ಜಿಎಸ್ಟಿ ಪೂರಕ ಮಸೂದೆ ಮಂಡನೆ


Team Udayavani, Mar 28, 2017, 11:29 AM IST

GST-Bill-600.jpg

ಹೊಸದಿಲ್ಲಿ: ಬಹುನಿರೀಕ್ಷಿತ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ನೀತಿ ಜಾರಿಗೆ ಕೇಂದ್ರ ಸರಕಾರ ಹಾಕಿಕೊಂಡಿರುವ ಜುಲೈ 1ರ ಗಡುವು ಸಮೀಪಿಸುತ್ತಿರುವ ನಡುವೆಯೇ ವಿತ್ತ ಸಚಿವ ಅರುಣ್‌ ಜೇಟ್ಲಿ, ಜಿಎಸ್‌ಟಿಗೆ ಸಂಬಂಧಿಸಿದ ನಾಲ್ಕು ಮಸೂದೆಗಳನ್ನು ಲೋಕಸಭೆಯಲ್ಲಿ ಸೋಮವಾರ ಮಂಡಿಸಿದ್ದಾರೆ. ಮಾ.29ರಿಂದ ಈ ಬಗ್ಗೆ ಚರ್ಚೆ ಆರಂಭವಾಗಲಿದೆ. ಆದರೆ ದಿನದ ಕಾರ್ಯಕಲಾಪದಲ್ಲಿ ಈ ವಿಷಯ ಸೇರ್ಪಡೆಯಾಗಿರಲಿಲ್ಲ ಎಂಬ ವಿಷಯ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ. ಜಿಎಸ್‌ಟಿ ಮಸೂದೆ ಮಂಡಿಸುವ ಆಡಳಿತ ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡ ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ಎಸ್‌.ಎಸ್‌.ಅಹ್ಲುವಾಲಿಯಾ, “ಈ ಮಾಹಿತಿಯನ್ನು ಹಿಂದಿನ ರಾತ್ರಿಯೇ ವೆಬ್‌ಸೈಟ್‌ನಲ್ಲಿ ಹಾಕಲಾಗಿತ್ತು,” ಎಂದಾಗ, “ಸರಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಳು ಮಧ್ಯರಾತ್ರಿ ಅಪ್‌ಲೋಟ್‌ ಆಗುತ್ತವೆ ಎಂಬ ನಿರೀಕ್ಷೆ ಇರಲಿಲ್ಲ,” ಎಂದು ಕೆಳಮನೆಯ ಪ್ರತಿಕ್ಷಗಳ ಸದಸ್ಯರು ವ್ಯಂಗ್ಯವಾಡಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸೆಪ್ಟೆಂಬರ್‌ 15ರ ನಂತರ ಪರೋಕ್ಷ ತೆರಿಗೆ ಸಂಗ್ರಹಿಸುವ ಅಧಿಕಾರ ಕಳೆದುಕೊಳ್ಳುವ ಕಾರಣ, ಪ್ರಸಕ್ತ ಅಧಿವೇಶನದಲ್ಲೇ ಜಿಎಸ್‌ಟಿ ಮಸೂದೆಗೆ ಲೋಕಸಭೆಯ ಒಪ್ಪಿಗೆ ಪಡೆಯಬೇಕಿದೆ ಎಂಬ ಅಂಶವನ್ನು ಸಚಿವ ಜೇಟ್ಲಿ ಸದಸ್ಯರ ಗಮನಕ್ಕೆ ತಂದರು. ಸರಕು ಮತ್ತು ಸೇವೆಗಳ ತೆರಿಗೆಗೆ ಸಂಬಂಧಿಸಿದ ‘ಕೇಂದ್ರ ಜಿಎಸ್‌ಟಿ ಮಸೂದೆ’, ‘ಸಮಗ್ರ ಜಿಎಸ್‌ಟಿ’, “ಕೇಂದ್ರಾಡಳಿತ ಪ್ರದೇಶಗಳ ಜಿಎಸ್‌ಟಿ’ ಮತ್ತು ‘ಪರಿಹಾರ ಕಾನೂನು ಮಸೂದೆ’ಗಳನ್ನು ಸಚಿವ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.

ಗರಿಷ್ಠ ತೆರಿಗೆ ಶೇ.40!
ಜಿಎಸ್‌ಟಿ ಅನ್ವಯ ಗರಿಷ್ಠ ಶೇ.40ರಷ್ಟು ತೆರಿಗೆ ದರ ನಿಗದಿಯಾಗಿರುವುದನ್ನು ಸೋಮವಾರ ಮಂಡನೆಯಾದ ಜಿಎಸ್‌ಟಿ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಆರ್ಥಿಕ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾತ್ರ ಇಷ್ಟು ಪ್ರಮಾಣದ ತೆರಿಗೆ ವಿಧಿಸಬಹುದು ಎಂಬ ಉಲ್ಲೇಖವಿದೆ. ಇದರೊಂದಿಗೆ ಸರಕು ಮತ್ತು ಸೇವೆಗಳಿಗೆ ಅನುಗುಣವಾಗಿ ಸೇ.5, ಶೇ.12, ಶೇ,18 ಮತ್ತು ಗರಿಷ್ಠ ಶೇ.28ರಷ್ಟು ತೆರಿಗೆ ವಿಧಿಸಲು ಜಿಎಸ್‌ಟಿ ಸಮಿತಿ ಸಮ್ಮತಿಸಿದೆ. ಹಾಗೇ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ತೆರಿಗೆ ದರ ಬದಲಾಗಲಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.