2 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
Team Udayavani, Apr 23, 2017, 3:45 AM IST
ಪಟ್ನಾ: ಎರಡು ವರ್ಷದ ಬಾಲಕ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಎಂದು 35 ವರ್ಷದ ಮಹಿಳೆ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಎಫ್ಐಆರ್ ದಾಖಲಿಸಿ, ಆರೋಪಿಗೆ ಶರಣಾಗುವಂತೆ ಸೂಚಿಸಿದ್ದು, ಇದರಿಂದ ಬೆಚ್ಚಿಬಿದ್ದ ಎರಡು ವರ್ಷ ವಯಸ್ಸಿನ ಆರೋಪಿ, ಹಲವು ದಿನಗಳಿಂದ ನಿದ್ದೆಯನ್ನೇ ಮಾಡಿಲ್ಲ!
ಅಸಾಧ್ಯವಾದರೂ ನೀವಿದನ್ನು ನಂಬಲೇಬೇಕು. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಬೇಲಾ ಬೈಜು ಗ್ರಾಮದ ಮಹಿಳೆ, “2 ವರ್ಷದ ಪುಟ್ಟ ದಲಿತ ಹುಡುಗನೊಬ್ಬ, ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಚಿನ್ನದ ಸರ ಕದ್ದೊಯ್ದಿದ್ದಾನೆ,’ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಆದರೆ ಅಸಲಿ ಕೇಸೇ ಬೇರೆ. ಈಗ ದೂರು ನೀಡಿರುವ ಮಹಿಳೆಯ ಪತಿ, ಈ 2 ವರ್ಷದ ಬಾಲಕನ ಅಜ್ಜನ ಮೇಲೆ ಹಲ್ಲೆ ನಡೆಸಿದ್ದು, ವೃದ್ಧನ ತಲೆಗೆ ಗಂಭೀರ ಪೆಟ್ಟುಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಈ ಕೇಸಿನಿಂದ ಪತಿಯನ್ನು ಬಚಾವ್ ಮಾಡಲು ಸಂಚು ಮಾಡಿದ ಮಹಿಳೆ ಎರಡು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಕೇಸು ದಾಖಲಿಸಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ