ಕಾಸರಗೋಡು: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು
Team Udayavani, Jan 4, 2017, 4:01 PM IST
ಕಾಸರಗೋಡು: ಇಲ್ಲಿನ ಉಪ್ಪಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳು ಪ್ರಯಾಣಿಸುತ್ತಿದ್ದ ಕಾರಿಗೆ ಮಂಗಲಪಾಡಿ ಪಂಚಾಯತ್ ಎದುರು ಕಂಟೇನರ್ ಲಾರಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮೃತರು ತ್ರಿಚೂರಿನ ಚೆಲಕ್ಕಾರ ನಿವಾಸಿಗಳಾದ ರಾಮ್ ನಾರಾಯಣ್ (52),ಅವರ ಪತ್ನಿ ವತ್ಸಲಾ(48), ಮಕ್ಕಳಾದ ರಂಜಿತ್ (20) ಮತ್ತು ನಿತಿನ್ (24) ಎಂದು ತಿಳಿದು ಬಂದಿದೆ.
ಮಗನಿಗೆ ಮಂಗಳೂರಿನ ಕಾಲೇಜೊಂದರಲ್ಲಿ ಪ್ರವೇಶ ಪಡೆಯುವ ಸಲುವಾಗಿ ಬಂದು ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ