ಚಲಿಸುತ್ತಿದ್ದ ಕಾರಿನಲ್ಲೇ ನಟಿ ಕಿಡ್ನಾಪ್‌, ಲೈಂಗಿಕ ಕಿರುಕುಳ


Team Udayavani, Feb 19, 2017, 7:52 AM IST

18-PTI-5.jpg

ಕೊಚ್ಚಿ: ಕನ್ನಡದ ಕೆಲವು ಚಿತ್ರಗಳಲ್ಲಿ ನಟಿಸಿದ್ದ ಮಲಯಾಳಂ ಮೂಲದ ಬಹುಭಾಷಾ ನಟಿಯೊಬ್ಬರನ್ನು ಐವರು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇಲ್ಲಿನ ಅಂಗಮಾಲಿ ಸಮೀಪದ ಅಥನಿಯಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಶೂಟಿಂಗ್‌ ಮುಗಿಸಿ ವಾಪಸಾಗುತ್ತಿದ್ದಾಗ ಈ ದುರ್ಘ‌ಟನೆ ಸಂಭವಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಎರ್ನಾಕುಳಂನಲ್ಲಿ  ಶೂಟಿಂಗ್‌ ಮುಗಿಸಿದ್ದ ಈ ನಟಿ ಕಾರಿನಲ್ಲಿ  ತೃಶ್ಶೂರ್‌ ಕಡೆಗೆ ಹೊರಟಿದ್ದರು. ರಾತ್ರಿ 10ರ ಸುಮಾಧಿರಿನಲ್ಲಿ ಅಥನಿ ಸಮೀಪದಲ್ಲಿ ಕಾರಿಗೆ ಹಿಂಬದಿಯಿಂದ ಟೆಂಪೋ ಟ್ರಾವೆಧಿಲರ್‌ ಅನ್ನು ಉದ್ದೇಶಧಿಪೂರ್ವಧಿಕವಾಗಿ ಢಿಕ್ಕಿ ಹೊಡೆಸಲಾಗಿದೆ. ಕಾರಿನ ಚಾಲಕ ಜಗಳಕ್ಕಿಳಿದಾಗ ಆತನನ್ನು ಕೆಳಗೆ ಹಾಕಿ, ದುಷ್ಕರ್ಮಿಗಳು ನಟಿ ಇದ್ದ ಕಾರನ್ನೇರಿ ಅಪಹರಿಸಿದ್ದಾರೆ. ಕಾರು ಚಲಾಯಿ­ಸುತ್ತಲೇ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ ದುಷ್ಕರ್ಮಿಗಳು ಎರಡು ತಾಸು ನಗರವನ್ನು ಸುತ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.

ಪಲರಿವಟ್ಟಮ್‌ನಲ್ಲಿ ದುಷ್ಕರ್ಮಿಗಳು ಬೇರೊಂದು ಕಾರನ್ನು ಏರಿ ಪರಾರಿಯಾಗಿದ್ದಾರೆ. ತಡರಾತ್ರಿಯಲ್ಲಿ ಈ ನಟಿ ಸ್ವತಃ ಡ್ರೈವ್‌ ಮಾಡಿ ಸಮೀಪದ ತ್ರಿಕ್ಕಾಕರದಲ್ಲಿರುವ ನಿರ್ದೇಶಕ ಲಾಲ್‌ ಅವರ ಮನೆಗೆ ಹೋಗಿ ಅಲ್ಲಿ ರಕ್ಷಣೆ ಪಡೆದರು. ಶನಿವಾರ ಬೆಳಗ್ಗೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ಮಾಜಿ ಡ್ರೈವರ್‌ ಸುನೀಲ್‌ ಕುಮಾರ್‌ ಈ ಕೃತ್ಯ ಎಸಗಿದ್ದಾನೆಂದು ಅನುಮಾನಿ­ಸಲಾಗಿದೆ. ಡಿಜಿಪಿ ಲೋಕನಾಥ್‌ ಬೆಹೆರಾ ಜಂಟಿ ತನಿಖಾ ತಂಡವನ್ನು ರಚಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಮಾರ್ಟಿನ್‌ನನ್ನು ಬಂಧಿಸಿ, ವಿಚಾರಣೆ ಗೊಳಪಡಿಸಿದ್ದಾರೆ. ಮಾರ್ಟಿನ್‌ನ ಫೋನ್‌ ಕರೆ ಪರಿಶೀಲಿಸಿದಾಗ ದುಷ್ಕೃತ್ಯ­ವೆಸಗಿರುವ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ವಿಡಿಯೋ, ಫೋಟೋ ಸೆರೆ: ಒಂದೂ ವರೆ ತಾಸು ಕಿರುಕುಳದ ವೇಳೆ ನಟಿಯ ವಿಡಿಯೋ ರೆಕಾರ್ಡ್‌ ಮಾಡಿರುವ ದುಷ್ಕರ್ಮಿಗಳು, ಕೆಲವು ಫೋಟೋ ಗಳನ್ನೂ ತೆಗೆದುಕೊಂಡಿದ್ದಾರೆ ಎಂದು ಆಕೆ ದೂರಿನಲ್ಲಿ ಹೇಳಿದ್ದಾರೆ. ಬ್ಲ್ಯಾಕ್‌­ಮೇಲ್‌ ಮಾಡುವ ದುರುದ್ದೇಶ­ದಿಂದಲೇ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಕೇರಳದ ಎಲ್ಲ ರಾಜಕೀಯ ಪಕ್ಷಗಳೂ ತೀವ್ರವಾಗಿ ಖಂಡಿಸಿವೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 70ಕ್ಕೂ ಹೆಚ್ಚು ಚಿತ್ರಗಳಲ್ಲಿ ಈಕೆ ನಟಿಸಿದ್ದಾರೆ. 

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.