ಆರೋಗ್ಯ ಕೇಂದ್ರಗಳಲ್ಲಿ ಅಶುಚಿತ್ವ: ಜಿಪಂ ಕೆಡಿಪಿ ಸಭೆಯಲ್ಲಿ ಅಸಮಾಧಾನ

Team Udayavani, Aug 20, 2017, 8:45 AM IST

Z-JILLA-PANCHAYATH-1.jpg

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಡೆಂಗ್ಯೂ ಸೇರಿದಂತೆ ವಿವಿಧ ರೋಗಗಳು ಹರಡುವ ಭೀತಿ ಇರುವ ಹಂತದಲ್ಲೇ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಶುಚಿತ್ವದ ವಾತಾವರಣ ಕಂಡು ಬಂದಿದೆ. ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎನ್ನುವ ಅಸಮಾಧಾನ ಜಿಲ್ಲಾ ಪಂಚಾಯತ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾಗಿದೆ.

ಜಿಲ್ಲಾ ಪಂಚಾಯತ್‌ ಅಧ್ಯಕ್ಷ‌  ಬಿ.ಎ. ಹರೀಶ್‌ ಅಧ್ಯಕ್ಷತೆ ಯಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗ‌ಣದಲ್ಲಿ ನಡೆದ ಸಭೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿ  ಆಶಾ  ಅವರು ಜಿಲ್ಲೆಯ ಆರೋಗ್ಯ ಜಾಗೃತಿಗೆ ಸಂಬಂಧಿಸಿದ ಮಾಹಿತಿ ನೀಡಿದರು. ಜಿಲ್ಲಾ ವ್ಯಾಪ್ತಿಯಲ್ಲಿ ಎಚ್‌1ಎನ್‌1ನ 15 ಪ್ರಕರಣ, ಇಲಿಜ್ವರದ 18 ಪ್ರಕರಣ, ಮಲೇರಿಯಾದ 1 ಪ್ರಕರಣ, ಡೆಂಗ್ಯೂವಿನ 190 ಮತ್ತು ಹೆಪಟೈಟಿಸ್‌ನ 83 ಪ್ರಕರಣಗಳು ಪತ್ತೆಯಾಗಿದ್ದು, ಯಾವುದೇ ಜೀವಹಾನಿಯಾಗಿಲ್ಲ, ರೋಗ ನಿಯಂತ್ರಣದಲ್ಲಿದೆ ಎಂದರು.

ಜಿಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್‌ ಮಾತನಾಡಿ, ಸೋಮವಾರಪೇಟೆ ತಾಲೂಕಿನಲ್ಲಿ ಡೆಂಗ್ಯೂ ವಿನಿಂದ 2 ಸಾವು ಸಂಭವಿಸಿದೆ ಎಂದರು. 

ಜಿಲ್ಲಾ ಆಸ್ಪತ್ರೆಯಲ್ಲಿ ದೃಢ ಪಟ್ಟಿಲ್ಲವೆಂದು ಅಧಿಕಾರಿ ಸಮಜಾಯಿಷಿ ನೀಡಿದ ಸಂದರ್ಭ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ  ಶ್ರೀನಿವಾಸ್‌ ಮಾತನಾಡಿ, ರೋಗಿಗಳನ್ನು ಪರಿಶೀಲಿಸಿದರೆ ತಾನೆ ರೋಗ ಪತ್ತೆಯಾಗುವುದು ಎಂದರು. ಸೋಮವಾರಪೇಟೆ ಸೇರಿದಂತೆ ವಿವಿಧ ಆಸ್ಪತೆೆÅಗಳಲ್ಲಿ ಸ್ವತ್ಛತಾ ಕಾರ್ಯ ನಡೆದಿದೆಯೆ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕುಟುಂಬ ಕಲ್ಯಾಣಾಧಿಕಾರಿ ಆಶಾ, ಕುಶಾಲನಗರದಲ್ಲಿ ತ್ಯಾಜ್ಯ ವಿಲೇವಾರಿಯಾಗದಿರುವುದು, ಶನಿವಾರಸಂತೆ ಆಸ್ಪತ್ರೆಯ ತ್ಯಾಜ್ಯವನ್ನು ಸಂಬಂಧಪಟ್ಟ ಟೆಂಡರ್‌ದಾರ ಹಳೆಯ ಬಿಲ್‌ ಪಾವತಿಯಾಗದ್ದರಿಂದ ವಿಲೇವಾರಿ ಮಾಡದಿರುವ ವಿಚಾರವನ್ನು ಸಭೆಯ ಮುಂದಿಟ್ಟರು. 

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ, ತ್ಯಾಜ್ಯ ವಿಲೇ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯತ್‌ ಜಂಟಿಯಾಗಿ ಆಸ್ಪತ್ರೆಯನ್ನು ಪರಿಶೀಲಿಸಿ ಎರಡು ಮೂರು ದಿನಗಳಲ್ಲಿ ಸಮಸ್ಯೆ ಬಗೆಹರಿಸುವಂತೆ ಸ್ಪಷ್ಟ ಸೂಚನೆ ನೀಡಿದರು.

ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಮುಕೊಂಡ ಸುಬ್ರಮಣಿ ಅವರು, ಶಾಂತಳ್ಳಿ ಆಸ್ಪತ್ರೆಯಲ್ಲಿ ಅಗತ್ಯ ನರ್ಸ್‌ ಮತ್ತು ಡಿ ಗ್ರೂಪ್‌ ನೌಕರರು ಇಲ್ಲದಿರುವುದು. ವಿವಿಧ ಆಸ್ಪತ್ರೆಗಳಲ್ಲಿ ಆಯುಷ್‌ ವೈದ್ಯರುಗಳಿದ್ದರೂ ಅವರು ಅಲೋಪತಿ ಔಷಧಿಗಳನ್ನು ನೀಡಲು ಹಿಂದೇಟು ಹಾಕುವ ವಿಚಾರಗಳನ್ನು ಪ್ರಸ್ತಾಪಿಸಿದರು. ಈ ಹಂತದಲ್ಲಿ ಉಪಾಧ್ಯಕ್ಷೆ ಲೋಕೆೇಶ್ವರಿ ಗೋಪಾಲ್‌ ವೈದ್ಯರುಗಳು ಇಲ್ಲದಿದ್ದರೆ ಆಸ್ಪತ್ರೆಯನ್ನೆ ಮುಚ್ಚಿ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ, ಗ್ರಾಮೀಣ ಭಾಗಗಳಲ್ಲಿ ಜಾಂಡೀಸ್‌ನ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದು, ಕುಡಿಯುವ ನೀರಿನ ಶುಚಿತ್ವಕ್ಕೆ ಒತ್ತು ನೀಡಬೇಕೆಂದರು. ಈ ಸಂದರ್ಭ ಸ್ಥಾಯೀ ಸಮಿತಿ ಅಧ್ಯಕ್ಷ ಮೂಕೊಂಡ ಸುಬ್ರಮಣಿ, ನಾಪೆ‌ೂàಕ್ಲು ಪಟ್ಟಣಕ್ಕೆ ನೀರನ್ನು ಶುದ್ಧೀಕರಿಸದೆ ನೇರವಾಗಿ ಸರಬರಾಜು ಮಾಡಲಾಗುತ್ತಿದೆ. ಅಗತ್ಯ ನೀರು ಶುದ್ಧೀಕರಣ ಘಟಕವನ್ನು ಸ್ಥಾಪಿಸುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.