ಅನರ್ಹರಿಗೆ ಮನೆ: ಕ್ರಿಮಿನಲ್‌ ಮೊಕದ್ದಮೆ ಎಚ್ಚರಿಕೆ


Team Udayavani, Jul 26, 2017, 9:05 AM IST

Housing-Scheme-25-7.jpg

ಮಂಗಳೂರು: ಸರಕಾರದ ವಿವಿಧ ವಸತಿ ಯೋಜನೆಗಳಡಿ ಅರ್ಹ ವಸತಿ ರಹಿತರಿಗೆ ವಸತಿ ಸೌಲಭ್ಯ ನೀಡುವ ಕಾರ್ಯಕ್ರಮ ಗ್ರಾಮ ಪಂಚಾಯತ್‌ಗಳಿಂದ ನಡೆಯುತ್ತಿದೆ. ಸರಕಾರದ ವಸತಿ ಯೋಜನೆಯಡಿ ಓರ್ವ ವ್ಯಕ್ತಿ ಒಮ್ಮೆ ಮಾತ್ರವೇ ಸೌಲಭ್ಯ ಪಡೆಯಬಹುದಾಗಿದೆ. ಒಂದು ವೇಳೆ ಒಂದಕ್ಕಿಂತ ಹೆಚ್ಚು ಬಾರಿವಸತಿ ಸೌಲಭ್ಯ ಪಡೆದಿದ್ದರೆ ಅಂಥವ‌ರನ್ನು ಅನರ್ಹರೆಂದು ಪರಿಗಣಿಸಲಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೆಲವು ಅನರ್ಹರು ವಸತಿ ಯೋಜನೆಯಡಿ ವಸತಿ ಮಂಜೂರು ಮಾಡಿಸಿಕೊಂಡಿರುವುದು ಜಿ.ಪಂ. ಗಮನಕ್ಕೆ ಬಂದಿದೆ. ಅಂತಹವರನ್ನು ಗುರುತಿಸುವ ಅಭಿಯಾನವನ್ನು ಜಿ.ಪಂ. ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಅಂತಹ ಅನರ್ಹ ಫಲಾನುಭವಿಗಳು ತುರ್ತಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಮಾಹಿತಿ ನೀಡಬೇಕು ಹಾಗೂ ಅಕ್ರಮ/ನಿಯಮ ಬಾಹಿರವಾಗಿ ಪಡೆದ ಅನುದಾನವನ್ನು ಕೂಡಲೇ ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಂಥವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುವುದು.
ಅನರ್ಹರನ್ನು ಆಯ್ಕೆ ಮಾಡಿದ ಆರೋಪದಡಿ ಸಂಬಂಧಪಟ್ಟ ಗ್ರಾ.ಪಂ.ನ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ/ಕಾರ್ಯದರ್ಶಿಯವರ ವಿರುದ್ಧವೂ ಶಿಸ್ತು ಕ್ರಮ ಜರಗಿಸಲಾಗುವುದು. ಆದರೆ ಅರ್ಹ ಫಲಾನುಭವಿಗಳು ಯಾವುದೇ ಆತಂಕಪಡುವ ಅಗತ್ಯವಿಲ್ಲ. 2005-06ರಿಂದ ವಸತಿ ಯೋಜನೆಗಳಡಿ ಆಯ್ಕೆಗೊಂಡಿರುವ ಎಲ್ಲ ಫಲಾನುಭವಿಗಳು 7 ದಿನಗಳೊಳಗೆ ಸಂಬಂಧಪಟ್ಟ ಗ್ರಾ.ಪಂ.ಗೆ ಭೇಟಿ ನೀಡಿ ತಮ್ಮ ಆಧಾರ್‌ ಕಾರ್ಡ್‌ನ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕು ಎಂದರು.

10 ದಿನದೊಳಗೆ ಕಾಮಗಾರಿ ಆರಂಭಿಸಿ
ಸರಕಾರದಿಂದ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಫಲಾನುಭವಿಯಾಗಿ ಆಯ್ಕೆಗೊಂಡ ಅನಂತರ ತುರ್ತಾಗಿ ಮನೆಯ ಕಾಮಗಾರಿ ಪ್ರಾರಂಭಿಸಬೇಕಾಗಿರುವುದು ಫಲಾನುಭವಿಗಳ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಸರಿಯಾದ ಸಮಯದಲ್ಲಿ ಮನೆಯ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಸರಕಾರದ ಯೋಜನೆಯ ಅನುಷ್ಠಾನದಲ್ಲಿಯೂ ಸಹ ಹಿನ್ನಡೆಯುಂಟಾಗುತ್ತದೆ. ದ.ಕ. ಜಿಲ್ಲೆಯಲ್ಲಿ ವಸತಿ ಯೋಜನೆಗಳಡಿ 2015-16ರಿಂದ ಈವರೆಗೆ ಆಯ್ಕೆಗೊಂಡಿರುವ ಫಲಾನುಭವಿಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ 1,025, ಬೆಳ್ತಂಗಡಿ ತಾಲೂಕಿನಲ್ಲಿ 1,431, ಮಂಗಳೂರು ತಾಲೂಕಿನಲ್ಲಿ 1,041, ಪುತ್ತೂರು ತಾಲೂಕಿನಲ್ಲಿ 612 ಹಾಗೂ ಸುಳ್ಯ ತಾಲೂಕಿನಲ್ಲಿ 351 ಹೀಗೆ ಒಟ್ಟು 4,460 ಫಲಾನುಭವಿಗಳು ಮನೆಯ ಕಾಮಗಾರಿಯನ್ನು ಈವರೆಗೆ ಪ್ರಾರಂಭ ಮಾಡಿರುವುದಿಲ್ಲ. ಅಂತಹ ಫಲಾನುಭವಿಗಳು ಇನ್ನು 10 ದಿನದೊಳಗೆ ಮನೆಯ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಅಂಥವರಿಗೆ ಮನೆಯ ಆವಶ್ಯಕತೆ ಇಲ್ಲವೆಂದು ರದ್ದುಪಡಿಸಲಾಗುವುದು ಎಂದು ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.