ದಿಲ್ಲಿ ಸಿಎಂಗೆ ಮಾನದ ಉರುಳು

Team Udayavani, Mar 26, 2017, 3:50 AM IST

25-PTI-6.jpg

ಹೊಸದಿಲ್ಲಿ: ಡಿಡಿಸಿಎ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ, ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಅವರು ದಿಲ್ಲಿಯ ಪಟಿಯಾಲಾ ಹೌಸ್‌ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಪ್ರಕರಣವನ್ನು ಪರಿಗಣಿಸಿರುವ ನ್ಯಾಯಾಲಯವು ಶನಿವಾರ ಅರವಿಂದ ಕೇಜ್ರಿವಾಲ್‌ ಸೇರಿದಂತೆ 6 ಮಂದಿ ಆಪ್‌ ನಾಯಕರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದೆ. ಹೀಗಾಗಿ, ಇವರೆಲ್ಲರೂ ಕ್ರಿಮಿನಲ್‌ ಮಾನಹಾನಿ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗಿದೆ. ನ್ಯಾಯಾಲಯದ ಕೊಠಡಿಯಲ್ಲಿ ನಡೆದ ಹಲವು ನಾಟಕೀಯ ಬೆಳವಣಿಗೆಗಳ ಬಳಿಕ ಕೋರ್ಟ್‌ ತನ್ನ ನಿರ್ಧಾರ ಪ್ರಕಟಿಸಿದೆ.

ಕೋರ್ಟ್‌ ಕಲಾಪ ಆರಂಭವಾದೊಡನೆ, ಸಚಿವ ಅರುಣ್‌ ಜೇಟ್ಲಿ ಅವರು ಗೈರಾಗಿರುವ ಕುರಿತು ಎರಡೂ ಕಡೆಯ ನ್ಯಾಯವಾದಿಗಳ ನಡುವೆ ಭಾರೀ ವಾಗ್ವಾದ ನಡೆಯಿತು. ಇದೇ ವೇಳೆ, ವಕೀಲರೊಬ್ಬರು ಮತ್ತೂಬ್ಬ ನ್ಯಾಯವಾದಿಗೆ ಕೋರ್ಟ್‌ ಕೊಠಡಿಯೊಳಗೇ ಬೆದರಿಕೆ ಹಾಕಿದ ಘಟನೆಯೂ ನಡೆಯಿತು. ಕೂಡಲೇ ಆರೋಪಿ ಸ್ಥಾನದಲ್ಲಿದ್ದ ಕೇಜ್ರಿವಾಲ್‌ ಹಾಗೂ ಇತರೆ ಆಪ್‌ ನಾಯಕರು, ಕಳೆದ ವರ್ಷದ ಜೆಎನ್‌ಯು ದೇಶದ್ರೋಹ ಪ್ರಕರಣದ ವೇಳೆ ಕರಿಕೋಟು ಧರಿಸಿದ್ದವರು ನಡೆಸಿದ್ದ ಗಲಾಟೆ ಬಗ್ಗೆ ಪ್ರಸ್ತಾಪಿಸಿ, “ನ‌ಮಗೆ ಗಂಭೀರ ಬೆದರಿಕೆಯಿದೆ’ ಎಂದು ಅಲವತ್ತು ಕೊಂಡರು. ಈ ಹಿನ್ನೆಲೆಯಲ್ಲಿ ಕೇಸಿಗೆ ಸಂಬಂಧಪಟ್ಟವರನ್ನು ಹೊರತುಪಡಿಸಿ ಕೊಠಡಿಯಲ್ಲಿದ್ದ ಎಲ್ಲರನ್ನೂ ಹೊರಗೆ ಹೋಗುವಂತೆ ಚೀಫ್ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸುಮಿತ್‌ ದಾಸ್‌ ಸೂಚಿಸಿದರು. ಬಳಿಕ ವಿಚಾರಣೆ ಮುಂದುವರಿಸಿದರು.

ಆರೋಪ ನಿಗದಿ: ಈ ವೇಳೆ, ಕೇಜ್ರಿವಾಲ್‌ ಸೇರಿದಂತೆ ಆರೋಪಿಗಳು “ನಾವು ತಪ್ಪಿತಸ್ಥರಲ್ಲ’ ಎಂದೇ ವಾದಿಸಿದ್ದು, ವಿಚಾರಣೆ ಎದುರಿಸಲು ಸಿದ್ಧ ಎಂದು ಹೇಳಿದ ಹಿನ್ನೆಲೆಯಲ್ಲಿ ನ್ಯಾಯಾಲಯವು, ಈ 6 ಮಂದಿಯ ವಿರುದ್ಧ ಆರೋಪ ನಿಗದಿ ಮಾಡಿತು. ಜತೆಗೆ, ವಿಚಾರಣೆ ಯನ್ನು ಮೇ 20ಕ್ಕೆ ಮುಂದೂಡಿತು. ಇತ್ತೀಚೆ ಗಷ್ಟೇ ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ರಾಮ್‌ ಜೇಠ್ಮಲಾನಿ ಅವರು ವಕೀಲರೂ ಆಗಿರುವ ಸಚಿವ ಜೇಟ್ಲಿಗೆ 52 ಪ್ರಶ್ನೆಗಳನ್ನು ಹಾಕಿದ್ದರು. ಇಬ್ಬರು ನ್ಯಾಯ ವಾದಿಗಳು ಮುಖಾಮುಖೀಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಯಾರ್ಯಾರ ವಿರುದ್ಧ ಕೇಸು?: ಆಪ್‌ ನಾಯಕ ರಾದ ಅರವಿಂದ ಕೇಜ್ರಿವಾಲ್‌, ಕುಮಾರ್‌ ವಿಶ್ವಾಸ್‌, ಸಂಜಯ್‌ ಸಿಂಗ್‌, ರಾಘವ್‌ ಚಡ್ಡಾ, ಅಶುತೋಷ್‌ ಮತ್ತು ದೀಪಕ್‌ ಬಾಜಪೇಯಿ.

ಏನಿದು ಪ್ರಕರಣ?
ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್‌ ಸಂಸ್ಥೆ(ಡಿಡಿಸಿಎ)ಯ ಹಗರಣದಲ್ಲಿ ಸಚಿವ ಅರುಣ್‌ ಜೇಟ್ಲಿ ಅವರೂ ಭಾಗಿಯಾಗಿ ದ್ದಾರೆ ಎನ್ನುವುದು ಆಪ್‌ ನಾಯಕರ ಆರೋಪವಾಗಿತ್ತು. 2000 ಮತ್ತು 2013ರ ಅವಧಿಯಲ್ಲಿ ಸಚಿವ ಜೇಟ್ಲಿ ಅವರೇ ಡಿಡಿಸಿಎ ನಿರ್ದೇಶಕರಾ ಗಿದ್ದರು. ಈ ಸಮಯದಲ್ಲಿ ಬೇನಾಮಿ ಕಂಪನಿಗಳ ಮೂಲಕ ಕ್ರಿಕೆಟ್‌ ಸಂಸ್ಥೆಯ ಹಣವನ್ನು ದೋಚಲಾಗಿದೆ ಎಂದು ಕೇಜ್ರಿವಾಲ್‌ ಆರೋಪಿಸಿದ್ದರು. ಆದರೆ, ರಾಜಕೀಯ ಲಾಭ ಗಳಿಸಲು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾ ಗಿದ್ದು, ಇದರಿಂದ ನನ್ನ ಘನತೆಗೆ ಭಾರೀ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿ ಜೇಟ್ಲಿ ಅವರು ಕೋರ್ಟ್‌ ಮೆಟ್ಟಿಲೇರಿ ದ್ದರು. ಜತೆಗೆ, 10 ಕೋಟಿ ಪರಿಹಾರ ಕೋರಿ ದಿಲ್ಲಿ ಹೈಕೋರ್ಟ್‌ನಲ್ಲಿ ಸಿವಿಲ್‌ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.