ಮಣಿಪುರದಲ್ಲಿ ಬಹುಮತ ಗೆದ್ದ ಬಿಜೆಪಿ ಸರಕಾರ
Team Udayavani, Mar 21, 2017, 3:50 AM IST
ಇಂಫಾ: ಪಂಚರಾಜ್ಯ ಚುನಾವಣೆಯಲ್ಲಿ ಮಣಿಪುರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರ ಲಾಭ ಪಡೆದುಕೊಂಡು ಸರಕಾರ ರಚಿಸಿದ ಬಿಜೆಪಿ, ಸೋಮವಾರ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿತು.
ಸಿಎಂ ಬಿರೇನ್ ಸಿಂಗ್ ಸರಕಾರಕ್ಕೆ ಟಿಎಂಸಿ ಶಾಸಕ ಬೆಂಬಲ ನೀಡಿದ್ದಾರೆ. 60 ಸದಸ್ಯರನ್ನು ಹೊಂದಿರುವ ವಿಧಾನಸಭೆಯಲ್ಲಿ 21 ಸಂಖ್ಯಾಬಲ ಹೊಂದಿರುವ ಬಿಜೆಪಿಗೆ ನಾಗಾ ಪೀಪಲ್ಸ್ ಫ್ರಂಟ್ (ಎನ್ಪಿಎಫ್)ನ ನಾಲ್ವರು ಶಾಸಕರು, ನ್ಯಾಷನಲ್ ಪೀಪಲ್ಸ್ ಪಕ್ಷ (ಎನ್ಪಿಪಿ)ದ ನಾಲ್ವರು ಶಾಸಕರು, ಲೋಕಜನಶಕ್ತಿ ಪಕ್ಷ ಮತ್ತು ಸ್ವತಂತ್ರ ಸದಸ್ಯ ಅಸಾಬ್ ಉದ್ದೀನ್ ಹಾಗೂ ಕಾಂಗ್ರೆಸ್ನ ಓರ್ವ ಸದಸ್ಯರು ಬಿರೇನ್ ಸಿಂಗ್ಗೆ ಬೆಂಬಲ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಶಾಸಕ ಟಿ.ರೊಬಿಂದೊ ಸಿಂಗ್ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಪಕ್ಷದ ನಾಯಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಇನ್ನೊಂದೆಡೆ, ಮಣಿಪುರದಲ್ಲಿನ ಆರ್ಥಿಕ ದಿಗ್ಬಂಧನ ರವಿವಾರ ತಡರಾತ್ರಿ ಮುಕ್ತಾಯವಾಗಿದ್ದು, ಯುನೈಟೆಡ್ ನಾಗಾ ಕೌನ್ಸಿಲ್ನ ಇಬ್ಬರು ಪ್ರಮುಖ ನಾಯಕರನ್ನು ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ