ಕಾಂಗ್ರೆಸ್‌ ಮುಕ್ತ ಕರ್ನಾಟಕದ ಟ್ರೇಲರ್‌

Team Udayavani, Mar 28, 2017, 1:00 PM IST

mys6.jpg

ಮೈಸೂರು: ಕಾಂಗ್ರೆಸ್‌ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದ್ದು, ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆ ಅದರ ಟ್ರೇಲರ್‌ ಆಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ವಿರೋಧಿ ಮತದಾರರಿಗೆ ಬಿಜೆಪಿ ಬಿಟ್ಟರೆ ಪರ್ಯಾಯವೇ ಇಲ್ಲ. ಹೀಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಹೋರಾಟ ನಡೆಯಲಿದೆ. ಮೋದಿ ಮತ್ತು ರಾಹುಲ್‌ ನಡುವೆ ಸ್ಪರ್ಧೆ ಎಂದಾಗ ಸಹಜವಾಗಿ ಯಾರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

ಹಿರಿಯ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್‌ ಅವರನ್ನು ಕೆಟ್ಟದ್ದಾಗಿ ನಡೆಸಿಕೊಂಡಿದ್ದ ರಿಂದ ಅವರು ಪಕ್ಷ ಬಿಡಬೇಕಾಯಿತು. ಕಾಂಗ್ರೆಸ್‌ ಬಿಡುವ ಹಿರಿಯ ನಾಯಕರೆಲ್ಲ ನರೇಂದ್ರಮೋದಿ ನಾಯಕತ್ವವನ್ನು ಒಪ್ಪಿ ಬಿಜೆಪಿಗೆ ಬರುತ್ತಿದ್ದಾರೆ. ಎಸ್‌.ಎಂ.ಕೃಷ್ಣ  ಬಿಜೆಪಿ ಸೇರಿದ ನಂತರ ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ ಭಾಗದಲ್ಲಿ ಬಿಜೆಪಿ ಇನ್ನಷ್ಟು ಬಲ ಬಂದಿದೆ. ಹೀಗಾಗಿ ಈ ಭಾಗದಲ್ಲಿ ಜೆಡಿಎಸ್‌ ನಮ್ಮ ಪ್ರಬಲ ಪ್ರತಿಸ್ಪರ್ಧಿಯಾಗಲಾರದು ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಇದು ಕಡೆಯ ಹೋರಾಟ. ಹೀಗಾಗಿ ಅವರು ತಮ್ಮೆಲ್ಲಾ ಶಕ್ತಿಯನ್ನು ಈ ಉಪ ಚುನಾವಣೆಗೆ ಬಳಸುತ್ತಿದ್ದಾರೆ. ತಮ್ಮ ಸರ್ಕಾರದ ಎಲ್ಲ ಮಂತ್ರಿಗಳನ್ನೂ ಈ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ. ಮಂತ್ರಿಗಳು ಮಾತ್ರವಲ್ಲ, ಕಾಂಗ್ರೆಸ್‌ನ ಎಲ್ಲ ಶಾಸಕರು ಹಾಗೂ ಪಕ್ಷದ ಎಲ್ಲ ಮುಖಂಡರನ್ನು ಕರೆತಂದರೂ ಪ್ರಯೋಜನವಾಗದು.

ಅವರೆಲ್ಲ ಸಿದ್ದರಾಮಯ್ಯ ಸರ್ಕಾರದ ದುರಾಡಳಿತದ ಪ್ರತಿನಿಧಿಗಳಾಗಿಯೇ ಬರುತ್ತಾರೆ. ಇವರನ್ನು ಜನತೆ ಒಪ್ಪುವುದಿಲ್ಲ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯೆಂದರೆ ಒಂದರ ಹಿಂದೆ ಒಂದರಂತೆ ಹಗರಣಗಳು ಬಯಲಾಗುತ್ತಿರುವುದು ಎಂದು ಲೇವಡಿ ಮಾಡಿದರು. ಭ್ರಷ್ಟಾಚಾರ ಮತ್ತು ವಿಕಾಸವಾದದ ನಡುವಿನ ಹೋರಾಟ ಈ ಉಪ ಚುನಾವಣೆ. ಕಾಂಗ್ರೆಸ್‌ ಪ್ರತಿನಿಧಿಸುತ್ತಿದ್ದ ಈ ಎರಡೂ ಕ್ಷೇತ್ರಗಳನ್ನು ಬಿಜೆಪಿ ಕಸಿದುಕೊಳ್ಳುವುದು ನಿಶ್ಚಿತ ಎಂದರು.

ಬಿಜೆಪಿಯ ಉತ್ತಮ ಆಡಳಿತ, ಅಭಿವೃದ್ಧಿಗಾಗಿ ರಾಜಕೀಯ ಹಾಗೂ ಮೋದಿ ನಾಯಕತ್ವವನ್ನು ದೇಶದ ಜನತೆ ಒಪ್ಪಿದ್ದಾರೆ. ಹೀಗಾಗಿ ಎಲ್ಲ ಚುನಾವ ಣೆಗಳಲ್ಲೂ ದೇಶದ ಜನ ಬಿಜೆಪಿ ಬೆಂಬಲಿಸುತ್ತಾ ಬಂದಿದ್ದಾರೆ. ನೋಟು ಅಮಾನ್ಯಿàಕರಣದ ನಂತರವೂ ಬಿಜೆಪಿಯ ಟ್ರ್ಯಾಕ್‌ ರೆಕಾರ್ಡ್‌ ಚೆನ್ನಾಗಿದೆ. ಹಿಂದುಳಿದವರು, ಎಸ್ಸಿ-ಎಸ್ಟಿ ಸಮುದಾಯದವರು ಮೋದಿ ನಾಯಕತ್ವದಲ್ಲಿ ವಿಶ್ವಾಸ ಇರಿಸಿದ್ದಾರೆ.

ಉತ್ತರಪ್ರದೇಶ ಚುನಾವಣೆ ಯಲ್ಲಿ ಈ ಸಮುದಾಯಗಳು ಬಿಎಸ್‌ಪಿ, ಎಸ್‌ಪಿಯಿಂದ ಬಿಜೆಪಿಯತ್ತ ಸ್ಥಳಾಂತರವಾಗಿವೆ. ಉತ್ತಮ ಆಡಳಿತ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಜನ ಬಿಜೆಪಿಗೆ ಮತ ನೀಡಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದುಳಿದ ವರ್ಗದವರ ಕಲ್ಯಾಣ ಕಾರ್ಯಕ್ರಮಗಳು ಕೇವಲ ಘೋಷಣೇಗಷ್ಟೆ ಸೀಮಿತವಾಗಿದ್ದು, ಎಲ್ಲ ಕಾರ್ಯ ಕ್ರಮಗಳೂ ಕಾಗದದಲ್ಲೇ ಉಳಿದಿವೆ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ ಸರ್ಕಾರ ದಲಿತ, ಹಿಂದುಳಿದ ವರ್ಗಗಳ ವಿರೋಧಿ. ತನ್ನ ಅಧಿಕಾರಾವಧಿಯ ಕೊನೆಯ ದಿನಗಳಲ್ಲಿ ಅವರಿಗೆ ಮೀಸಲಾತಿಯ ನೆನಪಾಗಿದೆ. ಮೀಸಲಾತಿಯ ಪ್ರಮಾಣ ಶೇ.50 ರಿಂದ ಶೇ.72ಕ್ಕೆ ಹೆಚ್ಚಿಸುವುದು ಅಸಾಧ್ಯ ಎಂಬುದು ಕಾಂಗ್ರೆಸ್ಸಿಗರಿಗೂ ಗೊತ್ತಿದೆ. ಆದರೂ ಚುನಾವಣೆಯ ಗಿಮಿಕ್‌ ಆಗಿ ಸಿದ್ದರಾಮಯ್ಯ  ಮೀಸಲಾತಿ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದರು. ಮಾಜಿ ಸಚಿವರಾದ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಮಾಜಿ ಶಾಸಕ ನಂದೀಶ್‌ ರೆಡ್ಡಿ, ನಗರ ಬಿಜೆಪಿ ಅಧ್ಯಕ್ಷ ಡಾ. ಬಿ.ಎಚ್‌. ಮಂಜುನಾಥ್‌, ಪ್ರಧಾನ ಕಾರ್ಯದರ್ಶಿಗಳಾದ ಫ‌ಣೀಶ್‌, ಎಚ್‌.ವಿ. ರಾಜೀವ್‌ ಇತರರು ಇದ್ದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.