ಕರಾವಳಿ: ಅಲ್ಲಲ್ಲಿ ಸಿಡಿಲಬ್ಬರದ ಮಳೆ
Team Udayavani, May 24, 2017, 3:47 PM IST
ಮಂಗಳೂರು/ಉಡುಪಿ: ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿ ಉತ್ತಮ ಮಳೆಯಾಗಿದೆ.
ಮಂಗಳೂರಿನಲ್ಲಿ ರಾತ್ರಿ ವೇಳೆ ಭಾರೀ ಸಿಡಿಲಿನೊಂದಿಗೆ ಮಳೆಯಾಗಿದೆ. ಉಳ್ಳಾಲ, ಬಜಪೆ ಪರಿಸರದಲ್ಲಿಯೂ ಮಳೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಅಲ್ಲಲ್ಲಿ ಮಳೆಯಾಗಿದೆ. ಧರ್ಮಸ್ಥಳ, ಮಡಂತ್ಯಾರು, ಪುಂಜಾಲಕಟ್ಟೆ, ಬಂಟ್ವಾಳ ಪರಿಸರದಲ್ಲಿ ಸಿಡಿಲು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಕೆಲವೆಡೆ ಮರ ಬಿದ್ದು ವಿದ್ಯುತ್ ಸರಬರಾಜಿಗೆ ತೊಂದರೆಯಾಗಿದೆ. ಕಾಶಿಬೆಟ್ಟುನಲ್ಲಿ ಮರ ರಸ್ತೆಗೆ ಬಿದ್ದು ಸಂಚಾರ ಸ್ಥಗಿತಗೊಂಡಿದೆ. ಮುಂಡಾಜೆಯಲ್ಲಿ ನಡೆಯುತ್ತಿದ್ದ ಯಕ್ಷಗಾನ ಮಳೆಯಿಂದಾಗಿ ರದ್ದುಗೊಂಡಿತು. ಸುಬ್ರಹ್ಮಣ್ಯ ಪರಿಸರದಲ್ಲಿಯೂ ರಾತ್ರಿ ವೇಳೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.
ಮೂಡಬಿದಿರೆ, ಕಾರ್ಕಳ ಪರಿಸರದಲ್ಲಿಯೂ ಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಉಡುಪಿ ತಾಲೂಕಿನ ವಿವಿಧೆಡೆ ಮಳೆಯಾಗಿದೆ.
ಕಾಸರಗೋಡು ಜಿಲ್ಲೆಯ ಕಾಸರಗೋಡು ಮತ್ತು ಮುಳ್ಳೇರಿಯ ಪರಿಸರದಲ್ಲಿ ಗುಡುಗು ಸಹಿತ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ