೇಕು. ತೆಲ್ಲೂರು ಗ್ರಾಮದಲ್ಲಿ ರೈತರ ಕೃಷಿ ಉತ್ಪನ್ನಗಳ 
ದಾಸ್ತಾನು ಮಾಡಲು ಅನುವಾಗುವಂತೆ 100 ಮೆ.ಟನ್‌ ಸಾಮರ್ಥ್ಯದ ಉಗ್ರಾಣ ನಿರ್ಮಾಣ ಮಾಡಬೇಕು. ಎಲ್ಲ ರೈತರ ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿ ಮೀನುಗಾರಿಕೆ ಇಲಾಖೆಯಿಂದ ರೈತರಿಗೆ ಮೀನು ಸಾಕಾಣಿಕೆ ಮಾಡುವಂತೆ ಕ್ರಮ ಜರುಗಿಸಬೇಕು. ಗ್ರಾಮವು ಋಣಮುಕ್ತ ಗ್ರಾಮವಾಗಬೇಕು. ಈ ನಿಟ್ಟಿನಲ್ಲಿ ತೆಲ್ಲೂರು ಗ್ರಾಮದ ಸಾಲ ಯೋಜನೆ ರೂಪಿಸಬೇಕಲ್ಲದೆ ನಬಾರ್ಡ್‌ನಿಂದ
ರೈತರ ಕ್ಲಬ್‌ ಪ್ರಾರಂಭಿಸಬೇಕು. ಈ ಗ್ರಾಮದ ರೈತರ ಆದಾಯ ಹೆಚ್ಚಳಕ್ಕೆ ಅನುವಾಗುವ ಎಲ್ಲ ಪೂರಕ ಸೌಲಭ್ಯಗಳನ್ನು ಕಲ್ಪಿಸಲು ಎಲ್ಲ ಇಲಾಖೆಗಳು ಹೆಚ್ಚು ಶ್ರಮಿಸಬೇಕು ಎಂದು ಸೂಚಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಅರಣ್ಯ, ಹೈನುಗಾರಿಕೆ, ಕೋಳಿ ಮತ್ತು ಕುರಿ ಸಾಕಣೆ, ಮೀನುಗಾರಿಕೆ, ನೀರಾವರಿ, ಕೃಷಿ ಮಾರುಕಟ್ಟೆ, ಅರಣ್ಯ, ಮುಂತಾದ ಇಲಾಖೆಗಳ ಎಲ್ಲ ಅಧಿ ಕಾರಿಗಳು ಮತ್ತು ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇಲಾಖೆಯ ಯೋಜನೆಗಳ ಬಗ್ಗೆ ವಿವರಿಸಿದರು.

ವಂಚನೆ-ಕ್ರಮಕ್ಕೆ ಆದೇಶ: ತೊಗರಿ ಖರೀದಿ ಹಣ ಪಾವತಿಯಾಗದಿರುವ ಬಗ್ಗೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯಲ್ಲಿ ರೈತರಿಗೆ ವಂಚನೆ ಮಾಡುತ್ತಿರುವ ಬಗ್ಗೆ ರೈತರು ಅಧ್ಯಕ್ಷರ ಗಮನಕ್ಕೆ ತಂದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಜರುಗಿಸಬೇಕೆಂದು ಆದೇಶಿಸಿದರು. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ, ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ| ಡಿ.ಎಂ. ಮಣ್ಣೂರ, ಕೃಷಿ ವಿಜ್ಞಾನ
ಕೇಂದ್ರದ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ| ರಾಜು ತೆಗ್ಗೆಳ್ಳಿ, ಡಾ| ವಿ.ರಾಮಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಜಿಲಾನಿ ಹೆಚ್‌. ಮೊಕಾಶಿ ಪಾಲ್ಗೊಂಡಿದ್ದರು.

ಭರವಸೆ ಮೂಡಿಸಿ
ಪ್ರತಿ ರೈತರ ಡಾಟಾಬೇಸ್‌ ಕಡತ ತಯಾರಿಸಿ ರೈತರ ಆದಾಯ ಹೆಚ್ಚಳಕ್ಕೆ ಸಂಬಂಧಿಸಿದಂತೆ ಆಯಾ ರೈತರಿಗೆ ಅಗತ್ಯವಾಗಿ ಬೇಕಾಗುವ ವಿವಿಧ ಸೌಲಭ್ಯಗಳ ಸಮಗ್ರ ನೀಲನಕ್ಷೆ ತಯಾರಿಸಲಾಗುವುದು. ಇದಕ್ಕಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಲಹಾ ಸಮಿತಿ ರಚಿಸಲಾಗಿದೆ. ಪ್ರತಿ ತಿಂಗಳು ಕಾರ್ಯಕ್ರಮದ ಪರಾಮರ್ಶೆ ನಡೆಸಬೇಕು. ಇದಲ್ಲದೆ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಮೊದಲನೇ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಕೃಷಿಗೆ ಸಂಬಂಧಿಸಿದ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು. ಇದನ್ನು ಎಲ್ಲ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ
ಮತ್ತು ದೊಡ್ಡ ಸವಾಲಾಗಿ ಸ್ವೀಕರಿಸಿ ಆರ್ಥಿಕ ಮಟ್ಟ ಸುಧಾರಣೆಯ ಭರವಸೆಯನ್ನು ರೈತರಲ್ಲಿ ಮೂಡಿಸಬೇಕು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.