ಬದುಕಿನ ಯಶಸ್ಸಿಗೆ ಶಿಕ್ಷಣ ಅನಿವಾರ್ಯ


Team Udayavani, Feb 18, 2017, 12:51 PM IST

mys2.jpg

ಮೈಸೂರು: ಮಹಿಳೆಯರ ಅನುಕೂಲಕ್ಕಾಗಿ ರೂಪಿಸಿರುವ ಕಾನೂನುಗಳ ಕುರಿತು ಅರಿವು ಮೂಡಿಸುವ ಜತೆಗೆ, ಮಹಿಳೆಯರಿಗೆ ಉತ್ತಮ ಅವಕಾಶಗಳನ್ನು ನೀಡಬೇಕಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಪಿ.ಜೆ.ಎಂ.ಪಾಟೀಲ್‌ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದ ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಮಾನಸಗಂಗೋತ್ರಿಯ ಇಎಂಆರ್‌ಆರ್‌ಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ನೆಲೆಯಲ್ಲಿ ಮಾನವ ಹಕ್ಕುಗಳು, ಕರ್ತವ್ಯಗಳು ಮತ್ತು ಶಿಕ್ಷಣ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು.

ಸಮಾಜದಲ್ಲಿ ಮಹಿಳೆಗೆ ಸಮಾನತೆ ಹಾಗೂ ಸ್ವಾತಂತ್ರÂವನ್ನು ಒದಗಿಸಬೇಕೆಂಬ ಉದ್ದೇಶದಿಂದ ದೇಶದ ಸಂವಿಧಾನದಲ್ಲಿ ಮಹಿಳೆಯರಿಗಾಗಿ ಹಲವು ಕಾನೂನುಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಸಮಾಜದಲ್ಲಿ ಘನತೆ ಹಾಗೂ ಯಶಸ್ವಿ ಬದುಕು ಸಾಗಿಸಲು ಮುಖ್ಯವಾಗಿ ಶಿಕ್ಷಣ ಆನಿವಾರ್ಯ.

ಈ ಕಾರಣದಿಂದಲೇ 14 ವರ್ಷದೊಳಗಿನ ಪತ್ರಿಯೊಬ್ಬರಿಗೂ ಶಿಕ್ಷಣ ನೀಡಬೇಕೆಂದು ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸಿ ಕಡ್ಡಾಯ ಮಾಡಲಾಗಿದೆ. ಇದಲ್ಲದೆ ಮಹಿಳೆಯರಿಗೆ ಅನುಕೂಲವಾಗುವಂತೆ ಅನೇಕ ಕಾನೂನುಗಳು ದೇಶದ ಸಂವಿಧಾನದಲ್ಲಿದ್ದು, ಈ ಕಾನೂನುಗಳ ಕುರಿತು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕಿದೆ.

ಜತೆಗೆ ಸಮಾಜದಲ್ಲಿ ಮಹಿಳೆ ಸಮಾನವಾಗಿ ಜೀವನ ನಡೆಸಲು ಲಿಂಗ ಭೇದ, ಶೋಷಣೆ, ದೌರ್ಜನ್ಯ ಮುಕ್ತ ಪರಿಸರ ನಿರ್ಮಿಸುವ ಮೂಲಕ ಮಹಿಳೆಯರಿಗೆ ಉತ್ತಮ ಅವಕಾಶಗಳನ್ನು ಸೃಷ್ಟಿಸಬೇಕಿದೆ ಎಂದರು. ಸಮ್ಮೇಳನ ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಯಶವಂತ ಡೋಂಗ್ರೆ ಮಾತನಾಡಿ, ಸಮಾಜದಲ್ಲಿ ಇಂದಿಗೂ ಗಂಡು-ಹೆಣ್ಣಿನ ನಡುವೆ ದೊಡ್ಡ ಕಂದಕವಿದೆ.

ಅದರ ನಿವಾರಣೆ ಶಿಕ್ಷಣ, ಸಮಾನತೆ ಪರಿಕಲ್ಪನೆ, ಸಮಾನ ಅವಕಾಶಗಳಿಂದ ಮಾತ್ರವೇ ಸಾಧ್ಯ. ಅಲ್ಲದೆ ರಾಷ್ಟ್ರೀಯ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಮಹಿಳೆಯ ಸಮಾನ ಹಕ್ಕುಗಳಿಗಾಗಿ ಸಾರ್ವಜನಿಕ ವಲಯದಲ್ಲಿ ಹೊಸ ಚಿಂತನೆಗಳನ್ನು ಹುಟ್ಟಿಹಾಕಿದರು. ಮಹಿಳೆಯರ ಇದನ್ನು ಅನುಸರಿಸಿದರೆ ಆರ್ಥಿಕ ಸಬಲೀಕರಣ ಸಾಧ್ಯವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ.ಆರ್‌.ರಾಜಣ್ಣ, ಕಾನೂನು ಅಧ್ಯಯನ ಮತ್ತು ಸಂಶೋಧನಾ ವಿಬಾಗದ ಮುಖ್ಯಸ್ಥ ಪಿ.ರಮೇಶ್‌ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.