ಇತರೇ ರಾಜ್ಯಗಳಿಗೆ ಸಿದ್ದು ಸರ್ಕಾರ ಮಾದರಿ

Team Udayavani, Jul 24, 2017, 12:05 PM IST

mys4.jpg

ಕೆ.ಆರ್‌.ನಗರ: ಸಿದ್ದರಾಮಯ್ಯರ ಸರ್ಕಾರ ಚುನಾವಣೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 150ಕ್ಕಿಂತ ಹೆಚ್ಚಿನ ಭರವಸೆಗಳನ್ನು ಈಡೇರಿಸಿದ್ದು ದೇಶದಲ್ಲಿ ಇತರೇ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

ಪಟ್ಟಣದ ಸಂಗೊಳ್ಳಿರಾಯಣ್ಣ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯರ ಸರ್ಕಾರ ಮೋದಿ ಸರ್ಕಾರದ ತರಹ ಅಲ್ಲ. ಮೋದಿ ಸರ್ಕಾರ ಚುನಾವಣಾ ಪ್ರನಾಳಿಕೆಯಲ್ಲಿನ ಶೇ.20 ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸುವಲ್ಲಿ ಸಫ‌ಲವಾಗಿದೆ ಎಂದು ದೂರಿದರು.

ಅಲ್ಲದೆ ನಮ್ಮ ಸರ್ಕಾರ ಕಳೆದ ನಾಲ್ಕು ವರ್ಷಗಳ ಆಡಳಿತ ಯಾವುದೇ ಒಳ ಜಗಳಗಳಿಲ್ಲದ ಆರೋಪ ರಹಿತ, ಹಗರಣ ರಹಿತ ಹಾಗೂ ಭಿನ್ನಮತ ರಹಿತ ಸರ್ಕಾರವಾಗಿದೆ. ಯಡಿಯೂರಪ್ಪ ಹಲವು ರೀತಿಯಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಆರೋಪಗಳ ಮೂಲಕ ಪ್ರಯತ್ನಿಸಿದರೂ ಅವು ಯಾವುವೂ ಸಫ‌ಲವಾಗಲಿಲ್ಲ ಎಂದರು.

ಜೆಡಿಎಸ್‌ ಪಕ್ಷಕ್ಕೆ ಯಾವುದೇ ತತ್ವ, ಸಿದ್ಧಾಂತಗಳಿಲ್ಲ. ಮುಂದಿನ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅತಂತ್ರ ಫ‌ಲಿತಾಂಶ ತಂದು ಹಣ ಮಾಡಬೇಕೆಂಬುದೆ ಅವರ ಗುರಿ ಎಂದು ಛೇಡಿಸಿದರು. ಪ್ರಜ್ವಲ್‌ ಹೇಳಿಕೆಯಿಂದಲೇ ತಿಳಿದಿದೆ ದೇವೇಗೌಡರ ಕುಟುಂಬದಲ್ಲೇ ಸಾಕಷ್ಟು ಒಡಕು ಇದೆ ಅಂತ.

ಇನ್ನು ಕುಮಾರಸ್ವಾಮಿ ರಾಜ್ಯ ಪ್ರವಾಸ, ಪಾದಯಾತ್ರೆ ಅಂತ ಹೇಳ್ತಾ ಕಾಲ ಕಳೆಯುತ್ತಿದ್ದಾರೆ. ಆದರೆ ನಮ್ಮಲ್ಲಿ ಚುನಾವಣೆ ಎದುರಿಸಲು ಭತ್ತಳಿಕೆಯಲ್ಲಿ ಸಾಕಷ್ಟು ಅಸ್ತ್ರಗಳಿವೆ. ಸಿದ್ದರಾಮಯ್ಯರ ಜಾತ್ಯತೀತ ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ಮುಂಬರುವ ಚುನಾವಣೆಯಲ್ಲೂ ರಾಜ್ಯದ ಜನತೆ ನಮ್ಮ ಕೈಹಿಡಿಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಇವತ್ತು ಕೆ.ಆರ್‌.ನಗರದಲ್ಲಿ ಕಾಂಗ್ರೆಸ್‌ ಗೊಂದಲರಹಿತವಾಗಿದೆ. ಈ ಹಿಂದೆ ಇದ್ದ ಎರಡು ಕಚೇರಿ, ಎರಡು ಗುಂಪುಗಳು ಇಲ್ಲವಾಗಿದೆ. ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ ಪಕ್ಷದಿಂದ ಎಲ್ಲಾ ಅಧಿಕಾರಗಳನ್ನು ಪಡೆದು ಇದೀಗ ಸ್ವಾರ್ಥ ರಾಜಕಾರಣಕ್ಕೋಸ್ಕರ ಪಕ್ಷ ತೊರೆದು ತಾಯಿಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದ ಅವರು ಕಾಂಗ್ರೆಸ್‌ ಪಕ್ಷದಿಂದ ಅಥವಾ ಸಿದ್ದರಾಮಯ್ಯರಿಂದ ಯಾವುದೇ ದ್ರೋಹ ಅವರಿಗೆ ಆಗಿರಲಿಲ್ಲ ಎಂದರು.

ವಿಧಾನ ಪರಿಷತ್‌ ಸದಸ್ಯ ಆರ್‌.ಧರ್ಮಸೇನಾ ಮಾತನಾಡಿ, ಇವತ್ತಿನ ಸಭೆ ಕಾಂಗ್ರೆಸ್‌ ಪಕ್ಷ ಒಬ್ಬ ವ್ಯಕ್ತಿಯ ಹಿಂದಿಲ್ಲ. ಕಾರ್ಯಕರ್ತರು ಪಕ್ಷದ ಹಿಂದಿದ್ದಾರೆ ಎಂದು ಸಾಬೀತುಪಡಿಸಿದೆ. ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್‌ಗೆ ಡಿ.ರವಿಶಂಕರ್‌ ಸರಿಯಾದ ಕುಸ್ತಿ ಪಟು, ಎದುರಾಳಿ ಸಾಮಾನ್ಯರಲ್ಲವಾದ್ದರಿಂದ ಸರಿಯಾಗಿ ಪಟ್ಟುಗಳನ್ನು ಕರಗತ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌ ಮಾತನಾಡಿ, ಕೆ.ಆರ್‌.ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಉತ್ಸಾಹ ನೋಡಿದರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೊಸ ಶಕೆ ಪ್ರಾರಂಭವಾದಂತಿದೆ. ಸಿದ್ದರಾಮಯ್ಯರ ಸರ್ಕಾರ 8635 ಕೋಟಿ ರೈತರ ಸಾಲ ಮನ್ನಾ ಮಾಡಿದೆ.

ಆದರೆ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡುವಲ್ಲಿ ಹಿಂದೇಟು ಹೊಡೆದಿದೆ. ಅಲ್ಲದೆ ಈ ಸರ್ಕಾರ ಎಲ್ಲಾ ಜಾತಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಒದಗಿಸುತ್ತಾ ಬಂದಿದೆ. ಮುಂದಿನ ಅವಧಿಗೂ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡ ದೊಡ್ಡಸ್ವಾಮೇಗೌಡ, ಜಿಪಂ ಸದಸ್ಯರಾದ ಡಿ.ರವಿಶಂಕರ್‌ ಮತ್ತು ಅಚ್ಯುತಾನಂದ, ದಿ.ಮಂಚನಹಳ್ಳಿಮಹದೇವರ ಪತ್ನಿ ಅನುರಾಧ, ಪುತ್ರಿ ಐಶ್ವರ್ಯ, ತಾಪಂ ಅಧ್ಯಕ್ಷ ಹೆಚ್‌.ಟಿ.ಮಂಜುನಾಥ್‌. ಕೆ.ನಟರಾಜ್‌, ವಕ್ತಾರ ಜಾಬೀರ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಕಾಂಗ್ರೆಸ್‌ ಮುಖಂಡರಾದ ಎಂ. ವೆಂಕಟರಾಮು, ಮಾರ್ಚಳ್ಳಿ ಶಿವರಾಮು, ನರಸಿಂಹರಾಜು, ಶ್ರೀನಿವಾಸ್‌, ಯೋಜನಾಪ್ರಾಧಿಕಾರದ ಅಧ್ಯಕ್ಷ ಕುಮಾರ್‌, ಮಾಜಿ ಅಧ್ಯಕ್ಷ ಜಿ.ಕೆ.ರಾಜು, ಕೋಳಿ ಪ್ರಕಾಶ್‌, ಹೇಮಂತ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಮಹದೇವ್‌ ಉದಯಶಂಕರ್‌ ಇತರರು ಇದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.