ಶಿವನ ದೇಗುಲಗಳಿಗೆ ಹರಿದು ಬಂದ ಭಕ್ತರು

Team Udayavani, Feb 25, 2017, 12:57 PM IST

mys7.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯ ಆವರಣದಲ್ಲಿರುವ ಐತಿಹಾಸಿಕ ತ್ರಿನೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ನಗರದ ಶಿವ ದೇವಾಲಯಗಳಲ್ಲಿ ಶುಕ್ರವಾರ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂಜಾನೆಯಿಂದಲೇ ದೇವಾಲಯಗಳತ್ತ ಧಾವಿಸಿದ ಸಾವಿರಾರು ಮಂದಿ ಶಿವ ಭಕ್ತರು ಶಿವನ ದರ್ಶನ ಪಡೆದು ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಹಬ್ಬ ಆಚರಿಸಿದರು. ಆ ಮೂಲಕ ದಿನವಿಡೀ ಶಿವನ ಆರಾಧನೆಯಲ್ಲಿ ತಲ್ಲೀನರಾದ ಭಕ್ತರು ಪರಶಿವನ ಸ್ಮರಣೆ ಮಾಡುತ್ತಾ ಜಾಗರಣೆ ಮಾಡುವ ಮೂಲಕ ಭಗವಂತನ ಕೃಪೆಗೆ ಪಾತ್ರರಾದರು.

ತ್ರಿನೇಶ್ವರಸ್ವಾಮಿ ದೇವಸ್ಥಾನ: ಶಿವರಾತ್ರಿ ಹಿನ್ನೆಲೆಯಲ್ಲಿ ಅರಮನೆಯ ಶ್ರೀ ತ್ರಿನೇಶ್ವರ ದೇವಸ್ಥಾನದಲ್ಲಿ ಸೋಮಧಿವಾರ ಮುಂಜಾನೆ 4.30ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭಗೊಂಡಿತು. ಗಂಗಾಜಲ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕೈಂಕರ್ಯಗಳನ್ನು ಸಲ್ಲಿಸಲಾಯಿತು.ಶಿವರಾತ್ರಿ ಹಿನ್ನೆಲೆಯಲ್ಲಿ ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ರಾಜವಂಶಸ್ಥೆ ಡಾ. ಪ್ರಮೋದಾದೇವಿ ಒಡೆಯರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಅಂತೆಯೇ ಧಾರ್ಮಿಕ ಕೈಂಕರ್ಯಗಳು ಪೂರ್ಣಗೊಂಡ ಬಳಿಕ ¸‌ಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ದೇವರ ದರ್ಶನ ಪಡೆದ ಭಕ್ತರು ದೇವರಿಗೆ ಬಿಲ್ವಪತ್ರೆ ಸಮರ್ಪಿಸಿ, ಭಕ್ತಭಾವ ಮೆರೆದರು. ಶಿವರಾತ್ರಿ ಪ್ರಯುಕ್ತ ತ್ರಿನೇಶ್ವರಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಕೊಳಗ (ಮುಖವಾಡ) ಧಾರಣೆ ಮಾಡಲಾಗಿತ್ತು. ದೇವರಿಗೆ ಶಿವರಾತ್ರಿಯಂದು ಮಾತ್ರವೇ ಚಿನ್ನದ ಮುಖವಾಡವನ್ನು ಧಾರಣೆ ಮಾಡುವುದರಿಂದ ವಿಶೇಷ ಆಕರ್ಷಣೆಯಲ್ಲಿದ್ದ ದೇವರ ದರ್ಶನ ಪಡೆಯಲು ಅಪಾರ ಸಂಖ್ಯೆಯ ಭಕ್ತರ ದೇವಸ್ಥಾನಕ್ಕೆ ಆಗಮಿಸಿದ್ದರು.

ಎಲ್ಲೆಡೆ ಶಿವನಾಮ ಸ್ಮರಣೆ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಶಿವನಾಮ ಸ್ಮರಣೆ ಕೇಳಿಬಂತು. ಪ್ರಮುಖವಾಗಿ ಶಿವದೇವಾಲಯಗಳು ಸೇರಿದಂತೆ ಇತರೆ ದೇವಸ್ಥಾನಗಳಲ್ಲೂ ಶಿವರಾತ್ರಿ ಅಂಗವಾಗಿ ನಾನಾ ಪೂಜಾ ಕೈಂಕರ್ಯಗಳು ನಡೆಯಿತು.

ಅದರಂತೆ ಶಿರಡಿ ಸಾಯಿ ಸೇವಾಶ್ರಮಟ್ರಸ್ಟ್‌ನಿಂದ ಶಿವರಾತ್ರಿ ಅಂಗವಾಗಿ ಶಿವಗಣ ಹೋಮ, ಸಂಕಲ್ಪ, ಪುಷ್ಪಾರ್ಚನೆ, ಅಭಿಷೇಕ, ಭಜನೆ, ಪ್ರಸಾದ ವಿನಿಯೋಗ ನಡೆಯಿತು. ಲಷ್ಕರ್‌ ಮೊಹಲ್ಲಾದ ಮಲೆ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರ ಉತ್ಸವಮೂರ್ತಿ, ಸುವರ್ಣ ಕೊಳಗದ ಮೆರವಣಿಗೆ, ಮಹದೇಶ್ವರ ಸ್ವಾಮಿ ಪ್ರಾಣಲಿಂಗಕ್ಕೆ ಮಹಾರುದ್ರಾಭಿಷೇಕ ಇನ್ನಿತರ ಪೂಜೆಗಳು ನಡೆದವು.

ಉಳಿದಂತೆ ಚಾಮುಂಡಿಬೆಟ್ಟದ ಮಹಾಬಲೇಶ್ವರ ಸ್ವಾಮಿದೇವಸ್ಥಾನ, ಗಂಗೋತ್ರಿ ಬಡಾವಣೆಯಲ್ಲಿರುವ ಮಾರುತಿ ದೇವಸ್ಥಾನ, ಹಳೆಸಂತೇಪೇಟೆ ಪ್ರಸನ್ನ ನಂಜುಂಡೇಶ್ವರ ಸ್ವಾಮಿದೇವಸ್ಥಾನ, ಖೀಲ್ಲೆ ಮೊಹಲ್ಲಾ ಬೈರವೇಶ್ವರಸ್ವಾಮಿ ದೇವಸ್ಥಾನ, ಅಗ್ರಹಾರದ ನೂರೊಂದು ಗಣಪತಿದೇವಸ್ಥಾನ, ನಾಗಲಿಂಗೇಶ್ವರ ಮಠ, ವೀರನಗೆರೆ ಮುಕ್ಕಣ್ಣೇಶ್ವರಸ್ವಾಮಿ ದೇವಾಲಯ, ವಿಜಯನಗರದ ಯೋಗಾನರಸಿಂಹಸ್ವಾಮಿ ದೇವಾಲಯ, ದೇವರಾಜ ಮೊಹಲ್ಲಾ ದಿವಾನ್ಸ್‌ರಸ್ತೆ ಅಮೃಧಿತೇಶ್ವರ ದೇವಾಲಯ, ವಿವಿ ಮೊಹಲ್ಲಾದ ಚಂದ್ರಮೌಳೇಶ್ವರ ದೇವಾಲಯ, ಕುರುಬಾರಹಳ್ಳಿ ಮಲೆ ಮಹದೇಶ್ವರ ಸ್ವಾಮಿದೇವಾಲಯ, ಚಾಮುಂಡಿಪುರಂನ ಪ್ರಸನ್ನ ವಿರೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.

ಮಳೆಯಾಗದೆ ಬರಗಾಲ ಬಂದಿರುವುದರಿಂದ ಜನ-ಜಾನುವಾರುಗಳಿಗೆ ತೊಂದರೆ ಉಂಟಾಗಿದೆ. ಈ ವರ್ಷವಾದರೂ ಉತ್ತಮ ಮಳೆಯಾಗಿ ಬರಗಾಲ ನಿವಾರಣೆಯಾಗಲಿ ಎಂದು ತ್ರಿನೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ.
-ಡಾ.ಪ್ರಮೋದಾದೇವಿ ಒಡೆಯರ್‌, ರಾಜ ವಂಶಸ್ಥರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.