ತುಳು ಸಂಘ ಬರೋಡ ಇದರ ಮೂವತ್ತನೇ ವಾರ್ಷಿಕ ಮಹಾಸಭೆ

Team Udayavani, Aug 23, 2017, 1:53 PM IST

22-cdd.jpg

ಬರೋಡ: ತುಳು ಸಂಘ ಬರೋಡ ಇದರ ಮೂವತ್ತರ ಸಂಭ್ರಮದ ಅಂಗವಾಗಿ ವಿಶೇಷ ಕಾರ್ಯಕ್ರಮವು ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯ  ದಿನದಂದು ನಡೆಯಿತು. ಮಕ್ಕಳಿಗಾಗಿ ವೈವಿಧ್ಯಮಯ ಕಾರ್ಯಕ್ರಮ ಹಾಗೂ ವಾರ್ಷಿಕ ಮಹಾಸಭೆಯು ಇದೇ ಸಂದರ್ಭದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ತುಳು ಸಂಘ ಬರೋಡ ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ವಹಿಸಿದ್ದರು. ದಯಾನಂದ ಬೋಂಟ್ರಾ, ಎಸ್ಕೆ ಹಳೆಯಂಗಡಿ, ವಾಸು ಪೂಜಾರಿ, ಬಾಲಕೃಷ್ಣ ಶೆಟ್ಟಿ, ಸರಳಾ ಬಿ. ಶೆಟ್ಟಿ ಹಾಗೂ ಸಂಸ್ಥೆಯ ಹಿರಿಯ ಗಣ್ಯರು ಉಪಸ್ಥಿತರಿದ್ದರು. ರಾಷ್ಟ್ರಗೀತೆಯೊಂದಿಗೆ ವಾರ್ಷಿಕ ಮಹಾಸಭೆಯು ನಡೆಯಿತು.

ಸಂಸ್ಥೆಯ ಪದಾಧಿಕಾರಿಗಳು ವಾರ್ಷಿಕ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿ ಸರ್ವಾನುಮತದಿಂದ ಮಂಜೂರು ಗೊಳಿಸಿಕೊಂಡರು.  ಮುಂದಿನ ಎರಡು ವರ್ಷಗಳಿಗಾಗಿ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸ ಲಾಯಿತು. ಅಧ್ಯಕ್ಷರಾಗಿ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ರವಿ ಸಾಲ್ಯಾನ್‌, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ವಾಸು ಸುವರ್ಣ ಮತ್ತು ಬಾಲಕೃಷ್ಣ ರೈ, ಜತೆ ಕೋಶಾಧಿಕಾರಿಯಾಗಿ ಪ್ರಶಾಂತ್‌ ಹೆಗ್ಡೆ ಅವರನ್ನು  ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ದಯಾನಂದ ಬೋಂಟ್ರಾ ಹಾಗೂ ಹಿರಿಯರಾದ ಎಸ್ಕೆ ಹಳೆಯಂಗಡಿ ಮತ್ತು ಎಸ್‌. ಜಯರಾಮ ಶೆಟ್ಟಿ ಅವರನ್ನು ಪ್ರಧಾನ ಸಲಹೆಗಾರರು ಮತ್ತು ಸಂಯೋಜಕರನ್ನಾಗಿ ನೇಮಿಸಲಾಯಿತು.

ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಡಾ| ಶರ್ಮಿಳಾ ಜೈನ್‌, ಉಪಾಧ್ಯಕ್ಷೆಯರಾಗಿ ಸವಿತಾ ಸೋಮನಾಥ್‌ ಪೂಜಾರಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುಳಾ ಗೌಡ ಅವರು ಆಯ್ಕೆಯಾದರು.

ಅಧ್ಯಕ್ಷ ಶಶಿಧರ ಬಿ. ಶೆಟ್ಟಿ ಬೆಳ್ತಂಗಡಿ ಅವರು ಮಾತನಾಡಿ, ಕಳೆದ ಮೂರು ದಶಕಗಳ ತುಳು ಸಂಘದ ಸಾಧನೆಗಳು ನಾಡು, ಸೇರಿದಂತೆ ದೇಶ-ವಿದೇಶಗಳ ತುಳು-ಕನ್ನಡಿಗ ಬಾಂಧವರ ಮನಸೂರೆಗೊಂಡಿದೆ. ಒಳ್ಳೆಯ ಸಾಧನೆಗಳಿಗೆ ಎಲ್ಲರ ಪ್ರೋತ್ಸಾಹ, ಸಹಕಾರ ಸದಾಯಿರಬೇಕು. ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ತಾಯಿ ನುಡಿಯ ಸೇವೆಯನ್ನು ಮಾಡುವ ಸಂಕಲ್ಪ ನಮ್ಮದು ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಜಿನರಾಜ್‌ ಪೂಜಾರಿ ನೂತನ ಕಾರ್ಯಕಾರಿ ಸಮಿತಿಯನ್ನು ಘೋಷಿಸಿರು. ಮಕ್ಕಳಿಗಾಗಿ ತುಳು ಭಾಷಣ ಸ್ಪರ್ಧೆ, ದೇಶಭಕ್ತಿ, ಛದ್ಮವೇಷ ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪದಾಧಿಕಾರಿಗಳು ಬಹುಮಾನ ವಿತರಿಸಿ ಶುಭ ಹಾರೈಸಿದರು. ವಂದನಾ ಆರ್‌. ಸಾಲ್ಯಾನ್‌ ಮತ್ತು ತಂಡದವರಿಂದ ಮಕ್ಕಳ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಸ್ಫರ್ಧೆಗಳ ತೀರ್ಪುಗಾರರಾಗಿ ಶರ್ಮಿಳಾ ಜೈನ್‌, ಮಂಜುಳಾ ಗೌಡ, ಸುನೀತಾ ಪೂಜಾರಿ ಅವರು ಸಹಕರಿಸಿದರು.  

ಟಾಪ್ ನ್ಯೂಸ್

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.