Updated at Tue,30th May, 2017 5:25PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಫೆ. 18: ಬಂಟರವಾಣಿ ಪ್ರತಿಭಾ ಸ್ಪರ್ಧೆ,ರಾತ್ರಿ ಶಾಲೆಗಳ ವಾರ್ಷಿಕೋತ್ಸವ

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮುಖವಾಣಿ ಬಂಟರವಾಣಿ ಹಾಗೂ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಬಂಟರವಾಣಿ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ ಅವರ ನೇತೃತ್ವದಲ್ಲಿ ಬಂಟರವಾಗಿ ಅಂತರ್‌ಶಾಲಾ ಮತ್ತು ಕಾಲೇಜು ಪ್ರತಿಭಾ ಸ್ಪರ್ಧೆ ಹಾಗೂ ಸಂಘದ ರಾತ್ರಿ ಶಾಲೆಗಳಾದ ಕರ್ನಾಟಕ ಧರ್ಮಾರ್ಥ ರಾತ್ರಿಶಾಲೆ ಘಾಟ್ಕೊàಪರ್‌ ಮತ್ತು ನಿತ್ಯಾನಂದ ಕನ್ನಡ ಧರ್ಮಾರ್ಥ ರಾತ್ರಿ ಶಾಲೆ ವರ್ಲಿ ಇದರ ವಾರ್ಷಿಕೋತ್ಸವ ಸಂಭ್ರಮವು ಫೆ. 18 ರಂದು ಅಪರಾಹ್ನ 3 ರಿಂದ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜರಗಲಿದೆ.

ಸಂಜೆ ನಡೆಯಲಿರುವ ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ, ಉದ್ಯಮಿ ಭವಾನಿ ಶಿಪ್ಪಿಂಗ್‌ ಸರ್ವಿಸಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಡಿ. ಶೆಟ್ಟಿ, ಉದ್ಯಮಿ ಬಂಟರ ಸಂಘದ ಎಸ್‌. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆ ಪೊವಾಯಿ ಕಾರ್ಯಾಧ್ಯಕ್ಷ ಜಯರಾಮ ಎನ್‌. ಶೆಟ್ಟಿ ಅವರು ಆಗಮಿಸಲಿದ್ದಾರೆ.

ವಿಶೇಷ ಆಕರ್ಷಣೆಯಾಗಿ ತಾರಕ್‌ ಮೆಹ್ತಾ ಕಾ ಉಲ್ಟಾ ಚಶೆ¾ ಧಾರವಾಹಿಯ ನಟ್ಟುಕಾಕಾ ಯಾನೆ ಘನಶ್ಯಾಮ್‌ ನಾಯಕ್‌, ಬಾಗಾ ಹಾಗೂ ತರಮ್‌ ಯಾನೆ ತನ್ಮಯ್‌ ವೆಕಾರಿಯಾ ಅವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಘದ ಮಹಿಳಾ ವಿಭಾಗದ, ಯುವ ವಿಭಾಗ, ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳ ಸದಸ್ಯರಿಗಾಗಿ ಸಮೂಹ ಗಾಯನ ಸ್ಪರ್ಧೆ ನಡೆಯಲಿದೆ.

ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಬಂಟರವಾಣಿ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಅಪ್ಪಣ್ಣ ಎಂ. ಶೆಟ್ಟಿ, ಸಂಘದ ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಬಂಟರವಾಣಿಯ ಸಂಪಾದಕ ಪ್ರೇಮನಾಥ ಶೆಟ್ಟಿ ಮುಂಡ್ಕೂರು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಕಾರ್ನಾಡ್‌, ಸಂಘದ ಜೊತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ್‌ ಸಮಿತಿಯ ಕೋಶಾಧಿಕಾರಿ ಸಿಎ ರಮೇಶ್‌ ಶೆಟ್ಟಿ, ಸಂಘದ ಜೊತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್‌ ವಿ. ಶೆಟ್ಟಿ, ರಾತ್ರಿಶಾಲೆಯ ಮೇಲ್ವಿಚಾರಕ ಸಂಜೀವ ಎಂ. ಶೆಟ್ಟಿ, ಬಂಟರವಾಣಿಯ ಸಂಪಾದಕ ಮಂಡಳಿ, ಸಲಹಾ ಸಮಿತಿಯ ಸದಸ್ಯರ ನೇತೃತ್ವದಲ್ಲಿ ಸಮಾರಂಭವು ಜರಗಲಿದ್ದು, ತುಳು-ಕನ್ನಡಿಗರು ಪಾಲ್ಗೊಂಡು ಸಹಕರಿಸುವಂತೆ ಸಂಘದ ಪ್ರಕಟನೆ ತಿಳಿಸಿದೆ.


More News of your Interest

Trending videos

Back to Top