ಅಪರಾಧಿ ರಾಜಕಾರಣಿಗಳಿಗೆ ಜೀವಮಾನ ನಿಷೇಧ ?
Team Udayavani, Mar 21, 2017, 3:50 AM IST
ಹೊಸದಿಲ್ಲಿ: ಕ್ರಿಮಿನಲ್ ಅಪರಾಧಗಳಲ್ಲಿ ಭಾಗಿಯಾಗಿ ದೋಷಿ ಎಂದು ಸಾಬೀತಾದ ವ್ಯಕ್ತಿಗಳಿಗೆ ಜೀವನ ಪರ್ಯಂತ ಚುನಾವಣೆಯಲ್ಲಿ ಸ್ಪರ್ಧಿಸಲು ಹಾಗೂ ರಾಜಕೀಯ ಪಕ್ಷ ಸ್ಥಾಪಿಸಲು ಅವಕಾಶ ನೀಡಬಾರದು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಗೆ ಸುಪ್ರೀಂ ಕೋರ್ಟ್ ಬೆಂಬಲ ಸೂಚಿಸಿದೆ.
ಅಪರಾಧ ಎಸಗಿದ ರಾಜಕಾರಣಿ ಗಳಿಗೆ ಜೀವಿತಾವಧಿ ನಿಷೇಧ ಹೇರಬೇಕು ಎಂದು ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸುಪ್ರೀಂ ಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಇದಕ್ಕೆ ಸುಪ್ರೀಂ ಮಾತ್ರವಲ್ಲದೆ ಚುನಾವಣಾ ಆಯೋಗವೂ ಬೆಂಬಲ ಸೂಚಿಸಿದೆ. ಪಿಐಎಲ್ ಅನ್ನು ನಾವು ಬೆಂಬ ಲಿಸುತ್ತೇವೆ ಎಂದು ಆಯೋಗವು ಸೋಮವಾರ ಅಫಿದವಿತ್ ಸಲ್ಲಿಸಿದೆ.
ಕಳಂಕಿತ ರಾಜಕಾರಣಿಗಳಿಗೆ ಪ್ರಸ್ತುತ 6 ವರ್ಷಗಳ ನಿಷೇಧವಷ್ಟೇ ಇದೆ. ಇದನ್ನು ರದ್ದು ಮಾಡಿ, ತಮ್ಮ ಜೀವಿತಾವಧಿಯಲ್ಲಿ ಯಾವತ್ತೂ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು. ಜತೆಗೆ, ರಾಜಕಾರಣಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದೂ ಆಯೋಗವು ಅಫಿದವಿತ್ನಲ್ಲಿ ಕೋರಿದೆ.
ಉಪಾಧ್ಯಾಯ ಮಾತ್ರವಲ್ಲದೆ, ಮಾಜಿ ಮುಖ್ಯ ಚುನಾವಣಾ ಆಯುಕ್ತ ಜೆ.ಎಂ. ಲಿಂಗೊ ಹಾಗೂ “ಪಬ್ಲಿಕ್ ಇಂಟರೆಸ್ಟ್ ಫೌಂಡೇಷನ್’ ಹೆಸರಿನ ಎನ್ಜಿಒ ಕೂಡ ಇಂಥದ್ದೇ ಪಿಐಎಲ್ ಅನ್ನು ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ