ತುಳು ಸಂಘಟಕ ಎ.ಸಿ. ಭಂಡಾರಿಗೆ ಒಲಿದ ಅಕಾಡೆಮಿ ಅಧ್ಯಕ್ಷ  ಪಟ್ಟ

Team Udayavani, Aug 8, 2017, 6:55 AM IST

ac-bhandary.jpg

ಮಂಗಳೂರು: ಸುಮಾರು 5 ದಶಕಗಳಿಂದ ತುಳು ಭಾಷೆಯ ಅಭಿವೃದ್ಧಿಗೆ ವಿವಿಧ ನೆಲೆಗಳಲ್ಲಿ ಶ್ರಮಿಸುತ್ತಾ ಬಂದಿರುವ ಎ.ಸಿ. ಭಂಡಾರಿ ಅವರಿಗೆ ಈ ಬಾರಿಯ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. 
ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದವರಾದ 74 ವರ್ಷದ ಅಂಬಡೆ ಬೈಲು ಚಂದ್ರಶೇಖರ ಭಂಡಾರಿ ಅವರು 1970ರಲ್ಲಿ ಎಸ್‌.ಆರ್‌. ಹೆಗ್ಡೆ , ರತ್ನ ಕುಮಾರ್‌ ಅವರೊಂದಿಗೆ ಮಂಗಳೂರಿನಲ್ಲಿ ತುಳುಕೂಟವನ್ನು ಸ್ಥಾಪಿಸಿ ತುಳು ಭಾಷೆಯ ಅಭಿವೃದ್ಧಿಯ ನಿಟ್ಟಿನಲ್ಲಿ ವೇದಿಕೆಯನ್ನು ಹುಟ್ಟುಹಾಕಿದ್ದರು. ಮುಂದೆ ಈ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ತುಳು ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಅವರು ಅನೇಕ ನಾಟಕಗಳಲ್ಲಿ ಪಾತ್ರ ನಿರ್ವಹಿಸಿದ್ದರು. ತುಳು ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಘಟನೆ ಯಲ್ಲಿ ಕೈಜೋಡಿಸುತ್ತಾ ಬಂದಿದ್ದ ಇವರು ಉಜಿರೆಯಲ್ಲಿ ಜರಗಿದ ವಿಶ್ವ ತುಳು ಸಮ್ಮೇಳನದ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನಲ್ಲಿ ಸಮ್ಮೇಳನದ ವಲಯ ಸಮಿತಿಯಲ್ಲಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಕಳೆದ ಬಾರಿ ಕೂಡ ತುಳು ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಭಂಡಾರಿ ಹೆಸರು ಕೇಳಿಬಂದಿದ್ದರೂ ಕೊನೆಯ ಹಂತದಲ್ಲಿ ಅದು ಕೈತಪ್ಪಿಹೋಗಿತ್ತು.

ಹಿರಿಯ ಕಾಂಗ್ರೆಸಿಗರಾಗಿರುವ ಎ.ಸಿ. ಭಂಡಾರಿಯವರು ದ.ಕ. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಾಜ್ಯ ಕಾಂಗ್ರೆಸ್‌ ಕಿಸಾನ್‌ ಸೆಲ್‌ ಸಹ ಅಧ್ಯಕ್ಷರಾಗಿ ಅನೇಕ ಪ್ರಮುಖ ಹೊಣೆಗಾರಿಕೆಗಳನ್ನು ನಿರ್ವಹಿಸಿದ್ದಾರೆ. ಜಿಲ್ಲಾ ಪಂಚಾಯತ್‌ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡಿರುವ ಅವರು ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದ ಆಡಳಿತ ಮೊಕ್ತೇಸರಾಗಿ 27 ವರ್ಷಗಳ ಸೇವೆ ಸಲ್ಲಿಸಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದಾರೆ. 

ತುಳು ಭಾಷೆಯ ಅಭಿವೃದ್ಧಿಗೆ ಒತ್ತು
“ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷತೆ ದೊರಕಿರುವುದು ಸಂತಸ ತಂದಿದೆ. ತುಳು ಭಾಷೆ ಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಸಂಘಟಕನಾಗಿ ಕಳೆದ 50 ವರ್ಷಗಳಿಂದ ಸೇವೆ ಮಾಡುತ್ತಾ ಬಂದಿದ್ದೇನೆ. ತುಳು ಭಾಷೆ ಯಲ್ಲಿ ಹೆಚ್ಚು ಸಾಹಿತ್ಯ ಕೃತಿಗಳು ಸೃಷ್ಟಿಯಾಗ ಬೇಕು. ಈ ನಿಟ್ಟಿನಲ್ಲಿ ಪ್ರೋತ್ಸಾಹ ಸಿಗಬೇಕು. ಇದಲ್ಲದೆ ಪ್ರಸ್ತುತ ಶಾಲೆಗಳಲ್ಲಿ ತುಳು ತೃತೀಯ ಭಾಷೆಯಾಗಿ ಕಲಿಕೆಯಾಗುತ್ತಿದ್ದು ಇದು ಇನ್ನಷ್ಟು ವಿಸ್ತಾರ ಗೊಳ್ಳಬೇಕು. ತುಳು ಭಾಷೆ 8ನೇ ಪರಿಚ್ಛೇದ ದಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಈಗಾಗಲೇ ಬಹಳಷ್ಟು ಪ್ರಯತ್ನಗಳು ನಡೆದಿವೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹೊಸದಿಲ್ಲಿಯಲ್ಲಿ ಪ್ರಧಾನಿ ಹಾಗೂ ಗೃಹಸಚಿವರ ಬಳಿ ತೆರಳಿದ ನಿಯೋಗದಲ್ಲಿ ನಾನು ಹೋಗಿದ್ದೆ. ಈ ಕಾರ್ಯಕ್ಕೆ ಎಲ್ಲರ ಸಹಕಾರ ಪಡೆದುಕೊಂಡು ಇನ್ನಷ್ಟು ಒತ್ತು ನೀಡಲಾಗುವುದು’ ಎಂದು ಎ.ಸಿ. ಭಂಡಾರಿ ಅವರು”ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.