Updated at Sun,23rd Apr, 2017 11:16PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಬಂಟರ ಸಂಘದಲ್ಲಿ  ಸಾಂಪ್ರದಾಯಿಕ ಶೈಲಿಯಲ್ಲಿ  ಬಿಸುಪರ್ಬ ಆಚರಣೆ

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ, ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಅವರ ನೇತೃತ್ವದಲ್ಲಿ ಬಿಸುಪರ್ಬ ಆಚರಣೆಯು ಎ. 14ರಂದು ಬೆಳಗ್ಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಜರಗಿತು.

ಬಿಸುಪರ್ಬದ ಪ್ರಥಮ ನಡೆ ಎಂಬಂತೆ ಶ್ರೀ ಮಹಾವಿಷ್ಣು ದೇವರ ಸನ್ನಿಧಾನದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳೊಂದಿಗೆ ನಡೆಯಿತು. ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಲತಾ ಪ್ರಭಾಕರ ಶೆಟ್ಟಿ ದಂಪತಿ, ರವೀಂದ್ರನಾಥ ಎಂ. ಭಂಡಾರಿ ಸಹಿತ ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್‌. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಕುತ್ಯಾರ್‌, ಜತೆ ಕೋಶಾಧಿಕಾರಿ ಮಹೇಶ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್‌ ವಿ. ಶೆಟ್ಟಿ, ಸಂಘದ ವಿವಿಧ ಉಪಸಮಿತಿಗಳ ಕಾರ್ಯಾಧ್ಯಕ್ಷರು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ 

ಸದಸ್ಯರು ಮಂದಿರದಿಂದ ಆಕರ್ಷಕ ಮೆರವಣಿಗೆಯಲ್ಲಿ ಚೆಂಡೆ, ಕೊಂಬು, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ಬಿರುಕಣಿಯನ್ನು ಹೊತ್ತು ಬಂಟರ ಭವನದ ವೇದಿಕೆ ಪ್ರವೇಶಿಸಿದರು.

ಬಳಿಕ ಅಲ್ಲಿ ದೈವದ ಮುಂದೆ ಕಣಿ ಇರಿಸಿ ಪ್ರಾರ್ಥಿಸಲಾಯಿತು. ನವೀನ್‌ ಶೆಟ್ಟಿ ಇನ್ನಬಾಳಿಕೆ ದೈವಕ್ಕೆ ನುಡಿಸೇಸೆ ಸಲ್ಲಿಸಿದರು. ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ನಂದಾವರ ಎ. ಸಿ. ಭಂಡಾರಿ, ಡಾ| ಪಿ. ವಿ. ಶೆಟ್ಟಿ  ಅವರು ಭತ್ತದ ಕಳಸೆಗೆಯಲ್ಲಿ ಕಲ್ಪವೃಕ್ಷದ ಹಿಂಗಾರ ಅರಳಿಸಿ ಬಿಸುಪರ್ಬಕ್ಕೆ ಚಾಲನೆ ನೀಡಿದರು.

ಅನಂತರ ಬಂಟ ಧ್ವಜಾರೋಹಣಗೈದು ಬಂಟ ದಿನಾಚರಣೆಯನ್ನು ಉದ್ಘಾಟಿಸಿದರು. ಬಂಟಗೀತೆಯನ್ನು ಮೊಳಗಿಸಿ ಗೌರವ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಪ್ರಭಾಕರ ಎಲ್‌. ಶೆಟ್ಟಿ ಅವರು ಮಾತನಾಡಿ ಶುಭ ಹಾರೈಸಿದರು. ಬಂಟರವಾಣಿ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಅವರು ಕಾರ್ಯಕ್ರಮ ನಿರ್ವಹಿಸಿದರು. ಸುಶ್ಮಿತಾ ಚಂದ್ರಹಾಸ ರೈ ಗಣೇಶ ವಂದನೆಗೈದರು. ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳು, ಮಹಿಳಾ ವಿಭಾಗ, ಯುವ ವಿಭಾಗದವರಿಂದ ವಿವಿಧ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

ಚಿತ್ರ-ವರದಿ: ಪ್ರೇಮನಾಥ್‌ಶೆಟ್ಟಿ ಮುಂಡ್ಕೂರು


More News of your Interest

Trending videos

Back to Top